ರಾಜ್ಯಸಭೆ ಸದಸ್ಯರಾಗಿ ಏ.10ರಂದು ಪ್ರಮಾಣವಚನ ಸ್ವೀಕರಿಸಲಿರುವ ನಿತೀಶ್ ಕುಮಾರ್: ಬಿಹಾರ ಸಂಪುಟ ಪುನರ್‌ ರಚನೆ ನಿರ್ಧಾರ

Date:

ಬಿಹಾರದ ಹಾಲಿ ಮುಖ್ಯಮಂತ್ರಿ ಮತ್ತು ಜನತಾದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಏಪ್ರಿಲ್ 10ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಿಹಾರದ ಬಿಜೆಪಿ ನಾಯಕ ಸಂಜಯ್ ಸರೋಗಿ ಭಾನುವಾರ ತಿಳಿಸಿದ್ದಾರೆ.

- Advertisement -

ಪ್ರಮಾಣವಚನ ಸ್ವೀಕರಿಸಿದ ನಂತರ, ಮುಖ್ಯಮಂತ್ರಿ, ಬಿಜೆಪಿಯ ಕೇಂದ್ರ ನಾಯಕತ್ವ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಮಿತ್ರಪಕ್ಷಗಳು ಜಂಟಿಯಾಗಿ ಸಚಿವ ಸಂಪುಟ ಪುನರ್ ರಚನೆಯ ಕುರಿತು ಚರ್ಚೆ ನಡೆಸಲಿವೆ ಎಂದು ಸರೋಗಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಇದನ್ನು ಓದಿದ್ದೀರಾ? ನಿತೀಶ್ ಕುಮಾರ್ ಪುತ್ರ ನಿಶಾಂತ್ ಅಧಿಕೃತವಾಗಿ ಜೆಡಿಯು ಸೇರ್ಪಡೆ

ಕುಮಾರ್ ಇತ್ತೀಚೆಗೆ ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಇದೀಗ ರಾಜ್ಯಸಭೆ ಸದಸ್ಯರಾಗುವುದು ಖಚಿತವಾಗಿದೆ. ಬಿಹಾರ ಉಪಮುಖ್ಯಮಂತ್ರಿ ವಿಜಯ್ ಸಿನ್ಹಾ “ಇದು ಅವರ ಸ್ವಂತ ನಿರ್ಧಾರ. ಅವರು ಒಂದು ಸ್ಥಳದಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಮತ್ತೊಂದು ಸ್ಥಳಕ್ಕೆ ರಾಜೀನಾಮೆ ನೀಡಬೇಕಾಗುವುದು ಸಾಂವಿಧಾನಿಕ ವ್ಯವಸ್ಥೆ” ಎಂದು ಹೇಳಿಕೊಂಡಿದ್ದಾರೆ.

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ, ಅವರು ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಏಪ್ರಿಲ್ 13ರ ಸುಮಾರಿಗೆ ತಮ್ಮ ಸ್ಥಾನ ತೊರೆಯುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...