ಸೋರಿಕೆಯಾಗಿರುವುದಕ್ಕೆ ಸಾಕಷ್ಟು ಪುರಾವೆಯಿಲ್ಲ; ನೀಟ್ – ಯುಜಿ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದ ಸುಪ್ರೀಂ

Date:

ವ್ಯವಸ್ಥಿತವಾಗಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸಾಕಷ್ಟು ಪುರಾವೆಯಿಲ್ಲದ ಕಾರಣ ನೀಟ್‌ – ಯುಜಿ ಪರೀಕ್ಷೆಯನ್ನು ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.ಒಂದು ವೇಳೆ ನೀಟ್‌ – ಯುಜಿ ಮರುಪರೀಕ್ಷೆ ನಡೆಸಿದರೆ ಈಗಾಗಲೇ ಹಾಜರಾಗಿದ್ದ 24 ಲಕ್ಷ ವಿದ್ಯಾರ್ಥಿಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಕೋರ್ಟ್ ಒತ್ತಿ ಹೇಳಿತು.

- Advertisement -

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಮೂವರು ಸದಸ್ಯರ ಪೀಠ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಇತರ ಅಕ್ರಮಗಳ ಆಧಾರದ ಮೇಲೆ ಮೇ 5 ರಂದು ಕೈಗೊಳ್ಳಲಾಗಿದ್ದ ನೀಟ್‌ – ಯುಜಿ ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆ ನಡೆಸಬೇಕೆಂದು ಸಲ್ಲಿಸಲಾಗಿದ್ದ ಅರ್ಜಿಗಳ ಬ್ಯಾಚ್‌ಅನ್ನು ವಿಚಾರಣೆ ನಡೆಸಿ ತೀರ್ಪನ್ನು ಆದೇಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ತೀರ್ಪು ನೀಡುವ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌, ರಾಷ್ಟ್ರೀಯ ಪರೀಕ್ಷಾ ಮಂಡಳಿ ಹಾಗೂ ಐಐಟಿ ಮದ್ರಾಸ್‌ ಪ್ರಸ್ತುತಪಡಿಸಿದ ಅಂಕಿಅಂಶಗಳನ್ನು ಪರಿಶೀಲಿಸಲಾಗಿದ್ದು, ಬೃಹತ್‌ ಮಟ್ಟದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | RSS ನಿಷೇಧ ತೆರವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆಯೇ?

“ಈ ಸಂದರ್ಭದಲ್ಲಿ ವ್ಯವಸ್ಥಿತವಾಗಿ ಪರೀಕ್ಷೆಯ ಪಾವಿತ್ರ್ಯತೆಯ ಮೇಲೆ ಧಕ್ಕೆಯಾಗಿದೆ ಎಂಬುದನ್ನು ನಿರ್ಧರಿಸಲು ಸಾಕಷ್ಟು ದಾಖಲೆಗಳ ಕೊರತೆಯಿದೆ. ಸಿಬಿಐ ಕೈಗೊಂಡಿರುವ ವಿಚಾರಣೆ ಇನ್ನು ಅಂತಿಮತೆಯನ್ನು ತಲುಪಿಲ್ಲ. ಕೋರ್ಟ್‌ ಕೂಡ ಕೇಂದ್ರ ಸರ್ಕಾರ 571 ನಗರಗಳ 4750 ಕೇಂದ್ರಗಳ ಫಲಿತಾಂಶದಲ್ಲಿ ಏನು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಿದೆ. ದತ್ತಾಂಶ ವಿಶ್ಲೇಷಣೆಯ ಆಧಾರದ ಮೇಲೆ ತನ್ನ ಸ್ಥಾನವನ್ನು ಸೂಚಿಸುವ ಐಐಟಿ ಮದ್ರಾಸ್‌ನ ವಿಶ್ಲೇಷಣೆಯನ್ನು ಸರ್ಕಾರ ದಾಖಲಿಸಿದೆ” ಎಂದು ಮುಖ್ಯ ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ಹೇಳಿದ್ದಾರೆ.

ಹಜಾರಿಭಾಗ್‌ ಹಾಗೂ ಪಾಟ್ನಾದಲ್ಲಿ ಸೋರಿಕೆಯಾದ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ರೀತಿಯ ವಿವಾದವಿರಲ್ಲಿಲ್ಲ. ಈ ಕೇಂದ್ರದಲ್ಲಿ ಹಾಜರಾಗಿದ್ದ 155 ವಿದ್ಯಾರ್ಥಿಗಳು ಪತ್ರಿಕೆ ಸೋರಿಕೆಯಿಂದ ಪ್ರತ್ಯಕ್ಷವಾಗಿ ಪ್ರಯೋಜನ ಪಡೆದಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪ್ರಯೋಜನ ಪಡೆದವರ ಬಗ್ಗೆ ಸಿಬಿಐ ಮತ್ತಷ್ಟು ದಾಖಲೆಗಳನ್ನು ಬಿಡುಗಡೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸುಪ್ರೀಂ ಕೋರ್ಟ್ ಆದೇಶದಲ್ಲಿ ತಿಳಿಸಿದೆ.

ಒಂದು ವೇಳೆ ಮರು ಪರೀಕ್ಷೆ ಕೈಗೊಂಡರೆ ಪ್ರವೇಶ ದಿನಾಂಕದಲ್ಲಿ ತೊಂದರೆ, ವೈದ್ಯಕೀಯ ಕೋರ್ಸ್‌ನಲ್ಲಿ ಪರಿಣಾಮ, ಭವಿಷ್ಯದಲ್ಲಿ ಉತ್ತಮ ವೃತ್ತಿಪರರ ಧಕ್ಕೆ ಹಾಗೂ ಮೀಸಲಾತಿ ಆಧಾರದಲ್ಲಿ ಆಯ್ಕೆಯಾದ ತುಳಿತಕ್ಕೆ ಒಳಗಾದ ಸಮುದಾಯದ ವಿದ್ಯಾರ್ಥಿಗಳ ಭವಿಷ್ಯಕ್ಕೂ ತೊಂದರೆಯಾಗಲಿದೆ ಎಂದು ಕೋರ್ಟ್ ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...