ಯಾವ ಪಾರಿವಾಳವೂ ಬಂದಿಲ್ಲ, ಫೋನೂ ಬಂದಿಲ್ಲ; ‘ಇಂಡಿಯಾ’ ಜೊತೆ ಮೈತ್ರಿ ಬಗ್ಗೆ ಪ್ರಕಾಶ್ ಅಂಬೇಡ್ಕರ್ ಹೇಳಿಕೆ

Date:

ವಿರೋಧ ಪಕ್ಷಗಳ ಒಕ್ಕೂಟವಾದ ‘ಇಂಡಿಯಾ’ದಿಂದ ಮೈತ್ರಿಗಾಗಿ ತಮಗೆ ಆಹ್ವಾನ ಬಂದಿಲ್ಲ ಎಂದು ‘ವಂಚಿತ ಬಹುಜನ ಅಘಾಡಿ’ (ವಿಬಿಎ) ಸಂಸ್ಥಾಪಕ ಹಾಗೂ ಬಾಬಾಸಾಹೇಬ್ ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ತಿಳಿಸಿದ್ಧಾರೆ.

ಪ್ರಕಾಶ್ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸಂಪರ್ಕಿಸಿದೆ ಎನ್ನುವ ವದಂತಿ ಹರಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ‘ಯಾವ ಪಾರಿವಾಳವೂ ಬಂದಿಲ್ಲ.. ಫೋನ್ ಕರೆಯೂ ಬಂದಿಲ್ಲ’ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

‘ಇದು ಕಾಂಗ್ರೆಸ್‌ನ ಕಾರ್ಯಶೈಲಿ. ಮೈತ್ರಿಗಾಗಿ ಸಂಪರ್ಕಿಸದೆಯೂ ಮೈತ್ರಿ ಆಗಿದೆ ಎಂದು ಎಲ್ಲ ಕಡೆ ಹೇಳಿಕೊಂಡು ಬರುತ್ತಾರೆ’ ಎಂದು ಪ್ರಕಾಶ್ ಅಂಬೇಡ್ಕರ್ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೆಲವು ತಿಂಗಳ ಹಿಂದೆ, ಅಂಬೇಡ್ಕರ್ ಮತ್ತು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮೈತ್ರಿಗಾಗಿ ಚರ್ಚೆ ನಡೆಸಿದ್ದರು. ಆದರೆ, ಅದು ಎರಡು ಪಕ್ಷಗಳಿಗೆ ಮಾತ್ರ ಸೀಮಿತವಾಗಿತ್ತು ಮತ್ತು ವಂಚಿತ್ ಬಹುಜನ್ ಅಘಾಡಿ ಇನ್ನೂ ಮಹಾರಾಷ್ಟ್ರದ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿಯ ಭಾಗವಾಗಿರಲಿಲ್ಲ.

ಈ ಸುದ್ದಿ ಓದಿದ್ದೀರಾ: ದೇವರಾಜ ಅರಸು ನನ್ನ ಹೃದಯವನ್ನು ಗಾಢವಾಗಿ ತಟ್ಟಿದ ನಾಯಕ – ಪ್ರೊ. ಜೇಮ್ಸ್ ಮ್ಯಾನರ್, ಲಂಡನ್

ವಂಚಿತ್ ಬಹುಜನ್ ಅಘಾಡಿ ಇಲ್ಲದಿದ್ದರೆ ಅದು ಪರಿಪೂರ್ಣ ಬಿಜೆಪಿ ವಿರೋಧಿ ಮೈತ್ರಿ ಆಗಲು ಸಾಧ್ಯವಿಲ್ಲ ಎಂದು ವಿಬಿಎ ನಾಯಕತ್ವ ಹೇಳಿದೆ.

ಅಂಬೇಡ್ಕರ್ ವೃತ್ತಿಯಲ್ಲಿ ವಕೀಲರಾಗಿದ್ದು, ಅಕೋಲಾದಿಂದ ಎರಡು ಬಾರಿ ಲೋಕಸಭಾ ಸಂಸದ ಮತ್ತು ಒಂದು ಬಾರಿ ರಾಜ್ಯಸಭಾ ಸಂಸದರಾಗಿದ್ದಾರೆ. 2019 ರ ಲೋಕಸಭಾ ಚುನಾವಣೆಗೆ ಮುಂಚೆ ಅವರು ವಂಚಿತ್ ಬಹುಜನ್ ಅಘಾಡಿ  ಅನ್ನು ಸ್ಥಾಪಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಯಾವುದು ಹಾಳಾಗಿಲ್ಲವೋ ಅದನ್ನು ಎಂದಿಗೂ ಸರಿಪಡಿಸಲು ಪ್ರಯತ್ನಿಸಬೇಡಿ’; ವಿದ್ಯಾರ್ಥಿನಿ ಪ್ರಾಚಿ ನಿಗಮ್

ಉತ್ತರಪ್ರದೇಶದ 10ನೇ ತರಗತಿಯ ಬೋರ್ಡ್‌ ಪರೀಕ್ಷೆಯಲ್ಲಿ 55 ಲಕ್ಷ ವಿದ್ಯಾರ್ಥಿಗಳಲ್ಲಿ ಪ್ರಾಚಿ...

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ: ಅರವಿಂದ್ ಕೇಜ್ರಿವಾಲ್

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ತಿಳಿಸಿದ್ದು,ಲೋಕಸಭೆ...

ಲೋಕಸಭೆ ಚುನಾವಣೆ| ನೀತಿ ಸಂಹಿತೆ ಉಲ್ಲಂಘನೆ; ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್

ಕಾಶ್ಮೀರದ ಚುನಾವಣಾ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ...

‘ರಫಾ ದುರಂತ’ಕ್ಕೆ ಸಂತಾಪ ವ್ಯಕ್ತಪಡಿಸಿ ನಂತರ ಸ್ಟೇಟಸ್ ಡಿಲೀಟ್ ಮಾಡಿದ ರೋಹಿತ್ ಪತ್ನಿ

ಪ್ಯಾಲಿಸ್ಟೇನ್‌ನ ದಕ್ಷಿಣ ಗಾಜಾದ ರಫಾ ಪಟ್ಟಣದ ಮೇಲೆ ಇಸ್ರೇಲ್ ಸೇನೆ ಕಳೆದ...