ಬಿಜೆಪಿ ಬೆಂಬಲದೊಂದಿಗೆ ಜ.28ರಂದು ನಿತೀಶ್ ಕುಮಾರ್ ಮತ್ತೆ ಸಿಎಂ ಆಗಿ ಪ್ರಮಾಣವಚನ!

Date:

ಮೈತ್ರಿ ಪಕ್ಷ ಆರ್‌ಜೆಡಿಯೊಂದಿಗೆ ಬಹುತೇಕ ರಾಜಕೀಯ ಸಂಬಂಧ ಮುರಿದುಕೊಂಡಿರುವ ಜೆಡಿಯು ಅಧ್ಯಕ್ಷ ಹಾಗೂ ಬಿಹಾರ್ ಸಿಎಂ ನಿತೀಶ್ ಕುಮಾರ್ ಜ.28ರಂದು ಬಿಜೆಪಿ ಬೆಂಬಲದೊಂದಿಗೆ ಪುನಃ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement -

ನೂತನ ಸರ್ಕಾರದಲ್ಲಿ ಬಿಹಾರ್ ಬಿಜೆಪಿಯ ಹಿರಿಯ ನಾಯಕ ಸುಶೀಲ್ ಮೋದಿ ಉಪಮುಖ್ಯಮಂತ್ರಿಯಾಗುವ ಸಂಭವವಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸುಶೀಲ್ ಮೋದಿ, ಮುಚ್ಚಿದ ಬಾಗಿಲುಗಳು ತೆರೆಯಬಹುದು. ರಾಜಕೀಯವು ಎಲ್ಲ ಸಾಧ್ಯತೆಗಳ ಆಟ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಮಾಜವಾದಿ ನಾಯಕ ಕರ್ಪೂರಿ ಠಾಕೂರ್‌ ಅವರಿಗೆ ಭಾರತ ರತ್ನ ನೀಡಿದ ವಿಚಾರಕ್ಕೆ ನಿನ್ನೆ(ಜ.26) ಮಿತ್ರ ಪಕ್ಷ ಆರ್‌ಜೆಡಿ ಜೊತೆಗಿನ ಪ್ರಕ್ಷುಬ್ಧತೆ ಉಂಟಾದ ನಂತರ ಕ್ಷಿಪ್ರ ಬೆಳವಣಿಗೆಗಳು ನಡೆದಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಳಿಸಿದ ಶಕ್ತಿಗಳೇ ಕರ್ಪೂರಿಯವರನ್ನು ಅಟ್ಟಕ್ಕೇರಿಸುತ್ತಿರುವ ಅಣಕ

ನಿತೀಶ್ ಕುಮಾರ್ ಕೌಟುಂಬಿಕ ರಾಜಕಾರಣದ ಬಗ್ಗೆ ಮಾತನಾಡಿದ ನಂತರ ಲಾಲು ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಆಚಾರ್ಯ ನಿತೀಶ್ ವಿರುದ್ಧ ಅವಕಾಶವಾದಿ ರಾಜಕಾರಣಿ ಎಂದು ವಿವಾದಾತ್ಮಕ ಟ್ವೀಟ್‌ಗಳನ್ನು ಮಾಡಿ ಅಳಿಸಿ ಹಾಕಿದ್ದರು. ಈ ಘಟನೆಯೆ ಬಿಹಾರದ ರಾಜಕೀಯ ಬದಲಾವಣೆಗೆ ಪ್ರಮುಖ ಕಾರಣವಾಗಿದೆ.

ಈ ನಡುವೆ ಬಿಹಾರದ ರಾಜಕೀಯ ಸ್ಥಿತಿಗತಿಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಕಾಂಗ್ರೆಸ್, ನಿತೀಶ್ ಬಿಜೆಪಿ ಸೇರ್ಪಡೆ ಅಷ್ಟು ಸಲಭವಲ್ಲ ಎಂದು ತಿಳಿಸಿದೆ. ಮೇಲಾಗಿ ವಿಧಾನಸಭಾ ಸ್ಪೀಕರ್ ನಮ್ಮ ಕಡೆ(ಆರ್‌ಜೆಡಿ) ಇದ್ದಾರೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

2020ರಲ್ಲಿ ನಡೆದಿದ್ದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ 75, ಎನ್‌ಡಿಎ 74 ಹಾಗೂ ಜೆಡಿಯು 43 ಸ್ಥಾನ ಗೆದ್ದಿತ್ತು. ಆರಂಭದಲ್ಲಿ ಬಿಜೆಪಿಯೊಂದಿಗೆ ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್ 2022ರಲ್ಲಿ ಆರ್‌ಜೆಡಿಯೊಂದಿಗೆ ಸಖ್ಯ ಬೆಳೆಸಿ ಸರ್ಕಾರ ರಚಿಸಿದ್ದರು. ಈಗ, ಆರ್‌ಜೆಡಿ ಬಿಟ್ಟು, ಬಿಜೆಪಿಯೊಂದಿಗೆ ಸರ್ಕಾರ ರಚಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...