ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

Date:

Advertisements

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು (NIA) ಮೂರು ರಾಜ್ಯಗಳಲ್ಲಿ ನಡೆಸಿದ ದಾಳಿಯ ಬಳಿಕ, ಸಂಚು ರೂಪಿಸಿದ್ದ ಪ್ರಮುಖ ಓರ್ವ ಆರೋಪಿಯನ್ನು ಬಂಧಿಸಿದೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಎನ್‌ಐಎ, “ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ಭೇದಿಸಿದ ನಂತರ ದಾಳಿಯ ಸಂಚುಕೋರ ಮುಝಮ್ಮಿಲ್ ಶರೀಫ್‌ನನ್ನು ಬಂಧಿಸಿದೆ” ಎಂದು ತಿಳಿಸಿದೆ.

ಸ್ಫೋಟ ನಡೆಸಿದ ಪ್ರಮುಖ ಆರೋಪಿ ಮುಸ್ಸಾವಿರ್ ಶಜೀಬ್ ಹುಸೇನ್‌ ಮತ್ತು ಸಂಚುಕೋರ ಅಬ್ದುಲ್ ಮತೀನ್‌ನನ್ನು ತನಿಖೆಯಿಂದ ಪತ್ತೆ ಹಚ್ಚಲಾಗಿತ್ತು. ಎನ್‌ಐಎಗೆ ಬೇಕಾಗಿರುವ ಈ ಆರೋಪಿಗಳು ಈಗ ಪರಾರಿಯಾಗಿದ್ದಾರೆ ಎಂದು ಎನ್‌ಐಎ ತಿಳಿಸಿದೆ.

Advertisements

ಬಾಂಬರ್‌ ಮುಸ್ಸಾವಿರ್ ಶಜೀಬ್ ಹುಸೇನ್‌ಗೆ ಮುಝಮ್ಮಿಲ್ ಶರೀಫ್‌ ಲಾಜಿಸ್ಟಿಕ್‌ ಸಹಕಾರ ನೀಡಿದ್ದ ಎಂದು ಎನ್‌ಐಎ ಹೇಳಿದೆ. ಈ ಮೂವರು ಆರೋಪಿಗಳ ಮನೆಗಳು ಹಾಗೂ ಇತರ ಶಂಕಿತರ ಮನೆಗಳು ಮತ್ತು ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ. ತಪಾಸಣೆಯ ವೇಳೆ ನಗದು ಸಹಿತ ವಿವಿಧ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisements
Bose Military School

ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಮತ್ತು ಸ್ಫೋಟದ ಹಿಂದಿನ ದೊಡ್ಡ ಪಿತೂರಿಯನ್ನು ಬಯಲಿಗೆಳೆಯುವ ಪ್ರಯತ್ನಗಳು ನಡೆಯುತ್ತಿದೆ ಎಂದು ಎನ್‌ಐಎ ತನ್ನ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡದಲ್ಲಿ ಭಾರೀ ಮಳೆ; ರುದ್ರಪ್ರಯಾಗ, ಕೇದಾರನಾಥದಲ್ಲಿ ಆತಂಕ

ಉತ್ತರಾಖಂಡದಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ರುದ್ರಪ್ರಯಾಗದಲ್ಲಿ ಅಲಕನಂದಾ...

ಛತ್ತೀಸ್‌ಗಢ | ಭೀಕರ ಅಪಘಾತ: ಮೂವರ ಸಾವು, ಆರು ಮಂದಿಗೆ ಗಾಯ

ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿ,...

ಎರಡು ದಶಕಗಳ ನಂತರ ‘ಮರಾಠಿ ವಿಜಯ’ ರ್‍ಯಾಲಿ ನೆಪದಲ್ಲಿ ಒಂದಾದ ರಾಜ್, ಉದ್ಧವ್ ಠಾಕ್ರೆ

ಸುಮಾರು ಎರಡು ದಶಕಗಳಿಂದ ಪ್ರತ್ಯೇಕವಾಗಿ ಸಂಘಟನೆ ಕಟ್ಟುತ್ತಾ ಬಂದಿದ್ದ ಠಾಕ್ರೆ ಸಹೋದರರಾದ...

‘ಜಾತ್ಯತೀತತೆ, ಸಮಾಜವಾದವೇ ನಮ್ಮ ಸಂವಿಧಾನದ ತಳಹದಿ’ ಎಂದಿದ್ದರು ಅಂಬೇಡ್ಕರ್; ಇಲ್ಲಿದೆ ಪುರಾವೆ!

ಇಂಗ್ಲಿಷ್ ಕಾದಂಬರಿಕಾರರಾದ ಮುಲ್ಕ್ ರಾಜ್ ಆನಂದ್‍ರವರು, 1950ರ ಮೇ ತಿಂಗಳ ಒಂದು...

Download Eedina App Android / iOS

X