ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲ್ಲ, ಗೋಹತ್ಯೆ ನಿಷೇಧಿಸುವ ಪ್ರಸ್ತಾಪವಿಲ್ಲ: ಕೇಂದ್ರ ಸಚಿವ

Date:

ಗೋವಿಗೆ ರಾಷ್ಟ್ರೀಯ ಪ್ರಾಣಿ ಸ್ಥಾನಮಾನ ನೀಡುವ ಮತ್ತು ದೇಶಾದ್ಯಂತ ಗೋಹತ್ಯೆಯನ್ನು ನಿಷೇಧಿಸುವ ಯಾವುದೇ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ. ಈದ್-ಉಲ್-ಅಝಾ (ಬಕ್ರೀದ್) ಹಬ್ಬಕ್ಕೆ ಕೆಲವೇ ದಿನಗಳಿರುವಾಗ ಮುಸ್ಲಿಂ ಸಂಘಟನೆಗಳು ಹಸುವನ್ನು ‘ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸುವಂತೆ ಆಗ್ರಹಿಸಿತ್ತು.

- Advertisement -

ಈ ಬಗ್ಗೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸಚಿವರು, “ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಮತ್ತು ದೇಶಾದ್ಯಂತ ಗೋಹತ್ಯೆ ನಿಷೇಧವನ್ನು ಕೋರಿ ಸಂಸತ್ ಸದಸ್ಯರು ಮತ್ತು ಸರ್ಕಾರಕ್ಕೆ ಆಗಾಗ ಅರ್ಜಿಗಳನ್ನು ಸಲ್ಲಿಸಲಾಗುತ್ತಿದೆ. ವಿವಿಧ ಸಂಸ್ಥೆಗಳು ಈ ಸಂಬಂಧ ಕಾರ್ಯನಿರ್ವಹಿಸುತ್ತಿವೆ. ಸಂಸದರನ್ನು ಸಹ ಸಂಪರ್ಕಿಸುತ್ತಿವೆ. ಆದರೆ ಸರ್ಕಾರ ಈ ಪ್ರಸ್ತಾಪವನ್ನು ಪರಿಗಣಿಸಿಲ್ಲ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ‘ಇದು ಪ್ರತಿರೋಧವು ಹೌದು, ಅಸಹಾಯಕತೆಯೂ ಹೌದು’; ಗೋಹತ್ಯೆ ನಿರಾಕರಣೆ ಬಗ್ಗೆ ಮುಸ್ಲಿಮರ ಮನದ ಮಾತು

“ವಿವಿಧ ರಾಜ್ಯಗಳು ತಮ್ಮದೇ ಆದ ಆದ್ಯತೆಯ ಆಧಾರದ ಮೇಲೆ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ” ಎಂದು ಹೇಳಿದ ಕೇಂದ್ರ ಸಚಿವರು, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯದ 1950ರ ಕಾನೂನಿನಡಿಯಲ್ಲಿ ಜಾನುವಾರು ವಧೆ ನಿಯಮಗಳನ್ನು ಜಾರಿಗೊಳಿಸುವ ಕ್ರಮಕ್ಕೆ ಮುಂದಾಗಿರುವುದನ್ನು ಉಲ್ಲೇಖಿಸಿದರು.

ದೇಶದಲ್ಲಿ ಗೋವಿನ ರಾಜಕಾರಣ ತಾರಕಕ್ಕೆ ಏರಿದೆ. ದೇಶದಲ್ಲಿ ಗೋಹತ್ಯೆಯನ್ನು ನಿಷೇಧಿಸಬೇಕು ಎಂದು ಬಜರಂಗದಳ ಸೇರಿದಂತೆ ಸಂಘಪರಿವಾರ ಒತ್ತಾಯಿಸುತ್ತಿದೆ. ಇನ್ನೊಂದೆಡೆ ಹಲವು ಮುಸ್ಲಿಂ ಸಂಘಟನೆಗಳು ಮತ್ತು ಧರ್ಮಗುರುಗಳು ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು, ಗೋಹತ್ಯೆಯ ಮೇಲೆ ರಾಷ್ಟ್ರವ್ಯಾಪಿ ನಿಷೇಧ ಹೇರಲು ಆಗ್ರಹಿಸಿದ್ದಾರೆ.

ಜಮೀಯತ್ ಉಲೇಮಾ-ಎ-ಹಿಂದ್‌ನ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ ಅವರು, ಹಸುವಿನ ಹೆಸರಿನಲ್ಲಿ ದೇಶದಲ್ಲಿ ನಡೆಯುತ್ತಿರುವ ಅನಗತ್ಯ ಸಂಘರ್ಷಗಳಿಗೆ ಶಾಶ್ವತ ತೆರೆ ಎಳೆಯಲು ಹಸುವನ್ನು ‘ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಆದರೆ ಈ ಹಿಂದಿನಿಂದಲೂ ಗೋವಿನ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬಂದಿರುವ ಕೇಂದ್ರ ಸರ್ಕಾರ ಮಾತ್ರ ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ, ಗೋಹತ್ಯೆ ನಿಷೇಧಿಸುವ ಪ್ರಸ್ತಾಪವೂ ಇಲ್ಲ ಎಂದು ಹೇಳಿಕೊಂಡಿದೆ.

ಈ ನಡುವೆ ಎಮ್ಮೆ ಮಾಂಸದ (ಕ್ಯಾರಬೀಫ್) ರಫ್ತಿನಲ್ಲಿ ಭಾರತವು ವಿಶ್ವದಲ್ಲೇ ಪ್ರಮುಖ ಸ್ಥಾನದಲ್ಲಿದೆ. ಬ್ರೆಜಿಲ್ ಮತ್ತು ಆಸ್ಟ್ರೇಲಿಯಾದಂತಹ ದೇಶಗಳೊಂದಿಗೆ ಜಾಗತಿಕ ಬೋವಿನ್ ಮಾಂಸದ ಮಾರುಕಟ್ಟೆಯಲ್ಲಿ ಭಾರತ ಸ್ಪರ್ಧಿಸುತ್ತಿದೆ. ಮೋದಿ ಸರ್ಕಾರವು ಮಾಂಸ ರಫ್ತಿನಿಂದ ವಾರ್ಷಿಕವಾಗಿ ಸುಮಾರು 32,000 ಕೋಟಿಗಿಂತ ರೂಪಾಯಿಗಿಂತ ಅಧಿಕ ಹಣ ಪಡೆಯುತ್ತದೆ. ಹೀಗಿರುವಾಗ ಗೋಹತ್ಯೆ ನಿಷೇಧಿಸಲು ಸರ್ಕಾರ ಮುಂದಾಗುತ್ತದೆಯೇ ಎಂದು ನೆಟ್ಟಿಗರು ವ್ಯಂಗ್ಯವಾಡುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...