ದೇಶದಲ್ಲಿ ಎಬೋಲಾ ಪ್ರಕರಣ ಪತ್ತೆಯಾಗಿಲ್ಲ, ಯಾವುದೇ ಸವಾಲಿಗೂ ಸಿದ್ಧವಾಗಿದ್ದೇವೆ: ಕೇಂದ್ರ ಸರ್ಕಾರ

Date:

ಎಬೋಲಾ ಪ್ರಕರಣಗಳು ಅಧಿಕವಾಗಬಹುದು, ಸಾವುಗಳ ಪ್ರಮಾಣ ಮತ್ತಷ್ಟು ಹೆಚ್ಚಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ WHO ಎಚ್ಚರಿಸಿದೆ. ಆದರೆ ದೇಶದಲ್ಲಿ ಈವರೆಗೆ ಎಬೋಲಾ ಪ್ರಕರಣಗಳು ಪತ್ತೆಯಾಗಿಲ್ಲ. ನಾವು ಯಾವುದೇ ಸವಾಲಿಗೂ ಸಿದ್ಧವಾಗಿದ್ದೇವೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.

- Advertisement -

ಎಬೋಲಾ ವೈರಸ್ ಕಾಯಿಲೆ (EVD) ಕುರಿತು ಸಿದ್ಧತೆ ಮತ್ತು ಪ್ರತಿಕ್ರಿಯೆ ಕ್ರಮಗಳನ್ನು ನಿರ್ಣಯಿಸಲು ಉನ್ನತ ಮಟ್ಟದ ಪರಿಶೀಲನಾ ಸಭೆ ಬುಧವಾರ ನಡೆದಿದೆ. ಈ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ಪುಣ್ಯ ಸಲಿಲಾ ಶ್ರೀವಾಸ್ತವ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಯಾವುದೇ ಸವಾಲು ಎದುರಿಸಲು ತಯಾರಾಗಿರುವಂತೆ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಎಬೋಲಾ ಭೀತಿ: ಜಾಗತಿಕ ಮಟ್ಟದಲ್ಲಿ ಎಚ್ಚರಿಕೆಯ ಗಂಟೆ ಬಾರಿಸಿದ ‘ವಿಶ್ವ ಆರೋಗ್ಯ ಸಂಸ್ಥೆ’

ಹೊಸದಾಗಿ ಕಾಣಿಸಿಕೊಂಡಿರುವ ಎಬೋಲಾ ಸೋಂಕಿನ ಹರಡುವಿಕೆಯ ‘ವ್ಯಾಪ್ತಿ ಮತ್ತು ವೇಗ’ ವಿಶ್ವ ಆರೋಗ್ಯ ಸಂಸ್ಥೆಯನ್ನು (WHO) ತೀವ್ರ ಆತಂಕಕ್ಕೀಡುಮಾಡಿದೆ. ರೋಗ ಪ್ರಸರಣದ ಈ ತೀವ್ರ ಸ್ವರೂಪವು ಜಾಗತಿಕ ಮಟ್ಟದಲ್ಲಿ ಎಚ್ಚರಿಕೆಯ ಗಂಟೆ ಬಾರಿಸಿದೆ. “ಪ್ರಸ್ತುತ ಎಬೋಲಾ ಸೋಂಕು ಹರಡುತ್ತಿರುವ ವೇಗ ಹಾಗೂ ಅದರ ಭೌಗೋಳಿಕ ವ್ಯಾಪ್ತಿಯು ನಮಗೆ ಅತಿದೊಡ್ಡ ಸವಾಲಾಗಿ ಪರಿಣಮಿಸಿದೆ. ತುರ್ತು ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳದಿದ್ದರೆ ಪರಿಸ್ಥಿತಿ ಕೈಮೀರುವ ಸಾಧ್ಯತೆಯಿದೆ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬೆನ್ನಲ್ಲೇ ಸಿದ್ಧತಾ ಸಭೆ ನಡೆಸಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ, ದೇಶವು ಸಂಪೂರ್ಣವಾಗಿ ಜಾಗರೂಕವಾಗಿದೆ. ಯಾವುದೇ ಪರಿಸ್ಥಿತಿಗೆ ತ್ವರಿತವಾಗಿ ಪ್ರತಿಕ್ರಿಯಿಸಲು ಸಿದ್ಧವಾಗಿದೆ. ಈಗಾಗಲೇ ಪೂರ್ವಭಾವಿ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.

ಇನ್ನು ಸಭೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ವಿದೇಶದಿಂದ ಬರುವವರು ಮೊದಲೇ ತಪಾಸಣೆ ಮಾಡಿಸಿಕೊಂಡಿರುವುದು, ಆಗಮನದ ನಂತರದ ತಪಾಸಣೆ, ಕ್ವಾರಂಟೈನ್ ಇರುವುದು, ಪ್ರಯೋಗಾಲಯ ಪರೀಕ್ಷೆ ಮೊದಲಾದ ವಿವರವಾದ ಮಾರ್ಗಸೂಚಿಗಳನ್ನು ಈಗಾಗಲೇ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಜಾಗತಿಕವಾಗಿ 600 ಶಂಕಿತ ಎಬೋಲಾ ಪ್ರಕರಣಗಳು ಮತ್ತು 139 ಶಂಕಿತ ಸಾವುಗಳು ಸಂಭವಿಸಿವೆ ಎಂದು WHO ಬುಧವಾರ ತಿಳಿಸಿದೆ. ಇಲ್ಲಿಯವರೆಗೆ, ಮೊದಲ ಪ್ರಕರಣ ವರದಿಯಾದ ಕಾಂಗೋದಲ್ಲಿ 51 ಪ್ರಕರಣಗಳು ಮತ್ತು ಉಗಾಂಡಾದಲ್ಲಿ ಎರಡು ಪ್ರಕರಣಗಳು ದೃಢಪಟ್ಟಿವೆ. “ಎಬೋಲಾದ ಬುಂಡಿಬುಗ್ಯೊ ಪ್ರಭೇದ ಏಕಾಏಕಿ ಕೆಲವು ತಿಂಗಳ ಹಿಂದಷ್ಟೇ ಕಾಣಿಸಿಕೊಂಡಿರಬಹುದು” ಎಂದು WHO ಮುಖ್ಯಸ್ಥ ಡಾ. ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...