ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ, ತೇಜಸ್ವಿ ಯಾದವ್‌ ಬಿಹಾರ ಮುಖ್ಯಮಂತ್ರಿ: ಕನ್ಹಯ್ಯಾ ಕುಮಾರ್

Date:

ಬಿಹಾರ ಮೈತ್ರಿಕೂಟ ‘ಮಹಾಘಟಬಂಧನ’ದಲ್ಲಿ ಯಾವುದೇ ಗೊಂದಲವಿಲ್ಲ. ತೇಜಸ್ವಿ ಯಾದವ್ ಬಿಹಾರ ಮುಖ್ಯಮಂತ್ರಿ ಹುದ್ದೆಯ ಅಭ್ಯರ್ಥಿ. ಮುಂದಿನ ಚುನಾವಣೆಯಲ್ಲಿ ಮೈತ್ರಿಕೂಟ ಬಹುಮತ ಪಡೆದರೆ ಆರ್‌ಜೆಡಿಯ ತೇಜಸ್ವಿ ಯಾದವ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಶುಕ್ರವಾರ ಹೇಳಿದ್ದಾರೆ.

- Advertisement -

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ಆರ್‌ಜೆಡಿ ದೊಡ್ಡ ಪಕ್ಷ, ಹೆಚ್ಚಿನ ಶಾಸಕರನ್ನು ಹೊಂದಿದೆ. ಅದು ‘ಮಹಾಘಟಬಂಧನ’ಕ್ಕೆ ನಾಯಕತ್ವವನ್ನು ಒದಗಿಸುತ್ತದೆ. ಅವರಿಗೆ ವಿರೋಧ ಪಕ್ಷದ ನಾಯಕನ ಹುದ್ದೆ ಇದೆ ಎಂಬುದು ನಿಜ. ಸ್ವಾಭಾವಿಕವಾಗಿ, ಅದು ಅವರ ಜವಾಬ್ದಾರಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ 6ನೇಹಂತ: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

“ಬಿಹಾರದಲ್ಲಿ ಕಳೆದ ವಿಧಾನಸಭಾ ಚುನಾವಣೆಗಳಿಗಿಂತ ಈ ಬಾರಿ ಬದಲಾವಣೆಯ ಗಾಳಿ ಹೆಚ್ಚಾಗಿದೆ. ಬಿಜೆಪಿ ಆಪರೇಷನ್ ಸಿಂಧೂರವನ್ನು ಚುನಾವಣಾ ವಿಚಾರವಾಗಿ ಬಳಸುತ್ತಿಲ್ಲ. ಯಾಕೆಂದರೆ ಈಗಾಗಲೇ ಜನರಿಗೆ ಇದು ದೇಶದ ಗೌರವದ ವಿಚಾರವೆಂದು ತಿಳಿದಿದೆ. ಯಾವುದೇ ಪಕ್ಷವು ಈ ವಿಚಾರವನ್ನು ರಾಜಕೀಯಗೊಳಿಸಬಾರದು” ಎಂದು ಹೇಳಿದರು.

ಕಾಂಗ್ರೆಸ್ ಚುನಾವಣೆಯಲ್ಲಿ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಕನ್ಹಯ್ಯಾ, “ಮೈತ್ರಿಕೂಟದ ಎಲ್ಲಾ ಪಕ್ಷಗಳೂ 243 ಸ್ಥಾನಗಳಲ್ಲಿಯೂ ಒಟ್ಟಾಗಿ ಸ್ಪರ್ಧಿಸಲಿದೆ. ಆರ್‌ಜೆಡಿ, ಕಾಂಗ್ರೆಸ್, ಎಡ ಪಕ್ಷಗಳು ಮತ್ತು ಸಹಾನಿ ಜಿ ಅವರ ಪಕ್ಷವು ಒಟ್ಟಾಗಿ 243 ಸ್ಥಾನಗಳಲ್ಲಿ ಸ್ಪರ್ಧಿಸುತ್ತವೆ. ಯಾರಿಗೆ ದೊಡ್ಡ ಜವಾಬ್ದಾರಿ ಇದೆಯೋ ಅವರು ಜವಾಬ್ದಾರಿ ನಿರ್ವಹಿಸುತ್ತಾರೆ. ಯಾರಿಗೆ ಹೆಚ್ಚು ಜವಾಬ್ದಾರಿ ಇಲ್ಲವೋ ಏನೆಲ್ಲ ನಿರ್ವಹಿಸಬೇಕೋ ಅದನ್ನು ನಿರ್ವಹಿಸುತ್ತಾರೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...