ಪ್ರಧಾನಿಯ ಪದವಿ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್ ತೀರ್ಪು

Date:

Advertisements

ದೆಹಲಿ ವಿಶ್ವವಿದ್ಯಾಲಯವು ಪ್ರಧಾನಿ ನರೇಂದ್ರ ಮೋದಿಯ ಪದವಿ ವಿವರಗಳನ್ನು ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಸೋಮವಾರ ತೀರ್ಪು ನೀಡಿದ್ದು, ಕೇಂದ್ರ ಮಾಹಿತಿ ಆಯುಕ್ತರು ಪದವಿ ವಿವರಗಳನ್ನು ಬಹಿರಂಗಪಡಿಸಲು ನಿರ್ದೇಶಿಸಿದ್ದ ಆದೇಶವನ್ನು ರದ್ದುಗೊಳಿಸಿದೆ.

2016ರಲ್ಲಿ ಸಿಐಸಿ, 1978ರ ಬಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ಅವಕಾಶ ನೀಡುವಂತೆ ಆದೇಶಿಸಿತ್ತು. ಈ ವರ್ಷದಲ್ಲಿ ಪ್ರಧಾನಮಂತ್ರಿ ಮೋದಿಯವರು ಕೂಡ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು ಎಂದು ತಿಳಿಸಲಾಗಿತ್ತು. ಆದರೆ, ಈ ಆದೇಶವನ್ನು ದೆಹಲಿ ವಿಶ್ವವಿದ್ಯಾಲಯವು ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. 2017ರ ಜನವರಿಯಲ್ಲಿ ನಡೆದ ಮೊದಲ ವಿಚಾರಣೆಯಲ್ಲೇ ಕೋರ್ಟ್ ಈ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು.

ವಿಚಾರಣೆಯ ಸಂದರ್ಭದಲ್ಲಿ ದೆಹಲಿ ವಿಶ್ವವಿದ್ಯಾಲಯದ ಪರ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಗೌಪ್ಯತೆಯ ಹಕ್ಕು ತಿಳಿದುಕೊಳ್ಳುವ ಹಕ್ಕಿಗಿಂತ ಮೇಲುಗೈಯಾಗಿದೆ ಎಂದು ವಾದಿಸಿದರು. “ವಿದ್ಯಾರ್ಥಿಗಳ ಮಾಹಿತಿಯನ್ನು ವಿಶ್ವವಿದ್ಯಾಲಯವು ಗೌಪ್ಯವಾಗಿ ಇರಿಸುವ ಜವಾಬ್ದಾರಿಯನ್ನು ಹೊಂದಿದೆ. ಕೇವಲ ಕುತೂಹಲದಿಂದ ಮಾಹಿತಿಯನ್ನು ಬಹಿರಂಗಪಡಿಸುವುದು ಆರ್‌ಟಿಐ ಕಾಯ್ದೆಯ ಉದ್ದೇಶವಲ್ಲ” ಎಂದು ಅವರು ಹೇಳಿದರು. ವಿಶ್ವವಿದ್ಯಾಲಯವು ಪ್ರಧಾನಿಯವರ ಪದವಿ ದಾಖಲೆಗಳನ್ನು ಕೋರ್ಟ್‌ಗೆ ನೀಡಲು ಸಿದ್ಧವಿತ್ತಾದರೂ, ಆರ್‌ಟಿಐ ಕಾಯ್ದೆಯಡಿ ಅಪರಿಚಿತರಿಗೆ ಪರಿಶೀಲನೆಗೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿ ಸಮುದಾಯಗಳಿಗೆ ಅನ್ಯಾಯ – ಜಾತಿಗಣತಿಯ ಮೇಲೂ ಕರಿನೆರಳು: ರಾಹುಲ್‌ ಗಾಂಧಿ ಗಮನಿಸುವರೇ?

ಆರ್‌ಟಿಐ ಅರ್ಜಿದಾರ ನೀರಜ್ ಶರ್ಮಾ ಅವರ ಪರ ವಾದಿಸಿದ ಹಿರಿಯ ವಕೀಲ ಸಂಜಯ್ ಹೆಗ್ಡೆ, ಸಿಐಸಿಯ ಆದೇಶವನ್ನು ಸಮರ್ಥಿಸಿಕೊಂಡರು. “ಪ್ರಧಾನಮಂತ್ರಿಯ ಶೈಕ್ಷಣಿಕ ದಾಖಲೆಗಳನ್ನು ಬಹಿರಂಗಪಡಿಸುವುದು ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಆರ್‌ಟಿಐ ಕಾಯ್ದೆಯಡಿ ಸಮಂಜಸವಾಗಿದೆ. ಯಾವುದೇ ವಿಶ್ವವಿದ್ಯಾಲಯವು ಇಂತಹ ಮಾಹಿತಿಯನ್ನು ಸಾಮಾನ್ಯವಾಗಿ ಪತ್ರಿಕೆಗಳಲ್ಲಿ, ವೆಬ್‌ಸೈಟ್‌ನಲ್ಲಿ ಅಥವಾ ಸೂಚನಾ ಫಲಕದಲ್ಲಿ ಪ್ರಕಟಿಸುತ್ತದೆ” ಎಂದು ಅವರು ವಾದಿಸಿದರು.

ನ್ಯಾಯಮೂರ್ತಿ ಸಚಿನ್ ದತ್ತ ಅವರು ವಿಶ್ವವಿದ್ಯಾಲಯದ ಮನವಿಯನ್ನು ಒಪ್ಪಿಕೊಂಡು, ಸಿಐಸಿಯ ಆದೇಶವನ್ನು ರದ್ದುಗೊಳಿಸಿದರು. ಪ್ರಧಾನಮಂತ್ರಿ ಮೋದಿಯವರ ಶೈಕ್ಷಣಿಕ ದಾಖಲೆಗಳು ರಾಜಕೀಯ ವಿವಾದದ ಕೇಂದ್ರಬಿಂದುವಾಗಿವೆ. ವಿಶೇಷವಾಗಿ ಎಎಪಿ ನೇತೃತ್ವದ ವಿರೋಧ ಪಕ್ಷಗಳು ಅವರ ಪದವಿಗಳ ಸತ್ಯಾಸತ್ಯತೆಯನ್ನು ಪ್ರಶ್ನಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೈಂಗಿಕ ಕಿರುಕುಳ ಆರೋಪ; ಕೇರಳದ ಕಾಂಗ್ರೆಸ್‌ ಶಾಸಕ ಪಕ್ಷದಿಂದ ಅಮಾನತು

ಲೈಂಗಿಕ ಕಿರುಕುಳದ ಆರೋಪಗಳ ತೀವ್ರ ಚರ್ಚೆಯ ನಡುವೆ ಕಾಂಗ್ರೆಸ್ ಶಾಸಕ ರಾಹುಲ್...

ಸಮರ್ಪಕ ಮಾಹಿತಿ ನೀಡದೆಯೇ ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ ಮಾರಾಟ: ಗ್ರಾಹಕ ಹಕ್ಕು ಉಲ್ಲಂಘನೆ

ಪೆಟ್ರೋಲ್‌ನಲ್ಲಿ ಶೇ.20ರಷ್ಟು ಎಥೆನಾಲ್ ಬೆರೆಸಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಎಥೆನಾಲ್‌...

ಲಿಂಗ ತಾರತಮ್ಯ | ಮಹಿಳೆಯರಿಗಿಂತ ಅಧಿಕ ವೇತನ ಪಡೆಯುತ್ತಾರೆ ಪುರುಷ ನರ್ಸ್‌ಗಳು: ಅಧ್ಯಯನ ವರದಿ

ನರ್ಸಿಂಗ್ ಅನ್ನು ಹೆಚ್ಚಾಗಿ ಮಹಿಳೆಯರ ವೃತ್ತಿ ಎಂಬಂತೆ ನೋಡಲಾಗುತ್ತದೆ. ಆದ್ದರಿಂದಾಗಿ ಪುರುಷರು...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

Download Eedina App Android / iOS

X