ಸದ್ಯಕ್ಕೆ ಎಥೆನಾಲ್-25 ಇಂಧನ ಬಿಡುಗಡೆಯಿಲ್ಲ: ಕೇಂದ್ರ ಸರ್ಕಾರ

Date:

ಎಥೆನಾಲ್ ಮಿಶ್ರಿತ ಪೆಟ್ರೋಲ್‌ನಿಂದ ವಾಹನಗಳಿಗೆ ಆಗುತ್ತಿರುವ ಹಾನಿ ಮತ್ತು ಮೈಲೇಜ್ ಕುಸಿತದ ವಿರುದ್ಧ ದೆಹಲಿ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಆರಂಭವಾಗಿವೆ. ಹಳೆಯ ವಾಹನಗಳ ಎಂಜಿನ್ ಮತ್ತು ಬಿಡಿಭಾಗಗಳು ಹಾಳಾಗುತ್ತಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದೇಶಾದ್ಯಂತ ವಿರೋಧ ವ್ಯಕ್ತವಾದ ಹಿನ್ನೆಲೆ ಕೇಂದ್ರ ಸರ್ಕಾರ E25ನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ದಿನಾಂಕವನ್ನು ಮುಂದೂಡಿದೆ. ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ.

- Advertisement -

ಸದ್ಯಕ್ಕೆ ದೇಶದಲ್ಲಿ ಇ-25 (E25) ಪೆಟ್ರೋಲ್ ಬಿಡುಗಡೆ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ ಮತ್ತು ಈ ಬಗ್ಗೆ ಯಾವುದೇ ಅಧಿಕೃತ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಸರ್ಕಾರಿ ಮೂಲಗಳು ಸ್ಪಷ್ಟಪಡಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಇ-25 ಪೆಟ್ರೋಲ್ ಬಿಡುಗಡೆಗೆ ದಿನಾಂಕ ನಿಗದಿಪಡಿಸಲಾಗಿದೆ ಎಂಬ ವರದಿಗಳನ್ನು ಸರ್ಕಾರ ಸಂಪೂರ್ಣವಾಗಿ ತಳ್ಳಿಹಾಕಿದೆ. “ಪರೀಕ್ಷಾರ್ಥ ಹಂತವೇ ಇನ್ನೂ ಮುಗಿದಿಲ್ಲದಿರುವಾಗ, ಇ-25 ಬಿಡುಗಡೆಗೆ ಹೇಗೆ ದಿನಾಂಕ ನಿಗದಿಪಡಿಸಲು ಸಾಧ್ಯ? ಪ್ರಸ್ತುತ ವಿವಿಧ ವಾಹನ ತಯಾರಕರು ಮತ್ತು ವಾಹನ ಮಾದರಿಗಳಲ್ಲಿ ಇ-25 ಇಂಧನದ ಹೊಂದಾಣಿಕೆಯ ಕುರಿತು ಪರೀಕ್ಷೆಗಳು ನಡೆಯುತ್ತಿವೆ. ಅಂತಿಮ ವರದಿ ಬಂದ ನಂತರವಷ್ಟೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ವಯನಾಡ್ | ಸುರಂಗ ಮಾರ್ಗ ಯೋಜನಾ ಪ್ರದೇಶದಲ್ಲಿ ಭೀಕರ ಭೂಕುಸಿತ; ಹಲವರು ಸಿಲುಕಿರುವ ಆತಂಕ

ಇ-15 (ಏಪ್ರಿಲ್ 2023), ಇ-19 (ಏಪ್ರಿಲ್ 2024) ಮತ್ತು ಇ-20 (ಏಪ್ರಿಲ್ 2025) ಹೀಗೆ ಹಂತ ಹಂತವಾಗಿ ವೈಜ್ಞಾನಿಕ ಮೌಲ್ಯಮಾಪನ ನಡೆಸಿ ಈ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ಪ್ರಸ್ತುತ ದೇಶದಲ್ಲಿ ಸುಮಾರು 20 ಕೋಟಿ ದ್ವಿಚಕ್ರ ವಾಹನಗಳು ಮತ್ತು 20 ಲಕ್ಷ ಕಾರುಗಳು ಈ ಇಂಧನವನ್ನು ಬಳಸುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಈ ದಿನ ಸಂಪಾದಕೀಯ | ಪ್ರಬುದ್ಧತೆಯತ್ತ ರಾಹುಲ್, ಪಥಭ್ರಾಂತದತ್ತ ಮೋದಿ

ದೇಶದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಕಳೆಗಟ್ಟುತ್ತಿರುವ ಜೆನ್-ಝಿ ಹೋರಾಟ, ಕೇಂದ್ರ ಸರ್ಕಾರದ...

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...