ಸಿಇಸಿ ಗ್ಯಾನೇಶ್‌ರನ್ನು ಯಾರಿಂದಲೂ ಉಳಿಸಲು ಸಾಧ್ಯವಿಲ್ಲ; ಎಸ್‌ಐಆರ್ ಪ್ರಕ್ರಿಯೆ ತಕ್ಷಣ ತಡೆಹಿಡಿಯಿರಿ: ಕಾಂಗ್ರೆಸ್

Date:

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಇನ್ನು ಯಾರಿಂದಲೂ ಕಾಪಾಡಲು ಸಾಧ್ಯವಿಲ್ಲ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣವೇ ಅಮಾನತಿನಲ್ಲಿಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

- Advertisement -

ಇನ್ನಿಬ್ಬರು ಚುನಾವಣಾ ಆಯುಕ್ತರ ನಿರ್ಧಾರವನ್ನು ಕಡೆಗಣಿಸಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಸಿಇಸಿ ಗ್ಯಾನೇಶ್ ಕುಮಾರ್ ಅವರ ಅಕ್ರಮಗಳ ಬಗ್ಗೆ ತನಿಖಾ ವರದಿ ಬಹಿರಂಗಗೊಂಡ ಬಳಿಕ ಸಿಇಸಿ ರಾಜೀನಾಮೆಗೆ ಆಗ್ರಹ ಹೆಚ್ಚಾಗಿದೆ. ದೇಶಾದ್ಯಂತ ಯುವಜನರು ಬೀದಿಗಿಳಿಯುತ್ತಿದ್ದಾರೆ. ಆದರೆ ಪ್ರತಿಭಟನೆಗೆ ಅವಕಾಶವೇ ನೀಡದೆ ಬಂಧನ ಮಾಡಲಾಗುತ್ತಿದೆ. ಇವೆಲ್ಲವುದರ ನಡುವೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಇದನ್ನೂ ಓದಿ: ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೂಚನೆಗಳ ಮೇರೆಗೆ ಮುಖ್ಯ ಚುನಾವಣಾ ಆಯುಕ್ತರು ಕಾರ್ಯನಿರ್ವಹಿಸುತ್ತಿದ್ದಾರೆ. ಚುನಾವಣಾ ಆಯೋಗದ ಮೇಲಿದ್ದ ಸಾರ್ವಜನಿಕರ ವಿಶ್ವಾಸವನ್ನು ಹಾಳುಗೆಡವಿದ್ದಾರೆ ಎಂದು ಜೈರಾಮ್ ರಮೇಶ್ ಕಿಡಿಕಾರಿದ್ದಾರೆ.

ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಗ್ಯಾನೇಶ್ ಕುಮಾರ್ ಅವರು ತಕ್ಷಣ ತಮ್ಮ ಹುದ್ದೆಯಿಂದ ಕೆಳಗಿಳಿಯಬೇಕು ಮತ್ತು ಚಾಲ್ತಿಯಲ್ಲಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದೆ.

ಕಳೆದ ಕೆಲವು ದಿನಗಳಿಂದ ಈ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಾಚರಣೆ ಸಮಿತಿ (CWC) ಸಭೆಗಳಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ಚುನಾವಣಾ ಆಯೋಗದ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತತೆಯನ್ನು ರಕ್ಷಿಸಲು ಸಿಇಸಿ ನಿರ್ಗಮನವೇ ಏಕೈಕ ದಾರಿ ಎಂದು ಕಾಂಗ್ರೆಸ್ ಪುನರುಚ್ಚರಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೃಕ್ಷಥಾನ್ ಹೆರಿಟೇಜ್ ರನ್ 2026: ತೆರೆಮರೆಯ ಸಾಧಕರಿಗೆ ಗೌರವ

ಕ್ರೀಡೆ, ಪಾರಂಪರಿಕ ಕ್ಷೇತ್ರ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಗಮನಾರ್ಹ ಸೇವೆ...

SIR | ಸ್ವಾತಂತ್ರ್ಯ ಹೋರಾಟ ಹಿನ್ನೆಲೆಯುಳ್ಳ BSP ನಾಯಕ ಸುಧೀಂದ್ರ ಭದೋರಿಯಾ ಕುಟುಂಬದ ಹೆಸರುಗಳು ಡಿಲೀಟ್‌

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ ಬಿಎಸ್‌ಪಿ ಹಿರಿಯ ನಾಯಕ, ಮಾಜಿ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್ ಸಾಹೇಬ್’

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ...

ಕಲಬುರಗಿ ಜಿಲ್ಲೆಗೆ 6 ಟಿಎಂಸಿ ನೀರು ಕಾಯ್ದಿರಿಸಲು ಪ್ರಸ್ತಾವನೆ : ಡಿಸಿ ಇಕ್ರಮ್ ಶರೀಫ್

ಮುಂಬರುವ ಬೇಸಿಗೆ ಅವಧಿಯಲ್ಲಿ ಕಲಬುರಗಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ...