ಇನ್ಮುಂದೆ ’10 ನಿಮಿಷದ ಡೆಲಿವರಿ’ ಇಲ್ಲ: ಬ್ಲಿಂಕಿಟ್, ಜೆಪ್ಟೋಗೆ ಕೇಂದ್ರದ ಸೂಚನೆ; ಡೆಲಿವರಿ ಬಾಯ್ಸ್ ಸುರಕ್ಷತೆಗೆ ಆದ್ಯತೆ

Date:

ಇ-ಕಾಮರ್ಸ್ ವಲಯದಲ್ಲಿ ತೀವ್ರ ಪೈಪೋಟಿ ಹುಟ್ಟುಹಾಕಿದ್ದ ’10 ನಿಮಿಷಗಳಲ್ಲಿ ಡೆಲಿವರಿ’ ಸೇವೆಗೆ ಇದೀಗ ಕೇಂದ್ರ ಸರ್ಕಾರ ಕಡಿವಾಣ ಹಾಕಿದೆ. ಡೆಲಿವರಿ ಪಾರ್ಟ್ನರ್‌ಗಳ (ಡೆಲಿವರಿ ಬಾಯ್ಸ್) ಸುರಕ್ಷತೆಗೆ ಮೊದಲ ಆದ್ಯತೆ ನೀಡುವಂತೆ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರು ಬ್ಲಿಂಕಿಟ್ (Blinkit), ಜೆಪ್ಟೋ (Zepto) ಸೇರಿದಂತೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಗಳಿಗೆ ಸೂಚನೆ ನೀಡಿದ್ದಾರೆ.

- Advertisement -

​ಈ ಬೆಳವಣಿಗೆಯ ನಂತರ, ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ತಮ್ಮ ಪ್ರಚಾರದ ಸ್ಲೋಗನ್‌ಗಳಿಂದ ’10 ನಿಮಿಷದ ಡೆಲಿವರಿ’ ಎಂಬ ಭರವಸೆಯನ್ನು ಕೈಬಿಡಬೇಕಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

ಕೇಂದ್ರ ಸಚಿವ ಮಾಂಡವಿಯಾ ಅವರು ಇತ್ತೀಚೆಗೆ ಝೊಮ್ಯಾಟೊ, ಸ್ವಿಗ್ಗಿ, ಬ್ಲಿಂಕಿಟ್ ಮತ್ತು ಜೆಪ್ಟೋದಂತಹ ಪ್ರಮುಖ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಡೆಲಿವರಿ ಸಮಯದ ಮಿತಿ ಮತ್ತು ಅದರಿಂದಾಗುತ್ತಿರುವ ಒತ್ತಡದ ಬಗ್ಗೆ ಕಳವಳ ವ್ಯಕ್ತಪಡಿಸಲಾಯಿತು. ಡೆಲಿವರಿ ಸಿಬ್ಬಂದಿಯ ಪ್ರಾಣದ ಹಂಗು ತೊರೆದು ಓಡಾಡುವುದನ್ನು ತಪ್ಪಿಸಲು ಸುರಕ್ಷತಾ ಕ್ರಮಗಳಿಗೆ ಒತ್ತು ನೀಡುವಂತೆ ನಿರ್ದೇಶಿಸಲಾಗಿದೆ.

​ಈಗಾಗಲೇ ಬ್ಲಿಂಕಿಟ್ ತನ್ನ ಟ್ಯಾಗ್‌ಲೈನ್ ಅನ್ನು ಪರಿಷ್ಕರಿಸಿದೆ. ಈ ಹಿಂದೆ ಇದ್ದ “10 ನಿಮಿಷಗಳಲ್ಲಿ 10,000ಕ್ಕೂ ಹೆಚ್ಚು ಉತ್ಪನ್ನಗಳ ಡೆಲಿವರಿ” ಎಂಬ ವಾಕ್ಯದ ಬದಲಿಗೆ, “30,000ಕ್ಕೂ ಹೆಚ್ಚು ಉತ್ಪನ್ನಗಳು ನಿಮ್ಮ ಮನೆ ಬಾಗಿಲಿಗೆ” ಎಂದು ಬದಲಾಯಿಸಿಕೊಂಡಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಯ್ದೆ-ಕಾನೂನುಗಳು ಬಡವರ ವಿರುದ್ಧವೇ ಅಥವಾ ಪ್ರಭಾವಿಗಳ ಪರವೇ?

10 ನಿಮಿಷಗಳ ಡೆಲಿವರಿ ಭರವಸೆಯು ಸಾರ್ವಜನಿಕ ವಲಯದಲ್ಲಿಯೂ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದು ರಸ್ತೆ ಸುರಕ್ಷತೆ ಮತ್ತು ಡೆಲಿವರಿ ಸಿಬ್ಬಂದಿಯ ಜೀವಕ್ಕೆ ಅಪಾಯ ತಂದೊಡ್ಡುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

​ಡಿಸೆಂಬರ್ 25 ರಂದು ಗಿಗ್ ಕಾರ್ಮಿಕರ ಒಕ್ಕೂಟಗಳು ಉತ್ತಮ ವೇತನ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದವು. ​ಅವೈಜ್ಞಾನಿಕವಾದ ಸಮಯ ಆಧಾರಿತ ಡೆಲಿವರಿ ಗುರಿಗಳನ್ನು ಕೈಬಿಡಬೇಕೆಂದು ಒತ್ತಾಯಿಸಿದ್ದವು.

​ತಮ್ಮ ಬೇಡಿಕೆಗಳು ಈಡೇರದಿದ್ದರೆ ಡಿಸೆಂಬರ್ 31 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದವು. ಈ ಎಚ್ಚರಿಕೆಯ ಬೆನ್ನಲ್ಲೇ ಸ್ವಿಗ್ಗಿ ಮತ್ತು ಝೊಮ್ಯಾಟೊ ಸಂಸ್ಥೆಗಳು ಪ್ರೋತ್ಸಾಹಕ ಧನವನ್ನು ಹೆಚ್ಚಿಸಿವೆ.

ಗಿಗ್ ಕಾರ್ಮಿಕರಿಗೂ ಕನಿಷ್ಠ ವೇತನ, ಆರೋಗ್ಯ, ಔದ್ಯೋಗಿಕ ಸುರಕ್ಷತೆ ಮತ್ತು ಇತರೆ ಸೌಲಭ್ಯಗಳನ್ನು ಒದಗಿಸುವ ‘ಸಾಮಾಜಿಕ ಭದ್ರತಾ ಸಂಹಿತೆ-2020’ರ ಕರಡು ನಿಯಮಗಳನ್ನು ಕೇಂದ್ರ ಕಾರ್ಮಿಕ ಸಚಿವಾಲಯ ಪ್ರಕಟಿಸಿದೆ. ಬರುವ ಏಪ್ರಿಲ್ 1 ರಿಂದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರಲು ಸರ್ಕಾರ ಉದ್ದೇಶಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ಕೇವಲ 1 ಲಕ್ಷ ವಿಲೇವಾರಿ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್ಐಆರ್) ಸಂಬಂಧಿಸಿದಂತೆ...

ದೆಹಲಿಯಲ್ಲಿ ಘೋರ ಕ್ರೌರ್ಯ: ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಶವ ತಿಂದ ಬೀದಿ ನಾಯಿಗಳು

ಹದಿನೇಳು ವರ್ಷದ ಅಪ್ರಾಪ್ತೆಯನ್ನು ಸಾಮೂಹಿಕ ಅತ್ಯಾಚಾರಗೈದು, ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ...

ಮೊಬೈಲ್ EMI ಕಟ್ಟದಿದ್ದಕ್ಕೆ ಅಪಹರಣ: ಯುವಕನ ರಕ್ತ ತೆಗೆದು ಮಾರಿದ ವಸೂಲಿ ಏಜೆಂಟರು

ಮೊಬೈಲ್ ಫೋನ್ ಖರೀದಿಸಿ ಅದರ ಕಂತು (ಇಎಂಐ) ಕಟ್ಟದಿದ್ದಕ್ಕೆ ಯುವಕನೊಬ್ಬನನ್ನು ಅಪಹರಿಸಿ,...

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ...