ಏಪ್ರಿಲ್ 10ರಂದು ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಾಧ್ಯತೆ: ಏಪ್ರಿಲ್ 15ರ ನಂತರ ಹೊಸ ಸರ್ಕಾರ

Date:

​ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಏಪ್ರಿಲ್ 10ರಂದು ಈ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ ಎಂದು ಜೆಡಿಯು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ

- Advertisement -

​ಮುಂದಿನ ಮುಖ್ಯಮಂತ್ರಿ ಸ್ಥಾನವು ಬಿಜೆಪಿಗೆ ಒಲಿಯಲಿದೆ ಎಂಬ ಊಹಾಪೋಹಗಳ ನಡುವೆ ಪ್ರತಿಕ್ರಿಯಿಸಿರುವ ಜೆಡಿಯು ನಾಯಕರು, ದೆಹಲಿಯಿಂದ ಹಿಂದಿರುಗಿದ ಒಂದೆರಡು ದಿನಗಳಲ್ಲಿ ನಿತೀಶ್ ಕುಮಾರ್ ರಾಜೀನಾಮೆ ನೀಡಲಿದ್ದಾರೆ. ಆ ನಂತರ ಹೊಸ ಸರ್ಕಾರ ರಚನೆ ಪ್ರಕ್ರಿಯೆಗಳು ಆರಂಭವಾಗಲಿವೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

​​ಏಪ್ರಿಲ್ ಮಧ್ಯಭಾಗದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆಯಿದೆ. “ನಿತೀಶ್ ಕುಮಾರ್ ಅವರು ರಾಜೀನಾಮೆ ನೀಡಿದ ಕೂಡಲೇ ಹೊಸ ಸರ್ಕಾರ ರಚನೆಯ ಪ್ರಕ್ರಿಯೆಗಳು ಶುರುವಾಗಲಿವೆ. ಏಪ್ರಿಲ್ 9ರಂದು ದೆಹಲಿಗೆ ತೆರಳಲಿರುವ ಅವರು, ಏಪ್ರಿಲ್ 11ರಂದು ಹಿಂದಿರುಗುವ ನಿರೀಕ್ಷೆಯಿದೆ. ತಾನು ಮುಂದೇನು ಮಾಡಬೇಕು ಎಂಬುದರ ಬಗ್ಗೆ ನಿತೀಶ್ ಸ್ಪಷ್ಟತೆ ಹೊಂದಿದ್ದಾರೆ ಮತ್ತು ಸಂಪೂರ್ಣ ನಿರಾಳರಾಗಿದ್ದಾರೆ” ಎಂದು ಹೇಳಿದ ಜೆಡಿಯು ನಾಯಕರು, ಉತ್ತರಾಧಿಕಾರಿಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ನಿತೀಶ್ ಕುಮಾರ್ ಅವರ ಈ ಹೊಸ ರಾಜ್ಯಸಭಾ ಪಯಣವು, ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಿ ಅವರ ನಾಲ್ಕನೇ ಅವಧಿಯೊಂದಿಗೆ ಜೊತೆಯಾಗಲಿದೆ. ಕಳೆದ ತಿಂಗಳಷ್ಟೇ ಅವರು ಅವಿರೋಧವಾಗಿ ಈ ಸ್ಥಾನಕ್ಕೆ ಆಯ್ಕೆಯಾಗಿದ್ದರು. ಈ ತಿಂಗಳಾಂತ್ಯದಲ್ಲಿ ಪಾಟ್ನಾದಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಅದರಲ್ಲಿ ನಿತೀಶ್ ಕುಮಾರ್ ಪಕ್ಷದ ಮುಂದಿನ ರೂಪುರೇಷೆಗಳನ್ನು ಹಂಚಿಕೊಳ್ಳಲಿದ್ದಾರೆ. ಪಕ್ಷದಲ್ಲಿ ಸಕ್ರಿಯ ಪಾತ್ರ ವಹಿಸಲು ಕಾಯುತ್ತಿರುವ ಅವರ ಪುತ್ರ ನಿಶಾಂತ್ ಕುಮಾರ್ ಅವರಿಗೂ ಇದು ಅತ್ಯಂತ ಮಹತ್ವದ ಬೆಳವಣಿಗೆಯಾಗಲಿದೆ.

ಇದನ್ನು ಓದಿದ್ದೀರಾ? ಅಸ್ಸಾಂ ಗದ್ದುಗೆಗೆ ಪ್ರಣಾಳಿಕೆಗಳ ಕಸರತ್ತು: ಕಮಲದ ‘ಸಂಕಲ್ಪ ಪತ್ರ’ಕ್ಕೆ ‘ಕೈ’ ಗ್ಯಾರಂಟಿ ಸವಾಲು
​
ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಇದುವರೆಗೆ ಪ್ರತಿನಿಧಿಸದ ಏಕೈಕ ಸದನವಾದ ರಾಜ್ಯಸಭೆಗೆ ಪ್ರವೇಶಿಸಲು ನಿತೀಶ್ ಕುಮಾರ್ ಸಜ್ಜಾಗುತ್ತಿದ್ದಂತೆ, ರಾಜ್ಯ ವಿಧಾನಸಭೆಯ ಅತಿದೊಡ್ಡ ಪಕ್ಷವಾದ ಬಿಜೆಪಿಗೆ ಬಿಹಾರದಲ್ಲಿ ಇದೇ ಮೊದಲ ಬಾರಿಗೆ ತನ್ನದೇ ಪಕ್ಷದ ಮುಖ್ಯಮಂತ್ರಿಯನ್ನು ಹೊಂದುವ ಅವಕಾಶ ಒದಗಿಬಂದಿದೆ.

​ನಾಲ್ಕು ದಶಕಗಳ ಸುದೀರ್ಘ ರಾಜಕೀಯ ಪಯಣ
ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ರಾಜಕೀಯ ಪಯಣ ನಾಲ್ಕು ದಶಕಗಳಿಗೂ ಹಳೆಯದು. 1985ರಲ್ಲಿ ಹರ್ನೌತ್ ಕ್ಷೇತ್ರದಿಂದ ಅವಿಭಜಿತ ಜನತಾದಳದಿಂದ ಬಿಹಾರ ವಿಧಾನಸಭೆಗೆ ಆಯ್ಕೆಯಾಗುವ ಮೂಲಕ ಅವರ ಯಶಸ್ವಿ ಪ್ರಯಾಣ ಆರಂಭವಾಯಿತು. ಕೇವಲ ನಾಲ್ಕು ವರ್ಷಗಳ ಬಳಿಕ, 1989ರಲ್ಲಿ ಆಗಿನ ಬಾರ್ ಕ್ಷೇತ್ರದಿಂದ ಲೋಕಸಭೆ ಪ್ರವೇಶಿಸಿದ ಅವರು, 1990ರಲ್ಲಿ ವಿ ಪಿ ಸಿಂಗ್ ಸರ್ಕಾರದಲ್ಲಿ ರಾಜ್ಯ ಸಚಿವರಾಗಿ ನೇಮಕಗೊಂಡರು.

​1994ರಲ್ಲಿ ಅವರು ಸಮತಾ ಪಕ್ಷವನ್ನು ಸ್ಥಾಪಿಸಿದರು. ಎರಡು ವರ್ಷಗಳ ನಂತರ ಈ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತು. ತರುವಾಯ ಸಮತಾ ಪಕ್ಷವು 2003ರಲ್ಲಿ ಜೆಡಿಯು ಜೊತೆ ವಿಲೀನಗೊಂಡಿತು. ಅಂತಿಮವಾಗಿ 2005ರಲ್ಲಿ ಎನ್‌ಡಿಎ ಮೈತ್ರಿಕೂಟದ ಭಾಗವಾಗಿ ಅವರು ಬಿಹಾರದ ಅಧಿಕಾರ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾದರು.

​ಅದಕ್ಕೂ ಮುನ್ನ, 1998ರಿಂದ 2004ರವರೆಗೆ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ರೈಲ್ವೆ, ಮೇಲ್ಮೈ ಸಾರಿಗೆ ಮತ್ತು ಕೃಷಿ ಸಚಿವರಾಗಿ ಅವರು ಸೇವೆ ಸಲ್ಲಿಸಿದ್ದರು. 2005ರಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವ ಮೊದಲು ಅವರು ಬರೋಬ್ಬರಿ ಆರು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. 2014-15ರ ಅಲ್ಪಾವಧಿಯನ್ನು ಹೊರತುಪಡಿಸಿ ಅಂದಿನಿಂದ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...

ಫಾರ್ಮ್‌-6 ಮೂಲಕ ಮರುನೋಂದಣಿ ಸಾಧ್ಯವಿದ್ದರೆ SIR ಏಕೆ? ಚುನಾವಣಾ ಆಯೋಗಕ್ಕೆ ಚಿದಂಬರಂ ಪ್ರಶ್ನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕೈಬಿಡಲಾದ ಮತದಾರರು...