ಯುಎಪಿಎ ಅಡಿ ಬಂಧನ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನ್ಯೂಸ್‌ಕ್ಲಿಕ್ ಸಂಸ್ಥಾಪಕ

Date:

ಯುಎಪಿಎ(ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆ) ಅಡಿ ಬಂಧಿಸಿ ಪೊಲೀಸ್‌ ವಶಕ್ಕೆ ನೀಡಿರುವ ಕ್ರಮವನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್‌ ನಿರಾಕರಿಸಿರುವುದರಿಂದ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

- Advertisement -

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಪುರಕಾಯಸ್ಥ ಮತ್ತು ಚಕ್ರವರ್ತಿ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಅರ್ಜಿಗಳನ್ನು ಗಮನದಲ್ಲಿಟ್ಟುಕೊಂಡು, ಈ ಪ್ರಕರಣವು ತುರ್ತು ವಿಚಾರಣೆಯ ಅಗತ್ಯವಿದೆ ಮತ್ತು ಪ್ರಕರಣದ ದಾಖಲೆಗಳನ್ನು ನ್ಯಾಯಾಲಯದಲ್ಲಿ ಸಲ್ಲಿಸಲು ಸೂಚಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಇದು ನ್ಯೂಸ್‌ಕ್ಲಿಕ್ ವಿಷಯವಾಗಿದೆ. ಪತ್ರಕರ್ತರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇಲ್ಲಿ ಆರೋಪಿಗಳಲ್ಲಿ ಒಬ್ಬರು 75 ವರ್ಷದ ವ್ಯಕ್ತಿ” ಎಂದು ವಕೀಲರಾದ ಸಿಬಲ್ ಹೇಳಿದರು. ನಂತರ ವಿಚಾರಣಾ ದಿನಾಂಕದ ಕುರಿತು ನಿರ್ಧರಿಸುವುದಾಗಿ ಸಿಬಲ್‌ ಅವರಿಗೆ ಪೀಠವು ತಿಳಿಸಿತು.

ಈ ಸುದ್ದಿ ಓದಿದ್ದೀರಾ? ‘ಮೇಕ್ ಮೈ ಟ್ರಿಪ್’ ಜಾಹೀರಾತು ಕ್ರೀಡಾ ಮನೋಭಾವದ ವಿರುದ್ಧ; ಕೋಮುವಾದವನ್ನು ಕೆದಕುವ ಕುಚೇಷ್ಟೆ

ಅಕ್ಟೋಬರ್ 13 ರಂದು, ದೆಹಲಿ ಹೈಕೋರ್ಟ್ ಪೀಠವು ಪ್ರಕರಣದಲ್ಲಿ ಪುರ್ಕಾಯಸ್ಥ ಮತ್ತು ಚಕ್ರವರ್ತಿ ಅವರ ಬಂಧನ ಮತ್ತು ಪೊಲೀಸ್‌ ವಶಕ್ಕೆ ನೀಡಿರುವ ಕ್ರಮವನ್ನು ರದ್ದುಗೊಳಿಸುವ ಮನವಿಯನ್ನು ವಜಾಗೊಳಿಸಿತು. ಅಕ್ಟೋಬರ್ 3 ರಂದು ದೆಹಲಿ ಪೊಲೀಸರ ವಿಶೇಷ ಘಟಕ ಇಬ್ಬರನ್ನೂ ಬಂಧಿಸಿ, ಇಬ್ಬರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ವಹಿಸಲಾಗಿತ್ತು.

ಪೊಲೀಸ್ ಕಸ್ಟಡಿಯನ್ನು ಪ್ರಶ್ನಿಸಿ ಪುರ್ಕಾಯಸ್ಥ ಹಾಗೂ ಅಮಿತ್ ಚಕ್ರವರ್ತಿ ಅವರು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿ ತಕ್ಷಣ ಬಿಡುಗಡೆಗೆ ಕೋರಿದ್ದರು.

ಪುರ್ಕಾಯಸ್ಥ ಹಾಗೂ ಚಕ್ರವರ್ತಿ ಅವರ ವಾದವನ್ನು ಇತ್ತೀಚೆಗೆ ತಳ್ಳಿ ಹಾಕಿದ್ದ ದೆಹಲಿ ಹೈಕೋರ್ಟ್, ಕಠಿಣ ಅಕ್ರಮ ಚಟುವಟಿಕೆಗಳ ನಿಗ್ರಹ ಕಾಯ್ದೆ ಅಡಿ ಯಾವುದೇ ವ್ಯಕ್ತಿಯನ್ನು ವಶಕ್ಕೆ ಪಡೆದು ಬಂಧಿಸುವಾಗ, ಅಂಥವರಿಗೆ ಪೊಲೀಸರು ಲಿಖಿತ ವಿವರಣೆ ನೀಡಬೇಕಿಲ್ಲ ಎಂದು ಅಭಿಪ್ರಾಯ ಪಟ್ಟಿತ್ತು.

ಚೀನಾ ಪರ ಪ್ರಚಾರ ಮಾಡಲು ಹಣ ಪಡೆದ ಆರೋಪದಲ್ಲಿ ನ್ಯೂಸ್‌ಕ್ಲಿಕ್ ಸಂಸ್ಥೆಯ ಇಬ್ಬರ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...