ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ರಾಜ್ಯದ ಎಲ್ಲ ಗ್ರಾಹಕರಿಗೆ 125 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಘೋಷಿಸಿದ್ದಾರೆ.
“ನಾವು ಆರಂಭದಿಂದಲೂ ಅಗ್ಗದ ದರದಲ್ಲಿ ವಿದ್ಯುತ್ ಒದಗಿಸುತ್ತಿದ್ದೇವೆ. ಆಗಸ್ಟ್ 1, 2025 ರಿಂದ, ಅಂದರೆ ಜುಲೈ ಬಿಲ್‌ನಿಂದಲೇ, ರಾಜ್ಯದ ಎಲ್ಲ ಗೃಹಬಳಕೆ ಗ್ರಾಹಕರು 125 ಯೂನಿಟ್‌ಗಳವರೆಗಿನ ವಿದ್ಯುತ್‌ಗೆ ಯಾವುದೇ ಹಣವನ್ನು ಪಾವತಿಸಬೇಕಾಗಿಲ್ಲ ಎಂದು ನಾವು ಈಗ ನಿರ್ಧರಿಸಿದ್ದೇವೆ” ಎಂದು ಬಿಹಾರ ಮುಖ್ಯಮಂತ್ರಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದೇವನಹಳ್ಳಿ ಐತಿಹಾಸಿಕ ಗೆಲುವಿಗೆ ರೈತರು, ಪ್ರಗತಿಪರ ಸಂಘಟನೆಗಳು ಹಾಗೂ ಸಿದ್ದರಾಮಯ್ಯ ಕಾರಣ
ಮುಖ್ಯಮಂತ್ರಿಯವರ ಪ್ರಕಾರ, ಈ ಘೋಷಣೆಯು ರಾಜ್ಯದ ಒಟ್ಟು 1 ಕೋಟಿ 67 ಲಕ್ಷ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ. ಗೃಹ ಬಳಕೆದಾರರ ಒಪ್ಪಿಗೆಯೊಂದಿಗೆ ಮನೆಗಳ ಮೇಲ್ಛಾವಣಿಗಳಲ್ಲಿ ಅಥವಾ ಹತ್ತಿರದ ಸಾರ್ವಜನಿಕ ಸ್ಥಳಗಳಲ್ಲಿ ಸೌರ ಫಲಕಗಳನ್ನು ಅಳವಡಿಸುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆಯೂ ಅವರು ಮಾಹಿತಿ ನೀಡಿದರು. ಮುಂದಿನ ಮೂರು ವರ್ಷಗಳಲ್ಲಿ ಈ ನಿರ್ಧಾರವನ್ನು ಜಾರಿಗೆ ತರಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ಹೇಳಿದರು.