ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಬಂಧನ ‘ಅಮಾನ್ಯ’; ಬಿಡುಗಡೆಗೆ ಸುಪ್ರೀಂ ಆದೇಶ

Date:

ನ್ಯೂಸ್‌ಕ್ಲಿಕ್ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರನ್ನು ದೆಹಲಿ ಪೊಲೀಸರು ಭಯೋತ್ಪಾದನಾ ವಿರೋಧಿ ಕಾನೂನಿನ (ಯುಎಪಿಎ) ಅಡಿಯಲ್ಲಿ ಬಂಧಿಸಿರುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್‌ ಘೋಷಿಸಿದೆ. ಅವರನ್ನು ಬಿಡುಗಡೆ ಮಾಡುವಂತೆ ಪೊಲೀಸರಿಗೆ ಆದೇಶಿಸಿದೆ.

- Advertisement -

ತಮ್ಮ ಬಂಧನವನ್ನು ಅನೂರ್ಜಿತಗೊಳಿಸುವಂತೆ ಕೋರಿ ಪುರ್ಕಾಯಸ್ಥ ಅವರು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಬುಧವಾರ, ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು, ‘ಪುರಕಾಯಸ್ಥ ಅವರ ಬಂಧನ ಸಂಬಂಧ ಆಧಾರಗಳನ್ನು ಸಲ್ಲಿಸಿಲ್ಲ’ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಬಂಧನದ ಆಧಾರಗಳನ್ನು ಒದಗಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಇದು ಬಂಧನವನ್ನು ದುರ್ಬಲಗೊಳಿಸುತ್ತದೆ. ಮೇಲ್ಮನವಿದಾರರು ಕಸ್ಟಡಿಯಿಂದ ಬಿಡುಗಡೆಗೆ ಅರ್ಹನಾಗಿದ್ದಾರೆ. ಅವರನ್ನು ಕಸ್ಟಡಿಗೆ ನೀಡುವ ಆದೇಶವು ಅಮಾನ್ಯವಾಗಿದೆ” ಎಂದು ನ್ಯಾಯಮೂರ್ತಿ ಮೆಹ್ತಾ ಹೇಳಿದ್ದಾರೆ.

ಚೀನಾ ಪರ ಪ್ರಚಾರ ಮಾಡಲು ನ್ಯೂಸ್‌ಕ್ಲಿಕ್ ಚೀನಾದಿಂದ ಹಣ ಪಡೆದಿದೆ ಎಂದು ಅರೋಪಿಸಲಾಗಿತ್ತು. ಆರೋಪ ಕೇಳಿಬಂದ ಕೆಲ ದಿನಗಳಲ್ಲಿಯೇ ಯುಎಪಿಎ ಕಾಯಿದೆಯಡಿ ಪುರಕಾಯಸ್ಥ ಅವರನ್ನು 2023ರ ಅಕ್ಟೋಬರ್ 3 ರಂದು ಬಂಧಿಸಲಾಗಿತ್ತು.

ಪ್ರಕರಣ ಸಂಬಂಧ ಮಾರ್ಚ್‌ನಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಅದರಲ್ಲಿ, ದೆಹಲಿ ಪೊಲೀಸರು “ನ್ಯೂಸ್‌ಕ್ಲಿಕ್ ಮತ್ತು ಪುರಕಾಯಸ್ಥ ಭಯೋತ್ಪಾದಕರಿಗೆ ನೆರವು ನೀಡಿದ್ದಾರೆ ಮತ್ತು ಚೀನಾದ ಪರ ಪ್ರಚಾರವನ್ನು ಉತ್ತೇಜಿಸುತ್ತಿದ್ದಾರೆ” ಎಂದು ಆರೋಪಿಸಿದ್ದರು.

ಅಲ್ಲದೆ, ಪುರಕಾಯಸ್ಥ ಅವರನ್ನು ಬಂಧಿಸಿದ ದಿನವೇ ನ್ಯೂಸ್‌ಕ್ಲಿಕ್‌ನ ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಲಾಗಿತ್ತು. ಆದರೆ, ಅವರು ಪ್ರಕರಣದಲ್ಲಿ ಸಾಕ್ಷಿಯಾಗಲು ಒಪ್ಪಿಕೊಂಡ ಬಳಿಕ, ಅವರನ್ನು ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...