ರಾಜ್ಯಸಭೆಗೆ ನಿತೀಶ್‌ ಕುಮಾರ್‌ ಸ್ಪರ್ಧೆ ಖಚಿತ: ಬಿಹಾರದ ಜನತೆಗೆ ಭಾವುಕ ಪತ್ರ

Date:

ಮುಂಬರುವ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ಬಿಹಾರದ ಜನತೆಗೆ ಸಂದೇಶವೊಂದನ್ನು ರವಾನಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ತಮ್ಮ ಬೆಂಬಲಕ್ಕಾಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಜನರ ವಿಶ್ವಾಸದಿಂದಾಗಿಯೇ ಎರಡು ದಶಕಗಳಿಗೂ ಹೆಚ್ಚು ಕಾಲ ರಾಜ್ಯದ ಸೇವೆ ಮಾಡಲು ತಮಗೆ ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.

- Advertisement -

​ದಾಖಲೆಯ 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇವಲ ನಾಲ್ಕೇ ತಿಂಗಳಲ್ಲಿ ನಿತೀಶ್ ಕುಮಾರ್ ಅವರು ರಾಜ್ಯಸಭೆಯತ್ತ ಮುಖ ಮಾಡಿರುವುದು, ಮುಖ್ಯಮಂತ್ರಿ ಹುದ್ದೆಗೆ ಅವರ ಉತ್ತರಾಧಿಕಾರಿ ಯಾರು ಎಂಬ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

​ಈ ಕುರಿತು ‘ಎಕ್ಸ್’ ಜಾಲತಾಣದಲ್ಲಿ ಹಿಂದಿಯಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಅವರು, “ಎರಡು ದಶಕಗಳಿಗೂ ಹೆಚ್ಚು ಕಾಲ ನೀವು ನನ್ನ ಮೇಲೆ ನಿರಂತರವಾಗಿ ವಿಶ್ವಾಸವಿಟ್ಟು ಬೆಂಬಲ ನೀಡಿದ್ದೀರಿ. ಆ ನಂಬಿಕೆಯ ಬಲದಿಂದಲೇ ನಾವು ಬಿಹಾರ ಮತ್ತು ನಿಮ್ಮೆಲ್ಲರ ಸೇವೆಯನ್ನು ಸಂಪೂರ್ಣ ಸಮರ್ಪಣಾ ಭಾವದಿಂದ ಮಾಡಿದ್ದೇವೆ” ಎಂದು ತಿಳಿಸಿದ್ದಾರೆ.

​ತಮ್ಮ ರಾಜಕೀಯ ಪಯಣವನ್ನು ಮೆಲುಕು ಹಾಕಿರುವ ಜೆಡಿಯು ವರಿಷ್ಠ ನಿತೀಶ್, ಎಲ್ಲಾ ಶಾಸಕಾಂಗ ವೇದಿಕೆಗಳಲ್ಲಿ ಸೇವೆ ಸಲ್ಲಿಸುವ ಮಹದಾಸೆಯನ್ನು ತಾನು ಬಹುಕಾಲದಿಂದ ಹೊಂದಿದ್ದಾಗಿ ಹೇಳಿಕೊಂಡಿದ್ದಾರೆ.

​”ನನ್ನ ಸಂಸದೀಯ ಪಯಣದ ಆರಂಭದಿಂದಲೂ, ಬಿಹಾರ ಶಾಸಕಾಂಗದ ಉಭಯ ಸದನಗಳು ಹಾಗೂ ಸಂಸತ್ತಿನ ಉಭಯ ಸದನಗಳ ಸದಸ್ಯನಾಗುವ ಆಸೆಯನ್ನು ನಾನು ಹೊಂದಿದ್ದೆ. ಆ ಆಶಯಕ್ಕೆ ಅನುಗುಣವಾಗಿ, ಈ ಬಾರಿ ನಡೆಯುತ್ತಿರುವ ಚುನಾವಣೆಯಲ್ಲಿ ರಾಜ್ಯಸಭೆಯ ಸದಸ್ಯನಾಗಲು ಬಯಸುತ್ತಿದ್ದೇನೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಫಿಫಾ ವಿಶ್ವಕಪ್ 2026 | ಯುದ್ಧಗಳ ಕಾರ್ಮೋಡದ ನಡುವೆ ಫುಟ್‌ಬಾಲ್ ಹಬ್ಬಕ್ಕೆ 100 ದಿನಗಳ ಕ್ಷಣಗಣನೆ

​ರಾಜ್ಯಸಭೆ ಪ್ರವೇಶಿಸುವ ತಮ್ಮ ಈ ನಿರ್ಧಾರದಿಂದ ರಾಜ್ಯದ ಬಗೆಗಿನ ತಮ್ಮ ಬದ್ಧತೆ ಕಡಿಮೆಯಾಗುವುದಿಲ್ಲ ಎಂದು ಬೆಂಬಲಿಗರಿಗೆ ಭರವಸೆ ನೀಡಿರುವ ಹಿರಿಯ ರಾಜಕಾರಣಿ, “ನಿಮ್ಮೊಂದಿಗಿನ ನನ್ನ ಬಾಂಧವ್ಯ ಭವಿಷ್ಯದಲ್ಲೂ ಮುಂದುವರಿಯಲಿದೆ ಮತ್ತು ಅಭಿವೃದ್ಧಿ ಹೊಂದಿದ ಬಿಹಾರವನ್ನು ನಿರ್ಮಿಸಲು ನಿಮ್ಮೊಂದಿಗೆ ಸೇರಿ ಕೆಲಸ ಮಾಡುವ ನನ್ನ ಸಂಕಲ್ಪ ಅಚಲವಾಗಿರಲಿದೆ ಎಂದು ನಾನು ಅತ್ಯಂತ ಪ್ರಾಮಾಣಿಕವಾಗಿ ಭರವಸೆ ನೀಡುತ್ತೇನೆ. ರಾಜ್ಯದಲ್ಲಿ ರಚನೆಯಾಗುವ ಹೊಸ ಸರ್ಕಾರಕ್ಕೆ ನನ್ನ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ಇರಲಿದೆ” ಎಂದಿದ್ದಾರೆ.

​ಒಂದು ವೇಳೆ ನಿತೀಶ್ ಕುಮಾರ್ ಅವರು ರಾಜ್ಯಸಭೆಗೆ ಆಯ್ಕೆಯಾದರೆ, ಅದು ಅವರ ಸುದೀರ್ಘ ರಾಜಕೀಯ ಜೀವನದ ಮತ್ತೊಂದು ಮೈಲಿಗಲ್ಲಾಗಲಿದೆ. ಅವರು ಈಗಾಗಲೇ ಬಿಹಾರ ವಿಧಾನಸಭೆ, ಬಿಹಾರ ವಿಧಾನ ಪರಿಷತ್ತು ಹಾಗೂ ಲೋಕಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ರಾಜ್ಯಸಭೆ ಪ್ರವೇಶಿಸುವ ಮೂಲಕ ಬಿಹಾರ ಶಾಸಕಾಂಗದ ಉಭಯ ಸದನಗಳು ಹಾಗೂ ಸಂಸತ್ತಿನ ಉಭಯ ಸದನಗಳು ಸೇರಿದಂತೆ ಒಟ್ಟು ನಾಲ್ಕೂ ಶಾಸಕಾಂಗ ವೇದಿಕೆಗಳಲ್ಲಿ ಕಾರ್ಯನಿರ್ವಹಿಸಿದ ಅಪರೂಪದ ನಾಯಕರ ಸಾಲಿಗೆ ಅವರು ಸೇರ್ಪಡೆಯಾಗಲಿದ್ದಾರೆ.

​ಜೆಡಿಯು ಮೂಲಗಳ ಪ್ರಕಾರ, ಮಾರ್ಚ್ 16ರಂದು ನಿಗದಿಯಾಗಿರುವ ರಾಜ್ಯಸಭಾ ಚುನಾವಣೆ ಮುಗಿಯುವವರೆಗೂ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುವ ನಿರೀಕ್ಷೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ಧರಾಮಯ್ಯ ‘ಸ್ಟಿಂಗ್’ ಪ್ರಕರಣ: ಎಚ್‌ಡಿಕೆ‌ ದೆಹಲಿ ಕಚೇರಿಯ ಸಿಬ್ಬಂದಿ ರಿತೇಶ್ ಬಂಧನ

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಂಬಂಧಿಸಿದ 'ಸ್ಟಿಂಗ್ ಆಪರೇಷನ್' ಪ್ರಕರಣದಲ್ಲಿ ದೆಹಲಿ...

ಭಿನ್ನಮತದ ಹಕ್ಕಿಗೆ ಸಂಚಕಾರ; ಶಾಂತಿ ಬಾಂಡ್‌ಗೆ ಸಹಿ ಹಾಕುವ ಪ್ರಶ್ನೆಯೇ ಇಲ್ಲ ಎಂದ ನೇಹಾ ಬೋರಾ

ದೆಹಲಿ ಹೈಕೋರ್ಟ್‌ನಲ್ಲಿ ರಿಲೀಫ್ ಸಿಗದ ಹಿನ್ನೆಲೆಯಲ್ಲಿ, ದೆಹಲಿ ಪೊಲೀಸರು ವಿಧಿಸಿರುವ 10,000...

ಆಂಧ್ರಪ್ರದೇಶ | ರಸ್ತೆ ಕಾಮಗಾರಿ ವೇಳೆ ಜೆಲಾಟಿನ್ ಸ್ಫೋಟ; ಶಾಲಾ ಶಿಕ್ಷಕಿ ಸೇರಿದಂತೆ ಹಲವರ ಸಾವು

ರಸ್ತೆ ಕಾಮಗಾರಿಗಾಗಿ ಬಳಸಲಾಗುತ್ತಿದ್ದ ಜೆಲಾಟಿನ್ ಸ್ಟಿಕ್‌ಗಳು ಅನಿರೀಕ್ಷಿತವಾಗಿ ಸ್ಫೋಟಗೊಂಡು, ಶಾಲಾ ಶಿಕ್ಷಕಿಯೊಬ್ಬರು...