ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ EWS ಕೋಟಾಗೆ ಶುಲ್ಕ ವಿನಾಯಿತಿ ಇಲ್ಲ: ಸುಪ್ರೀಂ ಕೋರ್ಟ್

Date:

ಆರ್ಥಿಕವಾಗಿ ಹಿಂದುಳಿದ ವರ್ಗಗಳ (EWS) ಮೀಸಲಾತಿಯಡಿ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ ಖಾಸಗಿ ವೈದ್ಯಕೀಯ (ಮೆಡಿಕಲ್) ಕಾಲೇಜುಗಳ ದುಬಾರಿ ಶುಲ್ಕವನ್ನು ಭರಿಸಲು ಸಾಧ್ಯವಿಲ್ಲ ಎಂಬ ಕಳವಳವನ್ನು ವ್ಯಕ್ತಪಡಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ. EWS ಮೀಸಲಾತಿಯು ಕೇವಲ ‘ಪ್ರವೇಶ ಪ್ರಕ್ರಿಯೆಗೆ’ ಮಾತ್ರ ಅನ್ವಯಿಸುತ್ತದೆಯೇ ಹೊರತು, ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ರಿಯಾಯಿತಿ ಶುಲ್ಕವನ್ನು ಪಡೆಯಲು ಯಾವುದೇ ಹಕ್ಕು ನೀಡುವುದಿಲ್ಲ ಎಂಬ ರಾಜಸ್ಥಾನ ಹೈಕೋರ್ಟ್‌ನ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನ್ಯಾಯಪೀಠ ನಿರಾಕರಿಸಿದೆ.

- Advertisement -

ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರಿದ್ದ ವಿಭಾಗೀಯ ಪೀಠವು ಈ ಮಹತ್ವದ ಆದೇಶ ನೀಡಿದೆ. EWS ಮೀಸಲಾತಿಯಡಿ ಬರುವ ಕುಟುಂಬಗಳ ವಾರ್ಷಿಕ ಆದಾಯದ ಮಿತಿಯನ್ನು 8 ಲಕ್ಷಕ್ಕೆ ನಿಗದಿಪಡಿಸಲಾಗಿದೆ. ಆದರೆ, ರಾಜಸ್ಥಾನದ ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ವಾರ್ಷಿಕ ಬೋಧನಾ ಶುಲ್ಕ 18.9 ಲಕ್ಷದಿಂದ 25 ಲಕ್ಷದವರೆಗೆ ಇದೆ. ಕೇವಲ 8 ಲಕ್ಷದ ಆದಾಯ ಮಿತಿ ಇರುವ ಕುಟುಂಬದ ವಿದ್ಯಾರ್ಥಿಗಳು ಇಷ್ಟು ದೊಡ್ಡ ಮೊತ್ತದ ಶುಲ್ಕವನ್ನು ಭರಿಸಲು ಹೇಗೆ ಸಾಧ್ಯ? ಇದು ಪ್ರಾಯೋಗಿಕವಾಗಿ EWS ಮೀಸಲಾತಿಯ ಮೂಲ ಉದ್ದೇಶವನ್ನೇ ನಿಷ್ಪ್ರಯೋಜಕಗೊಳಿಸುತ್ತದೆ ಎಂದು ಹರ್ಷವರ್ಧನ್ ಸಿಂಗ್ ಎಂಬ ವಿದ್ಯಾರ್ಥಿಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಈ ವಾದದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು, “ಸರ್ಕಾರಿ ಕಾಲೇಜುಗಳ ಮಾದರಿಯಲ್ಲಿಯೇ ಖಾಸಗಿ ಶಿಕ್ಷಣ ಸಂಸ್ಥೆಗಳೂ ಶುಲ್ಕ ವಿಧಿಸಬೇಕು ಎಂದು ನೀವು ಹೇಳುವಂತಿಲ್ಲ. ಖಾಸಗಿ ಕಾಲೇಜುಗಳು ಸ್ವಯಂ-ಹಣಕಾಸು (Self-financing) ಸಂಸ್ಥೆಗಳಾಗಿವೆ. ಸರ್ಕಾರಿ ಕಾಲೇಜುಗಳಿಗೆ ರಾಜ್ಯ ಸರ್ಕಾರದಿಂದ ಅನುದಾನ ಸಿಗುತ್ತದೆ, ಹೀಗಾಗಿ ಅವೆರಡರ ನಡುವೆ ಪ್ರಮುಖ ವ್ಯತ್ಯಾಸವಿದೆ” ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ಖಾಸಗಿ ಕಾಲೇಜುಗಳಲ್ಲಿ ಶುಲ್ಕ ದುಬಾರಿಯಾಗಿದೆ ಎಂಬ ಒಂದೇ ಕಾರಣಕ್ಕೆ ಅದನ್ನು ಸರ್ಕಾರಿ ಕಾಲೇಜುಗಳ ಶುಲ್ಕಕ್ಕೆ ಸರಿಗಟ್ಟುವಂತೆ ಆದೇಶಿಸಲು ಸಾಧ್ಯವಿಲ್ಲ ಎಂದು ಪೀಠವು ತಿಳಿಸಿತು.

ಇದನ್ನು ಓದಿದ್ದೀರಾ? ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಕುಟುಂಬದಿಂದ ನೂರಾರು ಎಕರೆ ಭೂಮಿ ಖರೀದಿ

ವೈದ್ಯಕೀಯ ಶಿಕ್ಷಣದಲ್ಲಿ ಖಾಸಗಿ ಸಂಸ್ಥೆಗಳ ಪಾತ್ರವನ್ನು ಕಡೆಗಣಿಸುವಂತಿಲ್ಲ ಎಂದ ನ್ಯಾಯಪೀಠವು, “ಒಂದು ವೇಳೆ ಖಾಸಗಿ ಕಾಲೇಜುಗಳ ಶುಲ್ಕವನ್ನು ಕಡಿತಗೊಳಿಸುವಂತೆ ಬಲವಂತಪಡಿಸಿದರೆ, ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಕ್ಕೆ ಅವರು ನೀಡುತ್ತಿರುವ ನೆರವು ನಿಂತುಹೋಗುತ್ತದೆ ಮತ್ತು ಆ ಕಾಲೇಜುಗಳು ಮುಚ್ಚಿಹೋಗಬಹುದು. ನಮ್ಮ ದೇಶಕ್ಕೆ ವೈದ್ಯರ ಅತ್ಯಗತ್ಯವಿದೆ” ಎಂದು ಅಭಿಪ್ರಾಯಪಟ್ಟಿತು. ಪ್ರತಿಷ್ಠಿತ ‘ಟಿ.ಎಂ.ಎ. ಪೈ’ ಪ್ರಕರಣದ ತೀರ್ಪನ್ನು ಉಲ್ಲೇಖಿಸಿದ ನ್ಯಾಯಾಲಯ, ‘ಕ್ಯಾಪಿಟೇಷನ್ ಶುಲ್ಕ (Capitation fee) ಪಡೆಯುವುದನ್ನು ನಿಷೇಧಿಸಲಾಗಿದೆ, ಆದರೆ ಇದರರ್ಥ ಕಾಲೇಜಿನ ಸಾಮಾನ್ಯ ಶುಲ್ಕವನ್ನೇ ಪಡೆಯಬಾರದು ಎಂದಲ್ಲ’ ಎಂದು ಕಿವಿಮಾತು ಹೇಳಿತು.

ಖಾಸಗಿ ಕಾಲೇಜುಗಳ ಶುಲ್ಕ ಭರಿಸುವ ಸಾಮರ್ಥ್ಯದ ಕುರಿತು ಮಾತನಾಡಿದ ನ್ಯಾಯಾಲಯ, “ಒಂದು ವೇಳೆ ನಿಮಗೆ ಶುಲ್ಕ ಪಾವತಿಸಲು ಸಾಧ್ಯವಾಗದಿದ್ದರೆ, ವಿದ್ಯಾರ್ಥಿವೇತನ ಅಥವಾ ಆರ್ಥಿಕ ನೆರವು ಪಡೆಯಲು ಪ್ರಯತ್ನಿಸಿ. ಇಲ್ಲವೇ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿಯೇ ಸೀಟು ಪಡೆಯಿರಿ” ಎಂದು ಸಲಹೆ ನೀಡಿತು. ಈ ಮೂಲಕ, ರಾಜ್ಯ ಶುಲ್ಕ ನಿಯಂತ್ರಣ ಸಮಿತಿಯು ನಿಗದಿಪಡಿಸಿದ ಶುಲ್ಕ ರಚನೆಯನ್ನು ಎತ್ತಿಹಿಡಿದ ರಾಜಸ್ಥಾನ ಹೈಕೋರ್ಟ್‌ನ ಕ್ರಮವನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿದ್ದು, ಮಧ್ಯಪ್ರವೇಶಿಸಲು ಯಾವುದೇ ಕಾರಣಗಳಿಲ್ಲ ಎಂದು ಮೇಲ್ಮನವಿಯನ್ನು ವಜಾಗೊಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಭಾರತದಿಂದ ಪಾಕಿಸ್ತಾನದವರೆಗೆ ಎಲ್ಲರಿಗೂ ಆಹ್ವಾನ’: ಮಗಳ ಮದುವೆ ಕುರಿತು ಅನಂತ್ ಸಿಂಗ್ ಹೇಳಿಕೆ

ಜೆಡಿಯು ಪಕ್ಷದಿಂದ ಉಚ್ಚಾಟನೆಗೊಂಡಿರುವ ಬಿಹಾರದ ಪ್ರಭಾವಿ ನಾಯಕ ಅನಂತ್ ಸಿಂಗ್, ತಮ್ಮ...

ಆಂಧ್ರ ಸ್ಥಳೀಯ ಚುನಾವಣೆ: ಎನ್‌ಡಿಎ ಮೈತ್ರಿಗೆ ಗೆಲುವು; ‘ಚುನಾವಣಾ ಅಕ್ರಮ’ ಆರೋಪಿಸಿದ ಜಗನ್ ರೆಡ್ಡಿ

ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಖ್ಯಮಂತ್ರಿ ಎನ್. ಚಂದ್ರಬಾಬು...

ನಕಲಿ ವೈದ್ಯಕೀಯ ಪದವಿಗಳ ವಿವಾದ; 1.1 ಲಕ್ಷ ವೈದ್ಯರ ಪ್ರಮಾಣಪತ್ರಗಳ ಪರಿಶೀಲನೆಗೆ ನಿರ್ಧಾರ

ಪಶ್ಚಿಮ ಬಂಗಾಳ ವೈದ್ಯಕೀಯ ಮಂಡಳಿಯಲ್ಲಿ (WBMC) 1996ರಿಂದ ನೋಂದಾಯಿಸಿಕೊಂಡಿರುವ ಸುಮಾರು 1.1...

ಸಿಇಸಿ ಗ್ಯಾನೇಶ್ ಕುಮಾರ್ ವಜಾಗೊಳ್ಳುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ: ಕೆ ಸಿ ವೇಣುಗೋಪಾಲ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವವರೆಗೆ...