ಮಳೆಗೆ ಸ್ತಬ್ಧವಾದ ದೆಹಲಿ: ಜಲಾವೃತಗೊಂಡ ರಸ್ತೆಗಳು, ಮನೆಗೆ ತೆರಳಲು ಉದ್ಯೋಗಿಗಳ ಪರದಾಟ

Date:

ದೆಹಲಿ ಹಾಗೂ ಸುತ್ತಮುತ್ತಲಿನ ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (ಎನ್‌ಸಿಆರ್) ಶುಕ್ರವಾರ ದಿನವಿಡೀ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ತೀವ್ರ ಸಂಚಾರ ದಟ್ಟಣೆ ಉಂಟಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ 8 ಗಂಟೆಯವರೆಗೆ ‘ರೆಡ್ ಅಲರ್ಟ್’ ಘೋಷಿಸಿತ್ತು.

- Advertisement -

ಕಚೇರಿ ಮುಗಿಸಿ ಮನೆಗೆ ತೆರಳುವ ಧಾವಂತದಲ್ಲಿದ್ದ ಉದ್ಯೋಗಿಗಳು ಗಂಟೆಗಟ್ಟಲೆ ಕ್ಯಾಬ್‌ಗಳನ್ನು ಕಾಯ್ದಿರಿಸಲಾಗದೆ ಪರದಾಡುವಂತಾಯಿತು. ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ, ಮೆಹ್ರೌಲಿ-ಬದರ್‌ಪುರ ರಸ್ತೆ, ಐಟಿಒ, ವಜೀರಾಬಾದ್ ರಸ್ತೆ, ಪಟೇಲ್ ರಸ್ತೆ, ರೋಹ್ಟಕ್ ರಸ್ತೆ, ಶಂಕರ್ ರಸ್ತೆ, ಕೀರ್ತಿ ನಗರ, ದೆಹಲಿ-ಜೈಪುರ ಹೆದ್ದಾರಿ, ಪೀರಾಘರಿ ಹಾಗೂ ಶಾಹೀನ್ ಬಾಗ್ ಸೇರಿದಂತೆ ದೆಹಲಿಯ ಪ್ರಮುಖ ಮಾರ್ಗಗಳಲ್ಲಿ ವಾಹನ ಸಂಚಾರ ಸಂಪೂರ್ಣ ಹದಗೆಟ್ಟಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ದೆಹಲಿಯ ಛತ್ತರ್‌ಪುರ ಫಾರ್ಮ್ ಪ್ರದೇಶ ಮತ್ತು ಟರ್ಮಿನಲ್ 1 ರ ಸಮೀಪವಿರುವ ಮೆಹ್ರಾಮ್ ನಗರದಲ್ಲಿ ನಿರಂತರ ಮಳೆಯಿಂದಾಗಿ ರಸ್ತೆಗಳಲ್ಲಿ ಭಾರೀ ಪ್ರಮಾಣದ ನೀರು ನಿಂತು ವಾಹನಗಳ ಓಡಾಟಕ್ಕೆ ತೀವ್ರ ಅಡ್ಡಿಯುಂಟಾಯಿತು. ಸಫ್ದರ್‌ಜಂಗ್ ಆಸ್ಪತ್ರೆ ಹಾಗೂ ಕಪಾಶೇರಾ ಗಡಿ ಭಾಗಗಳಲ್ಲೂ ರಸ್ತೆಗಳು ಜಲಾವೃತಗೊಂಡಿದ್ದವು. ಶಂಕರ್ ವಿಹಾರ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 (ದೆಹಲಿ-ಜೈಪುರ ಹೆದ್ದಾರಿ) ಮತ್ತು ಗುರುಗ್ರಾಮದಿಂದ ಧೌಲಾ ಕುವಾನ್‌ವರೆಗಿನ ಮಾರ್ಗದಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇತ್ತ ನೋಯ್ಡಾ-ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿಯೂ ವಾಹನ ಸಂಚಾರ ಮಂದಗತಿಯಲ್ಲಿ ಸಾಗಿತ್ತು.

ಪೂರ್ವ ದೆಹಲಿಯ ಶಕರ್‌ಪುರ ಮತ್ತು ನೆರೆಯ ಮಂಡಾವಳಿಯಲ್ಲಿ ಚರಂಡಿಗಳು ಉಕ್ಕಿ ಹರಿಯುತ್ತಿದ್ದು, ಗುಂಡಿಬಿದ್ದ ರಸ್ತೆಗಳು ಜಲಾವೃತವಾಗಿವೆ. ಇದರಿಂದಾಗಿ ಅಪಘಾತಗಳು ಸಂಭವಿಸುತ್ತಿದ್ದು, ತಮ್ಮ ಜೀವನೋಪಾಯಕ್ಕೆ ಪೆಟ್ಟು ಬಿದ್ದಿದೆ ಎಂದು ಇ-ರಿಕ್ಷಾ ಚಾಲಕರು ಅಳಲು ತೋಡಿಕೊಂಡಿದ್ದಾರೆ. “ಗುಂಡಿಗಳು ಮತ್ತು ತೆರೆದ ಒಳಚರಂಡಿಗಳು ನೀರಿನಿಂದ ಆವೃತವಾಗಿರುವುದರಿಂದ ರಸ್ತೆಯೆಲ್ಲಿದೆ ಎಂದೇ ತಿಳಿಯುತ್ತಿಲ್ಲ. ಇಂದು ಇ-ರಿಕ್ಷಾ, ಸ್ಕೂಟರ್ ಮತ್ತು ಮೋಟಾರ್ ಸೈಕಲ್‌ಗಳು ಸೇರಿದಂತೆ ಕನಿಷ್ಠ ಮೂರ್ನಾಲ್ಕು ವಾಹನಗಳು ಪಲ್ಟಿಯಾಗಿವೆ” ಎಂದು ಇ-ರಿಕ್ಷಾ ಚಾಲಕರೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದ್ದಾರೆ.

ಉತ್ತರ ಭಾರತದಾದ್ಯಂತ ಏಕಕಾಲಕ್ಕೆ ಸೃಷ್ಟಿಯಾಗಿರುವ ಬಹು ಹವಾಮಾನ ವ್ಯವಸ್ಥೆಗಳ ಅಪರೂಪದ ಸಂಯೋಜನೆಯೇ ಈ ಭಾರಿ ಮಳೆಗೆ ಕಾರಣ ಎಂದು ಐಎಂಡಿ ತಿಳಿಸಿದೆ. ಈ ತೀವ್ರ ಮುಂಗಾರು ಮಳೆಯಿಂದಾಗಿ ಜಲಾವೃತ, ಸಂಚಾರ ಅಸ್ತವ್ಯಸ್ತ ಹಾಗೂ ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸುಪ್ರೀಂ’ ನಲ್ಲಿ ವಂದೇ ಮಾತರಂ ವಿಚಾರಣೆ-  ಟಿ.ಎಂ.ಕೃಷ್ಣ ನಕ್ಸಲೈಟ್ ಎಂದು ಜರೆದ ಸಾಲಿಸಿಟರ್ ಜನರಲ್

ಮಂಗಳವಾರ ಸುಪ್ರೀಮ್ ಕೋರ್ಟಿನಲ್ಲಿ ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್  ತುಷಾರ್ ಮೆಹ್ತಾ...

‘ವಂದೇ ಮಾತರಂ’ ಹಾಡದಿದ್ದರೆ ಅಪರಾಧವಲ್ಲ, ಶಿಕ್ಷೆಯೂ ಇಲ್ಲ: ಸುಪ್ರೀಂ ಕೋರ್ಟ್

‘ವಂದೇ ಮಾತರಂ’ನ ಹಾಡುವುದು ಕಡ್ಡಾಯವಲ್ಲ. ಹಾಡದಿದ್ದ ಕಾರಣಕ್ಕೆ ಶಿಕ್ಷೆ ನೀಡಲಾಗುವುದಿಲ್ಲ ಎಂದು...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...

ಜಗತ್ತಿನಲ್ಲೇ ಮೊದಲು: ಹಂದಿ ಮೂತ್ರಪಿಂಡದಿಂದ 9 ತಿಂಗಳು ಜೀವಿಸಿದ ವ್ಯಕ್ತಿ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆಯೊಂದು ನಡೆದಿದೆ. ತಳಿವಿಜ್ಞಾನದ (ಜೆನೆಟಿಕ್ಸ್‌) ಮೂಲಕ...