ನಿತಾರಿ ಹತ್ಯಾಕಾಂಡ: ಹೈಕೋರ್ಟ್‌ನಿಂದ ಸುರೇಂದ್ರ ಕೋಲಿ ಬಿಡುಗಡೆ ಪ್ರಶ್ನಿಸಿದ ಸಿಬಿಐ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

Date:

2006ರಲ್ಲಿ ನಿತಾರಿ ಹತ್ಯಾಕಾಂಡ ಪ್ರಕರಣದಲ್ಲಿ ಅಲಹಾಬಾದ್‌ ಹೈಕೋರ್ಟ್‌ನಿಂದ ಸುರೇಂದ್ರ ಕೋಲಿ ಬಿಡುಗಡೆಯಾಗಿರುವ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

- Advertisement -

ನ್ಯಾಯಮೂರ್ತಿಗಳಾದ ಬಿ ಆರ್‌ ಗವಾಯಿ ಹಾಗೂ ಕೆ ವಿ ವಿಶ್ವನಾಥನ್‌ ಅವರ ಪೀಠ ಸುರೇಂದ್ರ ಕೋಲಿ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಪರಿಗಣಿಸಲು ಒಪ್ಪಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪೀಠವು ಈ ಮೊದಲು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಂತ್ರಸ್ತ ತಂದೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ಒಪ್ಪಿಕೊಂಡಿತ್ತು. ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ಕೂಡ ಅದೇ ಅರ್ಜಿಯ ಜೊತೆಯಲ್ಲಿ ಪರಿಗಣಿಸುವುದಾಗಿ ಪೀಠ ತಿಳಿಸಿದೆ. ಸುರೇಂದ್ರ ಕೋಲಿ ಅಲಹಾಬಾದ್‌ ಹೈಕೋರ್ಟ್‌ನಿಂದ ಬಿಡುಗಡೆಯಾಗಿರುವುದನ್ನು ಪ್ರಶ್ನಿಸಿ ಸಂತ್ರಸ್ತೆಯ ತಂದೆಯಾದ ಪಪ್ಪು ಲಾಲ್‌ ಎಂಬುವವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’

ಪ್ರಮುಖ ಆರೋಪಿಗಳಾದ ಮೊಣಿಂದರ್ ಸಿಂಗ್‌ ಪಂದೇರ್‌ ಹಾಗೂ ಸುರೇಂದ್ರ ಕೋಲಿ ಅವರಿಗೆ ವಿಚಾರಣಾ ನ್ಯಾಯಾಲಯ ಮರಣ ದಂಡನೆ ವಿಧಿಸಿದ ಆದೇಶವನ್ನು ಅಲಹಾಬಾದ್‌ ಹೈಕೋರ್ಟ್ 2023ರ ಅಕ್ಟೋಬರ್‌ನಲ್ಲಿ ರದ್ದುಗೊಳಿಸಿ ಬಿಡುಗಡೆಗೊಳಿಸಿತ್ತು.

ನೋಯ್ಡಾದ ನತಾರಿ ಗ್ರಾಮದಲ್ಲಿ ಇಬ್ಬರು ಆರೋಪಿಗಳು 20ಕ್ಕೂ ಹೆಚ್ಚು ಮಕ್ಕಳನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣದ ಬಗ್ಗೆ ಸಿಬಿಐ ನ್ಯಾಯಾಲಯ 2017ರಲ್ಲಿ ಇಬ್ಬರಿಗೂ ಮರಣದಂಡನೆ ವಿಧಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...