ಪುಣೆ ಐಇಡಿ ಪ್ರಕರಣ | ಮುಂಬೈ ವಿಮಾನ ನಿಲ್ದಾಣದಲ್ಲಿ ಐಸಿಸ್ ಸ್ಲೀಪರ್ ಸೆಲ್‌ನ ಇಬ್ಬರು ಉಗ್ರರ ಬಂಧನ

Date:

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ನಿಷೇಧಿತ ಐಸಿಸ್ ಭಯೋತ್ಪಾದಕ ಸಂಘಟನೆಯ ಸ್ಲೀಪರ್ ಸೆಲ್ ಸದಸ್ಯರಾಗಿ ಗುರುತಿಸಲ್ಪಟ್ಟ ಇಬ್ಬರು ಉಗ್ರರನ್ನು ಶನಿವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಇಬ್ಬರು ಉಗ್ರರೂ ಕೂಡಾ ಪರಾರಿಯಾಗಿದ್ದರು ಎಂದು ವರದಿಯಾಗಿದೆ.

- Advertisement -

ಮಹಾರಾಷ್ಟ್ರದ ಪುಣೆಯಲ್ಲಿ 2023ರಲ್ಲಿ ನಡೆದ ಸುಧಾರಿತ ಸ್ಫೋಟಕ ಸಾಧನಗಳ (ಐಇಡಿ) ತಯಾರಿಕೆ ಮತ್ತು ಪರೀಕ್ಷೆಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿವೆ ಎಂದು ಎನ್ಐಎ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ದೆಹಲಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ 13ರ ಬಾಲಕ ಪೊಲೀಸ್ ವಶಕ್ಕೆ

“ಅಬ್ದುಲ್ಲಾ ಫಯಾಜ್ ಶೇಖ್ ಡಯಾಪರ್‌ವಾಲಾ ಮತ್ತು ತಲ್ಹಾ ಖಾನ್ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಇಂಡೋನೇಷ್ಯಾದ ಜಕಾರ್ತಾದಿಂದ ಭಾರತಕ್ಕೆ ಮರಳುತ್ತಿದ್ದಾಗ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ತಡೆಯಲಾಗಿದೆ. ನಂತರ ಎನ್‌ಐಎ ಅವರನ್ನು ವಶಕ್ಕೆ ಪಡೆದುಕೊಂಡು ಬಂಧಿಸಿದೆ” ಎಂದು ವರದಿಯಾಗಿದೆ.

ಇನ್ನು ಈ ಇಬ್ಬರು ಆರೋಪಿಗಳ ಬಗ್ಗೆ ಸುಳಿವು ನೀಡಿದರೆ ತಲಾ ಮೂರು ಲಕ್ಷ ರೂಪಾಯಿ ಬಹುಮಾನವನ್ನು ನೀಡಲಾಗುವುದು ಎಂದು ಘೋಷಿಸಿತ್ತು. ಇಬ್ಬರೂ ವ್ಯಕ್ತಿಗಳು ಎರಡು ವರ್ಷಗಳಿಗೂ ಹೆಚ್ಚು ಕಾಲದಿಂದ ತಲೆಮರೆಸಿಕೊಂಡಿದ್ದರು. ಮುಂಬೈನ ಎನ್ಐಎ ವಿಶೇಷ ನ್ಯಾಯಾಲಯವು ಅವರಿಬ್ಬರಿಗೂ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

ಪುಣೆ ಐಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸ್ಲೀಪರ್ ಮಾಡ್ಯೂಲ್‌ನ ಎಂಟು ಸದಸ್ಯರನ್ನು ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...