ಡಿಜಿಟಲ್ ಭಾರತ | ಆ್ಯಂಬುಲೆನ್ಸ್ ಇಲ್ಲ – ವೈದ್ಯರೂ ಇಲ್ಲ; ಗರ್ಭಿಣಿಯನ್ನು ಹೆಗಲ ಮೇಲೆ ಹೊತ್ತೋಯ್ದ ಕುಟುಂಬಸ್ಥರು; ಮಗು ಸಾವು

Date:

ಗ್ರಾಮಕ್ಕೆ ಆ್ಯಂಬುಲೆನ್ಸ್ ಸೌಲಭ್ಯವಿಲ್ಲದ ಕಾರಣ, ಗರ್ಭಿಣಿಯೊಬ್ಬರನ್ನು ಹೆಗಲ ಮೇಲೆಯೇ ಆಸ್ಪತ್ರೆಗೆ ಹೊತ್ತೋಯ್ದಿರುವ ಮನಕಲಕುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ. ಹೇಗೋ ಆಸ್ಪತ್ರೆ ತಲುಪಿದರೂ, ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಸರಿಯಾದ ಸಮಯಕ್ಕೆ ಹೆರಿಗೆ ಮಾಡಿಸಲಾಗದೆ, ಗರ್ಭದಲ್ಲಿಯೇ ಮಗು ಸಾವನ್ನಪ್ಪಿದೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

- Advertisement -

ಕಿಶ್ತ್ವಾರ್ ಜಿಲ್ಲೆಯ ಮರ್ವಾ ತಹಸಿಲ್‌ನ ದೆಹಾರ್ನಾ ಗ್ರಾಮದ ಶಾಹಿಸ್ತಾ ಬೇಗಂ ಎಂಬುವವರು ತಮ್ಮ ಮಗುವನ್ನು ಕಳೆದುಕೊಂಡಿದ್ದಾರೆ. ಬೇಗಂ ಅವರಿಗೆ ಶನಿವಾರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆದರೆ, ಗ್ರಾಮದಲ್ಲಿ ಸರಿಯಾದ ರಸ್ತೆ ಮತ್ತು ಆ್ಯಂಬುಲೆನ್ಸ್ ಸೌಲಭ್ಯ ಇಲ್ಲದ ಕಾರಣ, ಅವರ ಕುಟುಂಬಸ್ಥರು ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಕಲ್ಲು-ಬಂಡೆಗಳಿಂದ ಕೂಡಿದ ಹಾದಿಯಲ್ಲಿ ಕಿಲೋಮೀಟರ್‌ಗಟ್ಟಲೆ ನಡೆದು ರಸ್ತೆಯನ್ನು ತಲುಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಅಲ್ಲಿ ಅವರು ವಾಹನವೊಂದನ್ನು ಬಾಡಿಗೆಗೆ ಪಡೆದು ನವಾಪಚಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (PHC) ತೆರಳಿದ್ದಾರೆ. ಆದರೆ, ಅಲ್ಲಿಗೆ ಹೋದಾಗ ಯಾವುದೇ ಸ್ತ್ರೀರೋಗ ತಜ್ಞರು ಕರ್ತವ್ಯದಲ್ಲಿ ಇರಲಿಲ್ಲ. ಮರ್ವಾದಲ್ಲಿ ಯಾವುದೇ ತಜ್ಞ ಚಿಕಿತ್ಸೆ ಲಭ್ಯವಿಲ್ಲದ ಕಾರಣ, ಕುಟುಂಬಸ್ಥರು ಸಮಯ ವ್ಯರ್ಥ ಮಾಡದೆ ತಮ್ಮಲ್ಲಿದ್ದ ಉಳಿತಾಯದ ಹಣವನ್ನು ಖರ್ಚು ಮಾಡಿ, ಅಲ್ಲಿಂದ ಸುಮಾರು 120 ಕಿ.ಮೀ ದೂರದಲ್ಲಿರುವ ಅನಂತನಾಗ್‌ನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಗರ್ಭಿಣಿಯನ್ನು ಕರೆದೊಯ್ದಿದ್ದಾರೆ. ದುರದೃಷ್ಟವಶಾತ್, ದೀರ್ಘ ಪ್ರಯಾಣದಿಂದಾಗಿ ತಾಯಿಯ ಗರ್ಭದಲ್ಲೇ ಮಗು ಸಾವನ್ನಪ್ಪಿದೆ.

“ಇಲ್ಲಿ ಪ್ರತಿ ಹೆರಿಗೆಯೂ ಸಾವಿನೊಂದಿಗಿನ ಜೂಜಾಟವಾಗಿದೆ” ಎಂದು ಆಕೆಯ ಪತಿ ನಾಸಿರ್ ಹುಸೇನ್ ಲೋನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನಮಗೆ ಹೆಸರಿಗಷ್ಟೇ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಆದರೆ, ಅಲ್ಲಿ ಯಾವುದೇ ವೈದ್ಯರಿರುವುದಿಲ್ಲ. ಹೆರಿಗೆ ನೋವು ಪ್ರಾರಂಭವಾದಾಗ, ನಮ್ಮ ಮಹಿಳೆಯರನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತೇವೆ. ಈ ಪರ್ವತಗಳು ಅವರ ಜೀವವನ್ನು ಕಸಿದುಕೊಳ್ಳದಿರಲಿ ಎಂದು ಪ್ರಾರ್ಥಿಸುತ್ತೇವೆ” ಎಂದಿದ್ದಾರೆ.

ಈ ಲೇಖನ ಓದಿದ್ದೀರಾ?: ಅಕಿರಾ ಕುರೊಸಾವಾನ ‘ಡೆರ್ಸು ಉಜಾಲಾ’ ಎಂಬ ಕಾಡಿನ ಸಂತನೂ, ಕಾಡುವ ಚಿತ್ರವೂ

ಮರ್ವಾ ಕಣಿವೆ ಪ್ರದೇಶದಲ್ಲಿ 30,000ಕ್ಕೂ ಹೆಚ್ಚು ಜನಸಂಖ್ಯೆ ಇದ್ದರೂ, ಅಲ್ಲಿ ಯಾವುದೇ ತಜ್ಞ ವೈದ್ಯಕೀಯ ಸೌಲಭ್ಯವಿಲ್ಲ. ನವಾಪಚಿಯಲ್ಲಿರುವ ಪಿಎಚ್‌ಸಿ ಸುಮಾರು 10ಕ್ಕೂ ಹೆಚ್ಚು ಗ್ರಾಮಗಳಿಗೆ ಆರೋಗ್ಯ ಸೇವೆ ಒದಗಿಸುತ್ತದೆ. ಆದರೆ, ಈ ಆಸ್ಪತ್ರೆಗೆ ಹೆಚ್ಚಾಗಿ ವೈದ್ಯರಿಲ್ಲದೆಯೇ ನಡೆಯುತ್ತದೆ ಎಂದು ಸ್ಥಳೀಯರು ಹೇಳುತ್ತಾರೆ. ಗರ್ಭಿಣಿಯರನ್ನು ಸಾಮಾನ್ಯವಾಗಿ ಇಲ್ಲಿಂದ 100 ಕಿ.ಮೀ. ಗಿಂತಲೂ ದೂರವಿರುವ ಅಪಾಯಕಾರಿ ರಸ್ತೆಗಳ ಮೂಲಕ ಅನಂತನಾಗ್ ಅಥವಾ ಕಿಶ್ತ್ವಾರ್ ನಗರಗಳಿಗೆ ಕಳುಹಿಸಲಾಗುತ್ತದೆ ಎಂದು ಹೇಳಿದ್ದಾರೆ.

ಚಳಿಗಾಲದಲ್ಲಿ ಭಾರಿ ಹಿಮಪಾತದಿಂದಾಗಿ ರಸ್ತೆಗಳು ಮುಚ್ಚುತ್ತವೆ. ಆಗ, ಈ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಳ್ಳುತ್ತದೆ. ಇದರಿಂದಾಗಿ ತುರ್ತು ಸೇವೆಗಳೂ ಸಿಗದೆ ತಿಂಗಳುಗಟ್ಟಲೆ ಈ ಕಣಿವೆಯು ಸಂಪೂರ್ಣವಾಗಿ ಸಂಪರ್ಕ ಕಳೆದುಕೊಳ್ಳುತ್ತದೆ. ನಮ್ಮೂರಿನ ಪಿಎಚ್‌ಸಿಗೆ ತಕ್ಷಣವೇ ಒಬ್ಬ ಸ್ತ್ರೀರೋಗ ತಜ್ಞರನ್ನು ನೇಮಿಸಬೇಕು. 24 ಗಂಟೆಗಳೂ ಆ್ಯಂಬುಲೆನ್ಸ್ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...