ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ನಿಷೇಧಿತ ಐಸಿಸ್ ಭಯೋತ್ಪಾದಕ ಸಂಘಟನೆಯ ಸ್ಲೀಪರ್ ಸೆಲ್ ಸದಸ್ಯರಾಗಿ ಗುರುತಿಸಲ್ಪಟ್ಟ ಇಬ್ಬರು ಉಗ್ರರನ್ನು ಶನಿವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಇಬ್ಬರು ಉಗ್ರರೂ ಕೂಡಾ ಪರಾರಿಯಾಗಿದ್ದರು ಎಂದು ವರದಿಯಾಗಿದೆ.
ಮಹಾರಾಷ್ಟ್ರದ ಪುಣೆಯಲ್ಲಿ 2023ರಲ್ಲಿ ನಡೆದ ಸುಧಾರಿತ ಸ್ಫೋಟಕ ಸಾಧನಗಳ (ಐಇಡಿ) ತಯಾರಿಕೆ ಮತ್ತು ಪರೀಕ್ಷೆಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿವೆ ಎಂದು ಎನ್ಐಎ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನು ಓದಿದ್ದೀರಾ? ದೆಹಲಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ 13ರ ಬಾಲಕ ಪೊಲೀಸ್ ವಶಕ್ಕೆ
“ಅಬ್ದುಲ್ಲಾ ಫಯಾಜ್ ಶೇಖ್ ಡಯಾಪರ್‌ವಾಲಾ ಮತ್ತು ತಲ್ಹಾ ಖಾನ್ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಇಂಡೋನೇಷ್ಯಾದ ಜಕಾರ್ತಾದಿಂದ ಭಾರತಕ್ಕೆ ಮರಳುತ್ತಿದ್ದಾಗ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ತಡೆಯಲಾಗಿದೆ. ನಂತರ ಎನ್‌ಐಎ ಅವರನ್ನು ವಶಕ್ಕೆ ಪಡೆದುಕೊಂಡು ಬಂಧಿಸಿದೆ” ಎಂದು ವರದಿಯಾಗಿದೆ.
NIA Arrests 2 Absconders in ISIS Pune Sleeper Module Case from Mumbai Airport pic.twitter.com/B6q5iVOcTD
— NIA India (@NIA_India) May 17, 2025
ಇನ್ನು ಈ ಇಬ್ಬರು ಆರೋಪಿಗಳ ಬಗ್ಗೆ ಸುಳಿವು ನೀಡಿದರೆ ತಲಾ ಮೂರು ಲಕ್ಷ ರೂಪಾಯಿ ಬಹುಮಾನವನ್ನು ನೀಡಲಾಗುವುದು ಎಂದು ಘೋಷಿಸಿತ್ತು. ಇಬ್ಬರೂ ವ್ಯಕ್ತಿಗಳು ಎರಡು ವರ್ಷಗಳಿಗೂ ಹೆಚ್ಚು ಕಾಲದಿಂದ ತಲೆಮರೆಸಿಕೊಂಡಿದ್ದರು. ಮುಂಬೈನ ಎನ್ಐಎ ವಿಶೇಷ ನ್ಯಾಯಾಲಯವು ಅವರಿಬ್ಬರಿಗೂ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.
ಪುಣೆ ಐಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸ್ಲೀಪರ್ ಮಾಡ್ಯೂಲ್‌ನ ಎಂಟು ಸದಸ್ಯರನ್ನು ಬಂಧಿಸಲಾಗಿದೆ.
