ಸರ್ಕಾರ ರಚನೆಗೆ ಮುನ್ನವೆ ಮೋದಿಗೆ ಸಂಕಷ್ಟ: ಅಗ್ನಿಪಥ್, ಒಂದು ದೇಶ ಒಂದು ಚುನಾವಣೆಗೆ ಜೆಡಿಯು ಆಕ್ಷೇಪ

Date:

ನೂತನ ಸರ್ಕಾರ ರಚನೆಯಾಗುವ ಮುನ್ನವೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಸಂಕಷ್ಟಗಳು ಶುರುವಾಗುವ ಸಾಧ್ಯತೆಯಿದೆ. ಒಕ್ಕೂಟದ ಪ್ರಮುಖ ಪಕ್ಷವಾಗಿ ಕಿಂಗ್‌ ಮೇಕರ್‌ ಸ್ಥಾನದಲ್ಲಿರುವ ನಿತೀಶ್ ಕುಮಾರ್ ನೃತೃತ್ವದ ಜೆಡಿಯು ಸೇನೆಯಲ್ಲಿನ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪರಿಶೀಲಿಸುವಂತೆ ಬೇಡಿಕೆಯಿಟ್ಟಿದೆ.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಯು ವಕ್ತಾರ ಕೆ ಸಿ ತ್ಯಾಗಿ, ಅಗ್ನಿಪಥ್ ಯೋಜನೆಯನ್ನು ಪುನರ್‌ಪರಿಶೀಲಿಸುವ ಅಗತ್ಯವಿದೆ. ಈ ಯೋಜನೆಗೆ ಹಲವು ವಿರೋಧವಿದೆ. ಚುನಾವಣೆಯಲ್ಲೂ ಕೂಡ ಇದರ ಪರಿಣಾಮವನ್ನು ನೋಡಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಅಗ್ನಿಪಥ್‌ ಯೋಜನೆ ಪ್ರಾರಂಭಿಸಿದಾಗ ನಾವು ಇದರ ಬಗ್ಗೆ ಜಗಳವಾಡಲಿಲ್ಲ. ಸೇನಾ ಪಡೆಗಳ ದೊಡ್ಡ ದೊಡ್ಡ ವಿಭಾಗಗಳಲ್ಲಿ ಈ ಯೋಜನೆ ಬಗ್ಗೆ ಅಸಮಾಧಾನವಿತ್ತು. ಸೇನಾ ಕುಟುಂಬಗಳು ಚುನಾವಣಾ ಸಂದರ್ಭದಲ್ಲಿ ಯೋಜನೆಯ ಬಗ್ಗೆ ಪ್ರತಿಭಟನೆ ನಡೆಸಿದ್ದರು. ಹಾಗಾಗಿ, ಈ ಬಗ್ಗೆ ಚರ್ಚಿಸುವ ಅಗತ್ಯವಿದೆ” ಎಂದು ಕೆ ಸಿ ತ್ಯಾಗಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಿತ್ರಪಕ್ಷಗಳಿಗೆ ಮಣಿಯುವರೇ ಅಥವಾ ‘ಆಪರೇಷನ್ ಕಮಲ’ಕ್ಕೆ ಶರಣಾಗುವರೇ?

ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ಒಂದು ದೇಶ ಒಂದು ಚುನಾವಣೆ ಯೋಜನೆಗೆ ನಮ್ಮ ವಿರೋಧವಿಲ್ಲ. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕಾನೂನು ಆಯೋಗದ ಅಧ್ಯಕ್ಷರಿಗೆ ಈ ಬಗ್ಗೆ ಪತ್ರ ಬರೆದು ಎಲ್ಲ ಮುಖ್ಯಮಂತ್ರಿಗಳು, ಎಲ್ಲ ಪಕ್ಷಗಳು, ವಿವಿಧ ಪಂಗಡಗಳ ನಾಯಕರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ತಿಳಿಸಿದ್ದರು ಎಂದು ತ್ಯಾಗಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ರಕ್ಷಣಾ ಪಡೆಯ ಪಿಂಚಣಿ ಮಸೂದೆಯನ್ನು ಕಡಿತ ಮಾಡಲು ಹಾಗೂ ಸೇನಾ ಪಡೆಯನ್ನು ಕಡಿಮೆಗೊಳಿಸಲು ಕೇಂದ್ರ ಸರ್ಕಾರವು ಅಗ್ನಿಪಥ್‌ ಯೋಜನೆಯನ್ನು 2022ರಲ್ಲಿ ಪರಿಚಯಿಸಿತ್ತು.

ಈ ಯೋಜನೆಯಡಿ, ಭೂಸೇನೆ, ವಾಯು ಸೇನೆ ಹಾಗೂ ನೌಕಾ ಸೇನೆಗಳಿಗೆ 4 ವರ್ಷದ ಅವಧಿಯ ಅಲ್ಪಾವಧಿಯವರೆಗೆ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗುತ್ತದೆ. ಈ ಯೋಜನೆಯಲ್ಲಿ ನೇಮಕಗೊಂಡವರು ಕೇವಲ 25 ರಷ್ಟು ಮಾತ್ರ 15 ವರ್ಷಗಳವರೆಗೆ ಶಾಶ್ವತ ಹುದ್ದೆ ಪಡೆಯಲಿದ್ದಾರೆ. ಈ ಯೋಜನೆ ಜಾರಿಗೊಂಡ ನಂತರ ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಬೃಹತ್‌ ಪ್ರತಿಭಟನೆ ನಡೆದಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...