ಭಾರತ ಹಿಂದೂ ರಾಷ್ಟ್ರ, ಇದಕ್ಕೆ ಸಂವಿಧಾನದ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

Date:

‘‘ಭಾರತವು ‘ಹಿಂದೂ ರಾಷ್ಟ್ರ’ ಎಂಬುದು ಸತ್ಯ. ಸೂರ್ಯ ಪೂರ್ವದಲ್ಲಿ ಉದಯಿಸುತ್ತಾನೆ ಎಂಬುದಕ್ಕೆ ಸಂವಿಧಾನದ ಅನುಮೋದನೆ ಹೇಗೆ ಅಗತ್ಯವಿಲ್ಲವೋ, ಹಾಗೆಯೇ ಭಾರತ ಹಿಂದೂ ರಾಷ್ಟ್ರ ಎಂದು ಹೇಳುವುದಕ್ಕೂ ಸಂವಿಧಾನದ ಅನುಮೋದನೆ ಬೇಕಿಲ್ಲ,’’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಧ್ಯಕ್ಷ ಮೋಹನ್ ಭಾಗವತ್ ಪ್ರತಿಪಾದಿಸಿದ್ದಾರೆ.

- Advertisement -

ಕೋಲ್ಕತ್ತಾ ​ನಗರದಲ್ಲಿ ಆಯೋಜಿಸಲಾಗಿದ್ದ ಆರ್‌ಎಸ್‌ಎಸ್‌ನ ಶತಮಾನೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಭಾನುವಾರ ಮಾತನಾಡಿದರು. ಭಾರತದಲ್ಲಿ ಭಾರತೀಯ ಸಂಸ್ಕೃತಿಯನ್ನು ಗೌರವಿಸುವವರೆಗೂ ಭಾರತವು ಹಿಂದೂ ರಾಷ್ಟ್ರವಾಗಿಯೇ ಉಳಿಯಲಿದೆ ಎಂದು ಅವರು ಪುನರುಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

​‘‘ಸೂರ್ಯ ಪೂರ್ವದಲ್ಲಿ ಹುಟ್ಟುತ್ತಾನೆ ಎಂಬುದು ಅನಾದಿ ಕಾಲದಿಂದ ನಡೆದುಕೊಂಡು ಬಂದಿದೆ. ಅದಕ್ಕೂ ಸಾಂವಿಧಾನಿಕ ಅನುಮೋದನೆ ಬೇಕೇ? ಹಾಗೆಯೇ ಹಿಂದೂಸ್ತಾನವು ಹಿಂದೂ ರಾಷ್ಟ್ರ. ಭಾರತವನ್ನು ತಮ್ಮ ಮಾತೃಭೂಮಿ ಎಂದು ಪರಿಗಣಿಸುವ, ಭಾರತೀಯ ಸಂಸ್ಕೃತಿಯನ್ನು ಗೌರವಿಸುವ ಮತ್ತು ಭಾರತೀಯ ಪೂರ್ವಜರ ವೈಭವವನ್ನು ಸ್ಮರಿಸುವ ಒಬ್ಬ ವ್ಯಕ್ತಿ ಈ ಭೂಮಿಯಲ್ಲಿ ಜೀವಂತವಿರುವವರೆಗೂ ಭಾರತವು ಹಿಂದೂ ರಾಷ್ಟ್ರವಾಗಿಯೇ ಇರುತ್ತದೆ. ಇದು ಸಂಘದ ಸಿದ್ಧಾಂತ,’’ ಎಂದು ಅವರು ವಿವರಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಾಯು ಮಾಲಿನ್ಯದ ಚರ್ಚೆಯೇ ಇಲ್ಲದೆ ಮುಗಿಯಿತು ಸಂಸತ್ ಅಧಿವೇಶನ!

ಸಂವಿಧಾನದಲ್ಲಿನ ಉಲ್ಲೇಖಗಳ ಕುರಿತು ಮಾತನಾಡಿದ ಅವರು, ‘‘ಸಂಸತ್ತು ಎಂದಾದರೂ ಸಂವಿಧಾನವನ್ನು ತಿದ್ದುಪಡಿ ಮಾಡಿ ಆ ಪದವನ್ನು (ಹಿಂದೂ ರಾಷ್ಟ್ರ) ಸೇರಿಸಲಿ ಅಥವಾ ಬಿಡಲಿ, ಅದು ಪರವಾಗಿಲ್ಲ. ಆ ಪದದ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಏಕೆಂದರೆ ನಾವು ಹಿಂದೂಗಳು ಮತ್ತು ನಮ್ಮ ರಾಷ್ಟ್ರ ಹಿಂದೂ ರಾಷ್ಟ್ರ ಎಂಬುದು ಸತ್ಯ,’’ ಎಂದರು.

​‘ನಾವು ಮುಸ್ಲಿಂ ವಿರೋಧಿಗಳಲ್ಲ’

ಆರ್‌ಎಸ್‌ಎಸ್ ಮುಸ್ಲಿಂ ವಿರೋಧಿ ಎಂಬ ಗ್ರಹಿಕೆಯ ಬಗ್ಗೆ ಪ್ರಸ್ತಾಪಿಸಿದ ಭಾಗವತ್, ‘‘ಸಂಘವು ಹಿಂದೂಗಳನ್ನು ಸಂಘಟಿಸುತ್ತದೆ ಮತ್ತು ಅವರ ರಕ್ಷಣೆಗಾಗಿ ಪ್ರತಿಪಾದಿಸುತ್ತದೆ. ನಾವು ಕಟ್ಟಾ ರಾಷ್ಟ್ರವಾದಿಗಳು ಎಂಬುದು ಜನರಿಗೆ ಅರ್ಥವಾಗಿದೆ. ಆದರೆ ನಾವು ಮುಸ್ಲಿಂ ವಿರೋಧಿಗಳಲ್ಲ. ಸಂಘದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಜನರು ಶಾಖೆಗಳಿಗೆ ಭೇಟಿ ನೀಡಿ ಕಾರ್ಯವೈಖರಿಯನ್ನು ನೋಡಬೇಕು ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...