ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡುವುದು ದೊಡ್ಡ ವಿಚಾರವಲ್ಲ, ಸದ್ಯ ಮತಗಳ್ಳತನವೇ ಮುಖ್ಯ ಸಮಸ್ಯೆ’ ಎಂದು ಶುಕ್ರವಾರ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.
“ಮಣಿಪುರದಲ್ಲಿ ಸಮಸ್ಯೆ ಬಹಳ ದಿನಗಳಿಂದ ನಡೆಯುತ್ತಿದೆ. ಅವರು ಈಗ ಅಲ್ಲಿಗೆ ಹೋಗುತ್ತಿರುವುದು ಒಳ್ಳೆಯದು. ಆದರೆ ದೇಶದ ಪ್ರಮುಖ ಸಮಸ್ಯೆ ‘ಮತ ಗಳ್ಳತನ’ ಎಂದರು.
ಗುಜರಾತ್‌ನ ಜೂನಾಗಢದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಹರಿಯಾಣ, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ನಡೆದ ಚುನಾವಣೆಗಳಲ್ಲಿ ಮತಗಳನ್ನು ‘ಚೋರಿ ಮಾಡಲಾಗಿದೆ’ ಎಂದು ಸಾಬೀತುಪಡಿಸಿದ್ದೇನೆ ಎಂದು ಹೇಳಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಧರ್ಮಸ್ಥಳ, ದಸರಾ, ಗಣೇಶ ಮತ್ತು ಅಶೋಕ್ ಮೋಚಿ
ಜನರು ಎಲ್ಲೆಡೆ ‘ವೋಟ್ ಚೋರ್’ ಎಂದು ಕೂಗುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದರು. ಈ ಹೇಳಿಕೆಯನ್ನು ನೀಡುವ ಮುನ್ನ, ಅವರು ಜೂನಾಗಢದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಮತ್ತು ನಗರ ಘಟಕಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿ, ‘ಸಂಘಟನಾ ಸೃಜನ್ ಅಭಿಯಾನ್’ ಕಾರ್ಯಕ್ರಮದ ಅಂಶಗಳನ್ನು ಚರ್ಚಿಸಿದ್ದರು.
2023ರ ಮೇ ತಿಂಗಳಿನಿಂದ ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದಿತ್ತು. ಇದರಿಂದ 200ಕ್ಕೂ ಹೆಚ್ಚು ಜನರು ಮೃತಪಟ್ಟು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.
