ಸರ್ಕಾರಿ ಉದ್ಯೋಗ ಪರೀಕ್ಷೆಗೆ ಇನ್ನು ಶುಲ್ಕವಿಲ್ಲ: ಬಂಗಾಳ ಸಿಎಂ ಸುವೇಂದು ಅಧಿಕಾರಿ ಘೋಷಣೆ!

Date:

ಪಶ್ಚಿಮ ಬಂಗಾಳದ ಯುವಜನತೆ ಮತ್ತು ಉದ್ಯೋಗ ಆಕಾಂಕ್ಷಿಗಳಿಗೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಸಿಹಿಸುದ್ದಿ ನೀಡಿದ್ದಾರೆ. ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ಅರ್ಜಿ ಶುಲ್ಕವನ್ನು ಸಂಪೂರ್ಣವಾಗಿ ರದ್ದುಗೊಳಿಸುವುದಾಗಿ ಘೋಷಿಸಿರುವ ಅವರು, ನಿರುದ್ಯೋಗಿ ಯುವಕರಿಗೆ ಆರ್ಥಿಕ ನೆರವು ನೀಡುವ ‘ಭರೋಸಾ’ ಯೋಜನೆ ಹಾಗೂ ಮುಂದಿನ ಐದು ವರ್ಷಗಳಲ್ಲಿ ಒಂದು ಲಕ್ಷ ಉದ್ಯೋಗ ಸೃಷ್ಟಿಸುವ ಗುರಿಯನ್ನು ಪ್ರಕಟಿಸಿದ್ದಾರೆ.

- Advertisement -

ಪಶ್ಚಿಮ ಮೇದಿನಿಪುರ ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿಗಳು, ಹಿಂದಿನ ಸರ್ಕಾರದ ಆಡಳಿತ ವೈಖರಿಯನ್ನು ತೀವ್ರವಾಗಿ ಟೀಕಿಸುವುದರ ಜೊತೆಗೆ, ರಾಜ್ಯದ ಕೈಗಾರಿಕಾ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಕುರಿತು ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಉದ್ಯೋಗಾಕಾಂಕ್ಷಿಗಳಿಗೆ ಪ್ರಮುಖ ಕೊಡುಗೆಗಳು:-

ರಾಜ್ಯ ಸರ್ಕಾರದ ನೇಮಕಾತಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇನ್ನು ಮುಂದೆ ಯಾವುದೇ ಶುಲ್ಕ ಪಾವತಿಸುವಂತಿಲ್ಲ. ಬಿಜೆಪಿಯ ಚುನಾವಣಾ ಪ್ರಣಾಳಿಕೆ ‘ಸಂಕಲ್ಪ ಪತ್ರ’ದ ಭರವಸೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳಲಿದೆ.

2027ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ಹುದ್ದೆಗಳ ಗರಿಷ್ಠ ವಯೋಮಿತಿಯಲ್ಲಿ ಎರಡು ವರ್ಷಗಳ ಸಡಿಲಿಕೆ ನೀಡಲಾಗುವುದು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಪದವೀಧರರು ಮತ್ತು ಪದವೀಧರರಲ್ಲದ ಅಭ್ಯರ್ಥಿಗಳಿಗೆ ಎರಡು ಪ್ರತ್ಯೇಕ ವಿಭಾಗಗಳಲ್ಲಿ, ಉದ್ಯೋಗ ಸಿಗುವವರೆಗೆ ಅಥವಾ ಕನಿಷ್ಠ ಐದು ವರ್ಷಗಳ ಕಾಲ ಸರ್ಕಾರದಿಂದ ಆರ್ಥಿಕ ಭತ್ಯೆ ನೀಡಲಾಗುವುದು.

ವಿದ್ಯಾರ್ಥಿನಿಯರಿಗೆ ‘ಭಗಿನಿ ನಿವೇದಿತಾ’ ಯೋಜನೆಯಡಿ ಬೋರ್ಡ್ ಪರೀಕ್ಷೆಗಳ ನಂತರ ಉನ್ನತ ಶಿಕ್ಷಣ ಮುಂದುವರಿಸುವ ವಿದ್ಯಾರ್ಥಿನಿಯರಿಗೆ ಜನವರಿಯಿಂದ ಮೂರು ವರ್ಷಗಳ ಅವಧಿಗೆ ಒಟ್ಟು ₹50,000 ಆರ್ಥಿಕ ನೆರವು (ಮೊದಲ ಎರಡು ವರ್ಷ ತಲಾ ₹17,000 ಮತ್ತು ಮೂರನೇ ವರ್ಷ ₹16,000) ನೀಡಲಾಗುವುದು.

ಮುಂದಿನ ಐದು ವರ್ಷಗಳಲ್ಲಿ ಶಿಕ್ಷಣ ಮತ್ತು ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ವಿಭಾಗಗಳಲ್ಲಿ 1 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಗುರಿ ಹೊಂದಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಶಾಲಾ ಸೇವಾ ಆಯೋಗ (SSC) ಮತ್ತು ಲೋಕಸೇವಾ ಆಯೋಗಕ್ಕೆ (PSC) ಹೊಸ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ. 

ತಕ್ಷಣದ ಕ್ರಮವಾಗಿ ಮುಂದಿನ ತಿಂಗಳು ರಾಜ್ಯ ಪೊಲೀಸ್ ಇಲಾಖೆಗೆ 1,331 ಸಬ್-ಇನ್‌ಸ್ಪೆಕ್ಟರ್‌ಗಳ ಸೇರ್ಪಡೆಯಾಗಲಿದೆ.

ಜನವರಿಯಲ್ಲಿ ಕೋಲ್ಕತ್ತಾ ಪೊಲೀಸ್ ವಿಭಾಗಕ್ಕೆ 4,000 ಕಾನ್‌ಸ್ಟೇಬಲ್‌ಗಳ ನೇಮಕಾತಿ ನಡೆಯಲಿದೆ.

ಈ ತಿಂಗಳ ಅಂತ್ಯದೊಳಗೆ ಪಶ್ಚಿಮ ಬಂಗಾಳ ಪೊಲೀಸ್ ನೇಮಕಾತಿಯ ಹೊಸ ಅಧಿಸೂಚನೆ ಪ್ರಕಟವಾಗಲಿದೆ.

ಸರ್ಕಾರಿ ಉದ್ಯೋಗಗಳ ಜೊತೆಗೆ ಖಾಸಗಿ ಹೂಡಿಕೆ ಮತ್ತು ಸ್ವಯಂ ಉದ್ಯೋಗಕ್ಕೂ ಸರ್ಕಾರ ಒತ್ತು ನೀಡಿದೆ. ಜಿಲ್ಲಾ ಪೊಲೀಸರ ‘ಪೇಸ್’ ಉಪಕ್ರಮದಡಿ ವಿದ್ಯಾಸಾಗರ್ ಇಂಡಸ್ಟ್ರಿಯಲ್ ಪಾರ್ಕ್ ಮತ್ತು ಬೆಂಗಾಲ್ ಎನರ್ಜಿ ಸೇರಿದಂತೆ ವಿವಿಧ ಕೈಗಾರಿಕಾ ಘಟಕಗಳಲ್ಲಿ ಆಯ್ಕೆಯಾದ 600 ನಿರುದ್ಯೋಗಿ ಯುವಕರಿಗೆ ಮುಖ್ಯಮಂತ್ರಿಗಳು ನೇಮಕಾತಿ ಪತ್ರಗಳನ್ನು ವಿತರಿಸಿದರು.

ಕೈಗಾರಿಕೆಗಳಿಗೆ ನೀಡುವ ಸರ್ಕಾರಿ ಪ್ರೋತ್ಸಾಹಧನವನ್ನು ಅವು ಸೃಷ್ಟಿಸುವ ಉದ್ಯೋಗಗಳ ಸಂಖ್ಯೆಗೆ ಜೋಡಿಸಲಾಗುವುದು ಎಂದು ಸುವೇಂದು ಅಧಿಕಾರಿ ಸ್ಪಷ್ಟಪಡಿಸಿದರು. ಅಲ್ಲದೆ, ಸಾಲ್ಬೋನಿಯಲ್ಲಿ ಜಿಂದಾಲ್ ಗ್ರೂಪ್‌ನ ಎರಡನೇ ಘಟಕ ಸ್ಥಾಪನೆಗೆ ಮಾತುಕತೆ ಅಂತಿಮ ಹಂತದಲ್ಲಿದ್ದು, ಡಿಸೆಂಬರ್ ಅಂತ್ಯದೊಳಗೆ ಸಾರ್ವಜನಿಕ ಅಹವಾಲು ಪ್ರಕ್ರಿಯೆ ಪೂರ್ಣಗೊಳಿಸಿ ಜನವರಿಯಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು. ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೇಕೆ ಸಾಕಾಣಿಕೆ ಮತ್ತು ಆಹಾರ ಸಂಸ್ಕರಣಾ ಕ್ಷೇತ್ರಗಳಲ್ಲಿ ಸಹಕಾರಿ ಸಂಘಗಳ ಮೂಲಕ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡಲಾಗುವುದು ಎಂದಿದ್ದಾರೆ. 

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ ಕ್ರಿಕೆಟ್‌ಗೆ ಎಂ.ಎಸ್. ಧೋನಿ ವಿದಾಯ: 2027ರ ಆವೃತ್ತಿಗೆ ಸಿಎಸ್‌ಕೆ ತಂಡದ ಮೆಂಟರ್ ಆಗಿ ನೇಮಕ

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ನೆಚ್ಚಿನ ನಾಯಕ, ಹಾಗೂ ವಿಶ್ವ...

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರದ ನಿರೀಕ್ಷೆ ಇದೆ: ಸಿಎಂ ಡಿ ಕೆ ಶಿವಕುಮಾರ್

ಮಹಿಳಾ ಮೀಸಲಾತಿಯಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದಲಾವಣೆ ಮಹಿಳೆಯರಿಲ್ಲದ ಪ್ರಜಾಪ್ರಭುತ್ವ ರೆಕ್ಕೆಯಿಲ್ಲದ ಹಕ್ಕಿಯಂತೆ ಮಹಿಳಾ...

ಮಂಗಳೂರು | ತುಳು ಸಾಹಿತ್ಯ ಜಗತ್ತಿಗೆ ತಲುಪಲಿ: ಗಣೇಶ್ ಎಸ್ ರಾವ್

ಪ್ರಾದೇಶಿಕ ಭಾಷೆಯ ಸಾಹಿತ್ಯ ಜಾಗತಿಕ ಭಾಷೆಗೆ ಅನುವಾದಗೊಂಡರೆ ದೇಶೀಯ ಸಾಂಸ್ಕೃತಿಕ ಮೌಲ್ಯಗಳು,...