ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಗೊಳಿಸುವಂತೆ ಕೋರಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಕಳೆದ ತಿಂಗಳು ದೆಹಲಿ ಹೈಕೋರ್ಟ್‌ನಲ್ಲಿ ವಜಾಗೊಂಡ ಅರ್ಜಿಯನ್ನು ಕಾಂತ್ ಭಾಟಿ ಎಂಬುವವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾ ಅವರಿದ್ದ ಪೀಠವು, ಈ ಪರಿಸ್ಥಿತಿಯಲ್ಲಿ ಮಧ್ಯಪ್ರವೇಶಿಸಬೇಕಾದರೆ ಅಥವಾ ಮಧ್ಯ ಪ್ರವೇಶಿಸಲು ನಿರಾಕರಿಸಬೇಕೆಂದರೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅಧಿಕಾರ ಕೈಗೊಳ್ಳುತ್ತಾರೆ. ಈ ಅರ್ಜಿಯು ಯಾವುದೇ ಕಾನೂನಿನ ಅರ್ಹತೆಯನ್ನು ಹೊಂದಿಲ್ಲ. ಅಂತಿಮವಾಗಿ ಇದು ಶಿಷ್ಟಾಚಾರದ ವಿಷಯವಾಗಿದೆ. ನಾವು ಇದನ್ನು ಹೇಗೆ ನಿರ್ವಹಿಸುವುದು. ಅಗತ್ಯವಿದ್ದರೆ ಲೆಫ್ಟಿನೆಂಟ್ ಗವರ್ನರ್ ಕೈಗೊಳ್ಳುತ್ತಾರೆ” ಎಂದು ತೀರ್ಪು ನೀಡಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂರುಗಳಿಗೆ ಬೆಲೆ ಇಲ್ಲ, ಕ್ರಮ ಕೈಗೊಳ್ಳಲ್ಲ, ಆಯೋಗಕ್ಕೆ ಹಲ್ಲೂ ಇಲ್ಲ
2019ರಲ್ಲಿಯೂ ಕೂಡ ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರ ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಗೊಳಿಸುವಂತೆ ಕೋರಲಾಗಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.
ದೆಹಲಿ ಅಬಕಾರಿ ಹಗರಣದಲ್ಲಿ ಭಾಗಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾ.21ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಚುನಾವಣಾ ಪ್ರಚಾರದ ಕಾರಣ ಮೇ.10 ರಂದು ಸುಪ್ರೀಂ ಕೋರ್ಟ್ ಜೂ.1ರವರೆಗೂ ಮಧ್ಯಂತರ ಜಾಮೀನು ನೀಡಿದೆ. ದೆಹಲಿಯಲ್ಲಿ ಮೇ.25 ರಂದು ಲೋಕಸಭಾ ಚುನಾವಣೆಗಳು ನಡೆಯಲಿವೆ.
