ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

Date:

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA) ಅಧ್ಯಕ್ಷೆ ನೇಹಾ ಬೋರಾ, ಶಾಂತಿ ಕಾಪಾಡುವ ಭರವಸೆ ನೀಡುವ ಬಾಂಡ್‌ಗೆ ಸಹಿ ಹಾಕುವಂತೆ ಪೊಲೀಸರು ನೀಡಿರುವ ನೋಟಿಸ್ ಪ್ರಶ್ನಿಸಿ ಗುರುವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

- Advertisement -

ರಾಷ್ಟ್ರಧ್ವಜವನ್ನು ಅನುಮತಿಯಿಲ್ಲದೆ ಹಾರಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ನೀಡಿರುವ ನೋಟಿಸ್‌ನ ಕಾನೂನುಬದ್ಧತೆಯನ್ನು ಬೋರಾ ಪರ ವಕೀಲ, ಹಿರಿಯ ನ್ಯಾಯವಾದಿ ಗೋಪಾಲ್ ಶಂಕರನಾರಾಯಣನ್ ಪ್ರಶ್ನಿಸಿದರು. “ರಾಷ್ಟ್ರಧ್ವಜ ಹಾರಿಸಲು ನಮಗೆ ಅನುಮತಿ ಬೇಕಿಲ್ಲ. ಅವರಿಗೆ ಕಾನೂನಿನ ಬಗ್ಗೆ ಒಂದು ತರಗತಿಯ ಅಗತ್ಯವಿದೆ” ಎಂದು ಅವರು ನ್ಯಾಯಮೂರ್ತಿ ಸುಬ್ರಮೋಣಿಯಂ ಪ್ರಸಾದ್ ಅವರ ಮುಂದೆ ವಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ...

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ ಧರ್ಮಕ್ಕೆ ಸ್ಥಾನವಿಲ್ಲದಿದ್ದರೂ, ಮತಾಂತರವನ್ನು ಮೀಸಲಾತಿಯ ಅರ್ಹತೆಗೆ ಜೋಡಿಸಿರುವುದೇಕೆ? ಇಂದಿರಾ ಸಾಹ್ನಿ ತೀರ್ಪಿಗೆ ವಿರೋಧಾಭಾಸವಾಗಿದೆ ಸುಪ್ರೀಂ ಕೋರ್ಟ್‌ನ ಹೊಸ ತೀಪು! 1992ರಲ್ಲಿ ಸುಪ್ರೀಂ...

ದೆಹಲಿ ಪೊಲೀಸರ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ, ಬೋರಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯ ಸ್ವೀಕಾರಾರ್ಹತೆಯನ್ನೇ ಪ್ರಶ್ನಿಸಿದರು.

ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧದ ಪ್ರತಿಭಟನೆಗಳಲ್ಲಿ ನೇಹಾ ಬೋರಾ ಮುಂಚೂಣಿಯಲ್ಲಿದ್ದಾರೆ. ಇದೀಗ ಅವರು ಪೊಲೀಸರ ನೋಟಿಸ್ ರದ್ದುಪಡಿಸುವಂತೆ ಹಾಗೂ ತಮ್ಮ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 126ರ ಅಡಿಯಲ್ಲಿ ಅಕ್ಟೋಬರ್ 17ರಂದು ನೇಹಾರಿಗೆ ಈ ನೋಟಿಸ್ ನೀಡಲಾಗಿತ್ತು. ಅಕ್ಟೋಬರ್ 19ರಂದು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (SEM) ಮುಂದೆ ಹಾಜರಾಗಿ, ವಿಚಾರಣೆ ನಡೆಯುವ ಅವಧಿಯಲ್ಲಿ ಶಾಂತಿ ಕಾಪಾಡಲು ₹10,000 ವೈಯಕ್ತಿಕ ಬಾಂಡ್ ಹಾಗೂ ಒಬ್ಬ ಜಾಮೀನುದಾರನ ಭರವಸೆ ನೀಡಬೇಕೇ ಬೇಡವೇ ಎಂಬುದಕ್ಕೆ ಕಾರಣ ತಿಳಿಸುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿತ್ತು.

ಬಿಎನ್‌ಎಸ್‌ಎಸ್ ಸೆಕ್ಷನ್ 126 ಏನು ಹೇಳುತ್ತದೆ?

ಒಬ್ಬ ವ್ಯಕ್ತಿಯಿಂದ ಶಾಂತಿಭಂಗ ಉಂಟಾಗುವ ಸಾಧ್ಯತೆ ಇದೆ, ಸಾರ್ವಜನಿಕ ನೆಮ್ಮದಿಗೆ ಧಕ್ಕೆಯಾಗಬಹುದು ಅಥವಾ ಅಶಾಂತಿಗೆ ಕಾರಣವಾಗುವ ಕಾನೂನುಬಾಹಿರ ಕೃತ್ಯ ನಡೆಯಬಹುದು ಎಂಬುದಕ್ಕೆ ವಿಶ್ವಾಸಾರ್ಹ ಮಾಹಿತಿ ಇದ್ದರೆ, ಸೂಕ್ತ ಷರತ್ತುಗಳೊಂದಿಗೆ ಬಾಂಡ್ ನೀಡುವಂತೆ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಸೂಚಿಸಬಹುದು.

ಅಕ್ಟೋಬರ್ 16ರಂದು ‘ಕಾಕ್‌ರೋಚ್ ಜನತಾ ಪಾರ್ಟಿ’ (CJP) ಆಯೋಜಿಸಿದ್ದ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ನೇಹಾ ಬೋರಾ ಅವರನ್ನು ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದರು. ಅಕ್ಟೋಬರ್ 17ರಂದು ಅವರನ್ನು ಬಿಡುಗಡೆ ಮಾಡಲಾಗಿತ್ತು. ಪ್ರಕರಣದಲ್ಲಿ ಪೊಲೀಸರ ನೋಟಿಸ್‌ನ ಕಾನೂನುಬದ್ಧತೆ ಮತ್ತು ಬೋರಾ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸಂಬಂಧಿಸಿದ ಆಕ್ಷೇಪಣೆಗಳು ಹೈಕೋರ್ಟ್‌ನ ಮುಂದಿವೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೈಲೊಂದು ಕ್ಯಾಮೆರಾ, ಜೀವಂತ ಬದುಕಿಗೆ ಮುಖಾಮುಖಿ

ಸಿನೆಮಾದ ಶಕ್ತಿ ಅದರ ಹಿಂದೆ ನಿಂತಿರುವ ತಂತ್ರಜ್ಞರ ಸಂಖ್ಯೆಯಲ್ಲಾಗಲಿ, ದುಬಾರಿ ಉಪಕರಣಗಳಲ್ಲಾಗಲಿ...

ಗಾಜಾ ಯುದ್ಧದ ನೆರಳಲ್ಲಿ ನಿರ್ಣಾಯಕ ಸಮರ; ಹೇಗಿರಲಿದೆ ಗೊತ್ತೇ ಇಸ್ರೇಲ್ ಚುನಾವಣೆ?

ಇಸ್ರೇಲ್‌ನಲ್ಲಿ ಇದೇ ಅಕ್ಟೋಬರ್ 27ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ದೇಶದ 26ನೇ...

ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ...

ಪ್ಯಾರಾ ಏಷ್ಯನ್ ಗೇಮ್ಸ್ 2026: ಒಂದೇ ದಿನ ಎರಡು ಚಿನ್ನದ ಪದಕ ಗೆದ್ದು ಬೀಗಿದ ಶೀತಲ್ ದೇವಿ

ಏಷ್ಯನ್ ಪ್ಯಾರಾ ಗೇಮ್ಸ್ 2026 ರಲ್ಲಿ ಭಾರತದ ಹೆಮ್ಮೆಯ ಪ್ಯಾರಾ ಆರ್ಚರಿ...