ಶೈಕ್ಷಣಿಕ ಉದ್ದೇಶಗಳಿಗಾಗಿ ವಿದೇಶ ಪ್ರವಾಸ ಕೈಗೊಳ್ಳಲು ಅನುಮತಿ ಕೋರಿ ದಲಿತ ಹಕ್ಕುಗಳ ಕಾರ್ಯಕರ್ತ ಡಾ. ಆನಂದ್ ತೇಲ್ತುಂಬ್ಡೆ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿರೋಧ ವ್ಯಕ್ತಪಡಿಸಿದೆ.
ಹೈಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಡಾ. ತೇಲ್ತುಂಬ್ಡೆ ಅವರು ಭೀಮಾ ಕೋರೆಗಾಂವ್ ಪ್ರಕರಣದ ವಿಚಾರಣೆಯಿಂದ ತಪ್ಪಿಸಿಕೊಂಡು ವಿದೇಶಗಳಿಗೆ ಪರಾರಿಯಾಗಿ ಆಶ್ರಯ ಪಡೆಯಬಹುದು ಎಂದು ತಿಳಿಸಿದೆ.
2018 ರ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಡಾ. ತೇಲ್ತುಂಬ್ಡೆ ಅವರು 2025 ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಶೈಕ್ಷಣಿಕ ಕಾರ್ಯಗಳಿಗಾಗಿ ವಿದೇಶ ಪ್ರವಾಸ ಮಾಡಲು ಅನುಮತಿ ಕೋರಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆಮ್‌ಸ್ಟರ್‌ಡ್ಯಾಮ್ ವಿವಿ, ಲೈಡೆನ್ ವಿವಿ ಮತ್ತು ನಾಟಿಂಗ್‌ಹ್ಯಾಮ್ ಟ್ರೆಂಟ್ ವಿಶ್ವವಿದ್ಯಾಲಯ ಸೇರಿದಂತೆ ಹಲವು ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಅವರನ್ನು ಉಪನ್ಯಾಸಗಳನ್ನು ನೀಡಲು ಮತ್ತು ಶೈಕ್ಷಣಿಕ ವಿಚಾರ ಸಂಕಿರಣಗಳನ್ನು ನಡೆಸಲು ಆಹ್ವಾನಿಸಿವೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಲೆ ಏರಿಸಿ ಆರಿಸಿದವರನ್ನೇ ಮೂರ್ಖರನ್ನಾಗಿಸುತ್ತಿರುವ ಸರ್ಕಾರಗಳು
ತೇಲ್ತುಂಬ್ಡೆ ಅವರು ಡಾ. ಬಿ ಆರ್ ಅಂಬೇಡ್ಕರ್, ದಲಿತರ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಈ ಅಂತಾರಾಷ್ಟ್ರೀಯ ಶೈಕ್ಷಣಿಕ ಭೇಟಿಗಳಿಗೆ ಅನುಕೂಲವಾಗುವಂತೆ ತಮ್ಮ ಪಾಸ್‌ಪೋರ್ಟ್ ಬಿಡುಗಡೆ ಮಾಡುವಂತೆ ಕೋರ್ಟ್‌ಗೆ ವಿನಂತಿಸಿದ್ದಾರೆ.
ಡಾ. ತೇಲ್ತುಂಬ್ಡೆ ಅವರು ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದಲ್ಲಿ ಎನ್‌ಐಎ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದೆ. ಆ ಸಂಘಟನೆಯ ಸಕ್ರಿಯ ಮತ್ತು ಹಿರಿಯ ಸದಸ್ಯ ಎಂದು ಪರಿಗಣಿಸಲಾಗಿದೆ. ಅವರಿಗೆ ವಿದೇಶ ಪ್ರವಾಸಕ್ಕೆ ಅನುಮತಿ ನೀಡುವುದರಿಂದ ಅವರು ತಪ್ಪಿಸಿಕೊಳ್ಳಲು ಅನುಕೂಲವಾಗಬಹುದು ಮತ್ತು ವಿಚಾರಣಾ ಪ್ರಕ್ರಿಯೆಯನ್ನು ದುರ್ಬಲಗೊಳಿಸಬಹುದು ಎಂದು ಸಂಸ್ಥೆ ಹೈಕೋರ್ಟ್‌ಗೆ ತಿಳಿಸಿದೆ.