ನ್ಯೂಸ್‌ಕ್ಲಿಕ್ ಪ್ರಕರಣ: 9000 ಪುಟಗಳ ಚಾರ್ಜ್‌ಶೀಟ್; ಟ್ರಂಕ್‌ನಲ್ಲಿ ತಂದ ದೆಹಲಿ ಪೊಲೀಸರು

Date:

ನ್ಯೂಸ್‌ ಪೋರ್ಟಲ್‌ನಲ್ಲಿ ಚೀನಾ ಪರ ಪ್ರಚಾರ ಮಾಡಲು ಹಣ ಪಡೆದಿದ್ದಾರೆ ಎಂದು ಆರೋಪದ ಮೇಲೆ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರನ್ನು ಬಂಧಿಸಲಾಗಿದೆ. ಇದೀಗ, ಅವರ ವಿರುದ್ಧ 9,000 ಪುಟಗಳ ಜಾರ್ಜ್‌ಶೀಟ್‌ ಸಿದ್ದಪಡಿಸಿರುವ ದೆಹಲಿ ಪೊಲೀಸರು, ಚಾರ್ಜ್‌ಶೀಟ್‌ ಪ್ರತಿಯನ್ನು ನ್ಯಾಯಾಲಯಕ್ಕೆ ಟ್ರಂಕ್‌ನಲ್ಲಿ ತಂದಿದ್ದಾರೆ.

ತನಿಖೆಯ ಸಮಯದಲ್ಲಿ ನಡೆಸಿದ ವಿವಿಧ ದಾಳಿಗಳಲ್ಲಿ ಜಪ್ತಿ ಮಾಡಲಾದ 480 ಎಲೆಕ್ಟ್ರಾನಿಕ್ ಸಾಧನಗಳ ಬಗ್ಗೆ ಚಾರ್ಜ್ ಶೀಟ್‌ನಲ್ಲಿ ಮಾಹಿತಿ ನೀಡಲಾಗಿದೆ ಎಂದು ವರದಿಯಾಗಿದೆ. ಜಾರ್ಜ್‌ ಶೀಟ್‌ಅನ್ನು ಪಟಿಯಾಲ ಹೌಸ್ ಕೋರ್ಟ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್ ಕೌರ್ ಅವರ ಪೀಠವು ಯಾವಾಗ ವಿಚಾರಣೆಗೆ ಕೈಗೆತ್ತಿಕೊಳ್ಳುತ್ತದೆ ಎಂಬುದನ್ನು ನ್ಯಾಯಾಲಯವು ನಿರ್ಧರಿಸಬೇಕಿದೆ.

ದೆಹಲಿ ಪೊಲೀಸರು ಪುರ್ಕಾಯಸ್ಥ ಅವರನ್ನು ಪ್ರಕರಣದಲ್ಲಿ ಪ್ರಾಥಮಿಕ ಆರೋಪಿ ಎಂದು ಗುರುತಿಸಿದ್ದಾರೆ. ಇದೇ ಪ್ರಕರಣದಲ್ಲಿ ನ್ಯೂಸ್‌ಕ್ಲಿಕ್‌ನ ಎಚ್‌ಆರ್ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಮಿತ್ ಚಕ್ರವರ್ತಿ ಅವರು 2023ರ ಡಿಸೆಂಬರ್‌ನಲ್ಲಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದರು. ಬಳಿಕ, ಅವರನ್ನು 2024ರ ಜನವರಿಯಲ್ಲಿ ಸರ್ಕಾರಿ ಸಾಕ್ಷಿಯಾಗಿ ಸಾಕ್ಷಿ ಹೇಳಲು ನ್ಯಾಯಾಲಯ ಅನುಮತಿ ನೀಡಿದೆ. ಇದೀಗ, ಚಾರ್ಜ್‌ಶೀಟ್‌ನಲ್ಲಿ ಅವರನ್ನು ಸಾಕ್ಷಿಯಾಗಿ ಹೆಸರಿಸಲಾಗಿದೆ.

2019ರ ಲೋಕಸಭೆ ಚುನಾವಣೆಗೆ ಅಡ್ಡಿಪಡಿಸುವ ಮೂಲಕ ರಾಷ್ಟ್ರದ ಸ್ಥಿರತೆಯನ್ನು ಹಾಳುಮಾಡಲು ಪುರ್ಕಾಯಸ್ಥ ಹಣವನ್ನು ಸ್ವೀಕರಿಸಿದ್ದಾರೆ ಎಂದು ಚಾರ್ಜ್ ಶೀಟ್‌ನಲ್ಲಿ ಆರೋಪಿಸಲಾಗಿದೆ ಎಂದು ತಿಳಿದುಬಂದಿದೆ.

2023ರ ಆಗಸ್ಟ್ 17ರಂದು ದೆಹಲಿ ಪೊಲೀಸರು ದಾಖಲಿಸಿದ ಎಫ್‌ಐಆರ್‌ ಪ್ರಕಾರ, ಚೀನಾದಿಂದ ರಹಸ್ಯವಾಗಿ ನ್ಯೂಸ್‌ಕ್ಲಿಕ್ ಹಣ ಪಡೆದಿದೆ. ಚೀನಾ ಸರ್ಕಾರದ ನೀತಿಗಳು ಮತ್ತು ಯೋಜನೆಗಳನ್ನು ಸಮರ್ಥಿಸುವ ಮತ್ತು ಪ್ರಚಾರ ಮಾಡುವುದು ಹಾಗೂ ಭಾರತೀಯ ನೀತಿಗಳು ಮತ್ತು ಯೋಜನೆಗಳನ್ನು ಉದ್ದೇಶಪೂರ್ವಕವಾಗಿ ಟೀಕಿಸುವ ಉದ್ದೇಶದಿಂದ ಹಣ ಪಡೆಯಲಾಗಿದೆ ಎಂದು ಆರೋಪಿಸಲಾಗಿದೆ.

2023ರ ಅಕ್ಟೋಬರ್ 13ರಂದು ಪುರ್ಕಾಯಸ್ಥ ಮತ್ತು ಚಕ್ರವರ್ತಿ ಅವರ ಬಂಧನವನ್ನು ಪ್ರಶ್ನಿಸಿದ್ದ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಹೈಕೋರ್ಟ್‌ ತಿರಸ್ಕರಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾರಿತಪ್ಪಿಸುವ ಜಾಹೀರಾತು ಪ್ರಕರಣ: ಮತ್ತೆ ಪತ್ರಿಕೆಗಳಲ್ಲಿ ಕ್ಷಮೆಯಾಚನೆ ಪ್ರಕಟಿಸಿದ ರಾಮ್‌ದೇವ್

ಪತಂಜಲಿ ಆಯುರ್ವೇದ್ ಲಿಮಿಟೆಡ್ ವಿರುದ್ಧ ದಾರಿತಪ್ಪಿಸುವ ಜಾಹೀರಾತು ಪ್ರಕರಣ ದಾಖಲಾಗಿದ್ದು, ಸುಪ್ರೀಂ...

ʼಈ ದಿನʼ ಸಮೀಕ್ಷೆ | ರೈತರಿಗೆ ಮೋದಿ ಮಹಾ ಮೋಸ; ‘ಬೆಂಬಲ ಬೆಲೆ’ ಕೊಡೋರಿಗೆ ನಮ್ಮ ಬೆಂಬಲ ಎಂದ ಮತದಾರರು!

ಭಾರತವು ಜಾಗತಿಕ ಆರ್ಥಿಕತೆಯಲ್ಲಿ 5ನೇ ಸ್ಥಾನದಲ್ಲಿದೆ. ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ...

ಗಡ್ಕರಿ ಚುನಾವಣಾ ಅಭಿಯಾನಕ್ಕೆ ವಿದ್ಯಾರ್ಥಿಗಳ ಬಳಕೆ; ಶಾಲೆಯ ವಿರುದ್ಧ ಕ್ರಮಕ್ಕೆ ಇಸಿ ಆದೇಶ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಚುನಾವಣಾ ಪ್ರಚಾರದಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡ...

ನನ್ನ ತಾಯಿಯ ಮಂಗಳಸೂತ್ರ ದೇಶಕ್ಕಾಗಿ ಬಲಿದಾನವಾಗಿದೆ: ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಮಂಗಳಸೂತ್ರವನ್ನು ಕಿತ್ತುಕೊಳ್ಳಲಿದೆ ಎಂದು ವಿವಾದಾತ್ಮಕ ಹೇಳಿಕೆ...