ಸಿಎಂ ಸ್ಥಾನದಿಂದ ಕೇಜ್ರಿವಾಲ್‌ರನ್ನು ಪದಚ್ಯುತಗೊಳಿಸುವ ಅರ್ಜಿ ವಜಾಗೊಳಿಸಿದ ಸುಪ್ರೀಂ

Date:

ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಗೊಳಿಸುವಂತೆ ಕೋರಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

- Advertisement -

ಕಳೆದ ತಿಂಗಳು ದೆಹಲಿ ಹೈಕೋರ್ಟ್‌ನಲ್ಲಿ ವಜಾಗೊಂಡ ಅರ್ಜಿಯನ್ನು ಕಾಂತ್‌ ಭಾಟಿ ಎಂಬುವವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಂಕರ್‌ ದತ್ತಾ ಅವರಿದ್ದ ಪೀಠವು, ಈ ಪರಿಸ್ಥಿತಿಯಲ್ಲಿ ಮಧ್ಯಪ್ರವೇಶಿಸಬೇಕಾದರೆ ಅಥವಾ ಮಧ್ಯ ಪ್ರವೇಶಿಸಲು ನಿರಾಕರಿಸಬೇಕೆಂದರೆ ದೆಹಲಿಯ ಲೆಫ್ಟಿನೆಂಟ್‌ ಗವರ್ನರ್‌ ಅಧಿಕಾರ ಕೈಗೊಳ್ಳುತ್ತಾರೆ. ಈ ಅರ್ಜಿಯು ಯಾವುದೇ ಕಾನೂನಿನ ಅರ್ಹತೆಯನ್ನು ಹೊಂದಿಲ್ಲ. ಅಂತಿಮವಾಗಿ ಇದು ಶಿಷ್ಟಾಚಾರದ ವಿಷಯವಾಗಿದೆ. ನಾವು ಇದನ್ನು ಹೇಗೆ ನಿರ್ವಹಿಸುವುದು. ಅಗತ್ಯವಿದ್ದರೆ ಲೆಫ್ಟಿನೆಂಟ್ ಗವರ್ನರ್‌ ಕೈಗೊಳ್ಳುತ್ತಾರೆ” ಎಂದು ತೀರ್ಪು ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂರುಗಳಿಗೆ ಬೆಲೆ ಇಲ್ಲ, ಕ್ರಮ ಕೈಗೊಳ್ಳಲ್ಲ, ಆಯೋಗಕ್ಕೆ ಹಲ್ಲೂ ಇಲ್ಲ

2019ರಲ್ಲಿಯೂ ಕೂಡ ಸುಪ್ರೀಂ ಕೋರ್ಟ್ ಅರವಿಂದ್‌ ಕೇಜ್ರಿವಾಲ್‌ ಅವರ ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಗೊಳಿಸುವಂತೆ ಕೋರಲಾಗಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.

ದೆಹಲಿ ಅಬಕಾರಿ ಹಗರಣದಲ್ಲಿ ಭಾಗಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಮಾ.21ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಚುನಾವಣಾ ಪ್ರಚಾರದ ಕಾರಣ ಮೇ.10 ರಂದು ಸುಪ್ರೀಂ ಕೋರ್ಟ್ ಜೂ.1ರವರೆಗೂ ಮಧ್ಯಂತರ ಜಾಮೀನು ನೀಡಿದೆ. ದೆಹಲಿಯಲ್ಲಿ ಮೇ.25 ರಂದು ಲೋಕಸಭಾ ಚುನಾವಣೆಗಳು ನಡೆಯಲಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...