ಬಂಧನದ ವಿರುದ್ಧ ಕೇಜ್ರಿವಾಲ್‌ಗೆ ಹೈಕೋರ್ಟ್‌ನಿಂದ ಮುಕ್ತಿಯಿಲ್ಲ; ಮುಂದಿನ ವಿಚಾರಣೆ ಏ.03ಕ್ಕೆ

Date:

ಅಬಕಾರಿ ಹಗರಕ್ಕೆ ಸಂಬಂಧಿಸಿದಂತೆ ಮಾ.15ರಂದು ಜಾರಿ ನಿರ್ದೇಶನಾಲಯ ಬಂಧನದ ಕ್ರಮವನ್ನು ಪ್ರಶ್ನಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಳ್ಳಿ ಹಾಕಿದ್ದು, ಸದ್ಯಕ್ಕೆ ಹೈಕೋರ್ಟ್‌ನಿಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮುಕ್ತಿ ಇಲ್ಲದಂತಾಗಿದೆ.

ಕೇಜ್ರಿವಾಲ್‌ ಅವರ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಜಾರಿ ನಿರ್ದೇಶನಾಲಯಕ್ಕೆ ಏ.02ರವರೆಗೂ ಹೈಕೋರ್ಟ್ ಸಮಯ ನೀಡಿದೆ.

ಅಲ್ಲಿಯವರೆಗೂ ಕೇಜ್ರಿವಾಲ್‌ ಅವರು ಜೈಲಿನಲ್ಲಿಯೇ ಇರಬೇಕಿದೆ. ಸದ್ಯ ಅರವಿಂದ್ ಕೇಜ್ರಿವಾಲ್ ಇ.ಡಿ ಕಸ್ಟಡಿಯಲ್ಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಳುವವರ ಕೊಡಲಿಗೆ ಹಾಡಹಗಲೇ ಬಲಿಯಾಗತೊಡಗಿವೆ ಒಕ್ಕೂಟದ ಬೇರುಗಳು

ಈ ನಡುವೆ ಜೈಲಿನಲ್ಲಿರುವ ಕಾರಣ ಮುಖ್ಯಮಂತ್ರಿ ಹುದ್ದೆಯಿಂದ ತೆಗೆದು ಹಾಕಬೇಕೆಂದು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ. ದೆಹಲಿ ಹೈಕೋರ್ಟ್‌ನ ಉಸ್ತುವಾರಿ ಮುಖ್ಯ ನ್ಯಾಯಮೂರ್ತಿ ಮನ್‌ಮೋಹನ್‌ ಅವರು ವಿಚಾರಣೆ ನಡೆಸಲಿದ್ದಾರೆ.

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡುತ್ತಿರುವ ಸಮನ್ಸ್‌ಗಳಿಂದ ಮಧ್ಯಂತರ ರಕ್ಷಣೆ ನೀಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ, ಕೇಜ್ರಿವಾಲ್‌ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೆಲಂಗಾಣ | 4,568 ಕೋಟಿ ರೂ. ಒಡೆಯ ಕೆ.ವಿಶ್ವೇಶ್ವರ ರೆಡ್ಡಿ ರಾಜ್ಯದ ಅತ್ಯಂತ ಶ್ರೀಮಂತ ಬಿಜೆಪಿ ಅಭ್ಯರ್ಥಿ

ತೆಲಂಗಾಣದ ಲೋಕಸಭಾ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಚೆವೆಳ್ಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಮಣಿಪುರ ಹಿಂಸಾಚಾರ | ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ

ಮಣಿಪುರದ ನರಂಸೇನಾ ಪ್ರದೇಶದಲ್ಲಿ ಶುಕ್ರವಾರ ಮಧ್ಯರಾತ್ರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಕೇಂದ್ರೀಯ...

ಪಶ್ಚಿಮ ಬಂಗಾಳ | ಪ್ರಧಾನಿ ಚುನಾವಣಾ ರ್‍ಯಾಲಿ ಬಳಿಕ ಟಿಎಂಸಿಯಿಂದ ಮೋದಿ ಹೇಳಿಕೆಗಳ ಫ್ಯಾಕ್ಟ್‌ಚೆಕ್!

ಪಶ್ಚಿಮ ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರ್ಜರಿಯಾಗಿ ರ್‍ಯಾಲಿ ನಡೆಸಿ ಚುನಾವಣಾ...

2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ...