ಮಿಜೋರಾಂ ಹೋಟೆಲ್‌ಗೆ ಎನ್‌ಐಎ ದಾಳಿ: ಮಣಿಪುರದ ಇಬ್ಬರು ಕುಕಿ ವಿದ್ಯಾರ್ಥಿ ನಾಯಕರ ಬಂಧನ

Date:

ಮಣಿಪುರ ಮೂಲದ ಇಬ್ಬರು ಕುಕಿ ವಿದ್ಯಾರ್ಥಿ ನಾಯಕರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಿಜೋರಾಂನ ರಾಜಧಾನಿ ಐಜ್ವಾಲ್‌ನಲ್ಲಿ ಬಂಧಿಸಿದೆ. ಐಜ್ವಾಲ್‌ನ ಖಾಟ್ಲಾ ಪ್ರದೇಶದಲ್ಲಿರುವ ಹೋಟೆಲ್‌ ಒಂದರ ಮೇಲೆ ಗುರುವಾರ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳು ಈ ಇಬ್ಬರು ವಿದ್ಯಾರ್ಥಿ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.

- Advertisement -

ಈ ಕಾರ್ಯಾಚರಣೆಗೆ ಕೆಲವೇ ಗಂಟೆಗಳ ಮೊದಲು, ಎನ್‌ಐಎ ತಂಡವು ಅಸ್ಸಾಂ ರೈಫಲ್ಸ್ ಪಡೆಗಳ ಸಹಯೋಗದೊಂದಿಗೆ ಐಜ್ವಾಲ್‌ನ ಹೊರವಲಯದಲ್ಲಿ ‘ಯುನೈಟೆಡ್ ಕುಕಿ ನ್ಯಾಷನಲ್ ಆರ್ಮಿ’ (UKNA) ಮುಖ್ಯಸ್ಥ ಥಂಗ್ಖೋಮಾಂಗ್ ಹಾವೊಕಿಪ್ ಮತ್ತು ಆತನ ಚಾಲಕನನ್ನು ಬಂಧಿಸಿತ್ತು. ಈ ಬಂಧನದ ಬೆನ್ನಲ್ಲೇ ಕಾರ್ಯಾಚರಣೆ ತೀವ್ರಗೊಳಿಸಿದ ತನಿಖಾ ಸಂಸ್ಥೆ, ಹೋಟೆಲ್‌ನಲ್ಲಿ ತಂಗಿದ್ದ ವಿದ್ಯಾರ್ಥಿ ನಾಯಕರನ್ನೂ ವಶಕ್ಕೆ ತೆಗೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಇದನ್ನೂ ಓದಿ: ಮಣಿಪುರ ಹಿಂಸಾಚಾರ | ಪ್ರತ್ಯೇಕ ರಾಜ್ಯಕ್ಕೆ ಪಟ್ಟು ಹಿಡಿದ ಕುಕಿ ಸಮುದಾಯ

ಬಂಧಿತ ಯುಕೆಎನ್‌ಎ ಮುಖ್ಯಸ್ಥ ಹಾವೊಕಿಪ್ ವಿರುದ್ಧ ಮಣಿಪುರದಲ್ಲಿ ಹಲವು ಅಪರಾಧ ಮತ್ತು ವಿಧ್ವಂಸಕ ಕೃತ್ಯಗಳ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ಇಬ್ಬರು ವಿದ್ಯಾರ್ಥಿ ನಾಯಕರು ಹಾಗೂ ಹಾವೊಕಿಪ್ ಎನ್‌ಐಎ ವಶದಲ್ಲಿದ್ದು, ತನಿಖೆ ಮುಂದುವರಿದಿದೆ. ಆದರೆ, ಬಂಧಿತ ವಿದ್ಯಾರ್ಥಿ ನಾಯಕರ ಮೇಲಿರುವ ನಿರ್ದಿಷ್ಟ ಆರೋಪಗಳ ಕುರಿತು ಎನ್‌ಐಎ ಅಧಿಕಾರಿಗಳು ಇನ್ನು ಅಧಿಕೃತ ವಿವರ ನೀಡಿಲ್ಲ.

Advertisements

ಈ ಕಾರ್ಯಾಚರಣೆಯಲ್ಲಿ ಸಬ್ಸಿಡಿಯರಿ ಇಂಟೆಲಿಜೆನ್ಸ್ ಬ್ಯೂರೋ (ಎಸ್‌ಐಬಿ) ಭಾಗಿಯಾಗಿದೆ ಎಂದು ಮೊದಲು ವರದಿಯಾಗಿತ್ತಾದರೂ, ಎನ್‌ಐಎ ಅಧಿಕಾರಿಗಳು ಅದನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೌಟುಂಬಿಕ ದ್ವೇಷಕ್ಕೆ ಪೋಕ್ಸೊ ಅಸ್ತ್ರವಲ್ಲ: ಸುಳ್ಳು ದೂರುಗಳ ತಡೆಗೆ ಸುಪ್ರೀಂ ದಿಟ್ಟ ಹೆಜ್ಜೆ

ವೈವಾಹಿಕ ವ್ಯಾಜ್ಯಗಳು ಮತ್ತು ಮಕ್ಕಳ ಕಸ್ಟಡಿ (ವಶ) ಪಡೆಯುವ ಕಾನೂನು ಹೋರಾಟಗಳಲ್ಲಿ...

ವಿಜಯಪುರ | ಸಮಾನತೆ ಮಾತು, ಘೋಷಣೆಗೆ ಸೀಮಿತವಾಗದಿರಲಿ: ಪ್ರೊ. ವಿಜಯಾ ಬಿ. ಕೋರಿಶೆಟ್ಟಿ

ಮಹಿಳೆಯರ ಧ್ವನಿಯನ್ನು ನಿರ್ಲಕ್ಷಿಸಿದಾಗ ಅದನ್ನು ಸಮಾಜದ ಗಮನಕ್ಕೆ ತರುವುದು ನಮ್ಮೆಲ್ಲರ ಕರ್ತವ್ಯ....

ಪೋಕ್ಸೊ ಪ್ರಕರಣದಲ್ಲಿ ರಾಜಿಗೆ ಅವಕಾಶವಿಲ್ಲ: ದೆಹಲಿ ಹೈಕೋರ್ಟ್

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ (ಪೋಕ್ಸೊ)ಕ್ಕೆ ಸಂಬಂಧಿಸಿದ, ಪೋಕ್ಸೊ ಕಾಯ್ದೆಯಡಿ ದಾಖಲಾದ...