ಪೋಕ್ಸೊ ಪ್ರಕರಣದಲ್ಲಿ ರಾಜಿಗೆ ಅವಕಾಶವಿಲ್ಲ: ದೆಹಲಿ ಹೈಕೋರ್ಟ್

Date:

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ (ಪೋಕ್ಸೊ)ಕ್ಕೆ ಸಂಬಂಧಿಸಿದ, ಪೋಕ್ಸೊ ಕಾಯ್ದೆಯಡಿ ದಾಖಲಾದ ಕ್ರಿಮಿನಲ್‌ ಪ್ರಕರಣಗಳನ್ನು ಸಂತ್ರಸ್ತ ಮಗು ಅಥವಾ ಆಕೆಯ ಕುಟುಂಬ ರಾಜಿ ಮೂಲಕ ಇತ್ಯರ್ಥಪಡಿಸಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಸ್ಪಷ್ಟಪಡಿಸಿದೆ. ಇಂತಹ ಪ್ರಕರಣಗಳು ಗಂಭೀರ ಸ್ವರೂಪದ ಅಪರಾಧಗಳಾಗಿದ್ದು, ಸಮಾಜದ ಮೇಲೂ ಪರಿಣಾಮ ಬೀರುತ್ತವೆ ಎಂದು ನ್ಯಾಯಾಲಯ ಹೇಳಿದೆ.

- Advertisement -

ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಆರೋಪಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ನೀಡಿದ್ದಾರೆ. ಅಪ್ರಾಪ್ತ ಬಾಲಕಿಯ ಕುಟುಂಬದ ಮಧ್ಯಸ್ಥಿಕೆಯಲ್ಲಿ ಸಂತ್ರಸ್ತೆಯೊಂದಿಗೆ ರಾಜಿ ಮಾಡಿಕೊಂಡಿರುವುದರಿಂದ ತನ್ನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು 49 ವರ್ಷದ ಆರೋಪಿ ಅರ್ಜಿ ಸಲ್ಲಿಸಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

ಪ್ರಕರಣದಲ್ಲಿ ಈಗಾಗಲೇ ವಿಚಾರಣೆ ಆರಂಭವಾಗಿದ್ದು, ಪ್ರಾಸಿಕ್ಯೂಷನ್ ಸಾಕ್ಷ್ಯ ದಾಖಲಿಸುವ ಹಂತದಲ್ಲಿತ್ತು. ಈ ಹಂತದಲ್ಲಿ ರಾಜಿಯ ಆಧಾರದ ಮೇಲೆ ಪ್ರಕರಣವನ್ನು ರದ್ದುಗೊಳಿಸುವುದು ಕಾನೂನಿನ ಉದ್ದೇಶ ಹಾಗೂ ನ್ಯಾಯದ ಆಶಯಕ್ಕೆ ವಿರುದ್ಧವಾಗುತ್ತದೆ ಎಂದಿರುವ ನ್ಯಾಯಾಲಯ, ಸೆ.22ರಂದು ಅರ್ಜಿಯನ್ನು ತಿರಸ್ಕರಿಸಿದೆ.

2022ರಲ್ಲಿ ನಂಬಿಕೆ ಅಥವಾ ಅಧಿಕಾರದ ಸ್ಥಾನದಲ್ಲಿದ್ದ ಆರೋಪಿಯು ಅಪ್ರಾಪ್ತ ಬಾಲಕಿಯ ಮೇಲೆ ಗಂಭೀರ ಸ್ವರೂಪದ ಪ್ರವೇಶಾತ್ಮಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪವಿದೆ. ಈ ಆರೋಪಗಳಿಗೆ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್‌ 376 ಮತ್ತು 506 ಹಾಗೂ ಪೋಕ್ಸೊ ಕಾಯ್ದೆಯ ಸೆಕ್ಷನ್‌ 6ರಡಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: ನೀವೇಕೆ ಜಂತರ್‌ ಮಂತರ್‌ ಮುಚ್ಚಬಾರದು?; ಕೇಂದ್ರಕ್ಕೆ ದೆಹಲಿ ಹೈಕೋರ್ಟ್‌ ಪ್ರಶ್ನೆ

ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪುಗಳನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಸಚಿನ್ ದತ್ತಾ, ರಾಜಿಯ ಆಧಾರದ ಮೇಲೆ ಕ್ರಿಮಿನಲ್‌ ಪ್ರಕರಣಗಳನ್ನು ರದ್ದುಗೊಳಿಸುವ ಹೈಕೋರ್ಟ್‌ನ ಅಧಿಕಾರವನ್ನು ಘೋರ ಹಾಗೂ ಗಂಭೀರ ಅಪರಾಧಗಳು, ಮಾನಸಿಕ ವಿಕೃತತೆಯನ್ನು ಒಳಗೊಂಡ ಅಪರಾಧಗಳು ಮತ್ತು ಲೈಂಗಿಕ ಅಪರಾಧಗಳ ವಿಚಾರದಲ್ಲಿ ಬಳಸಲು ಸಾಧ್ಯವಿಲ್ಲ ಎಂದು ಹೇಳಿದರು.

ಸಂತ್ರಸ್ತೆ ಮತ್ತು ಆರೋಪಿಯ ನಡುವಿನ ರಾಜಿಗೆ ಇಂತಹ ಪ್ರಕರಣಗಳಲ್ಲಿ ಯಾವುದೇ ಕಾನೂನು ಮಾನ್ಯತೆ ಇಲ್ಲ. ಮಗುವಿನ ಮೇಲೆ, ಅದರಲ್ಲೂ ನಂಬಿಕೆ ಅಥವಾ ಅಧಿಕಾರದ ಸ್ಥಾನದಲ್ಲಿರುವ ವ್ಯಕ್ತಿಯಿಂದ ನಡೆದ ಲೈಂಗಿಕ ದೌರ್ಜನ್ಯವು ಗಂಭೀರ ಅಪರಾಧವಾಗಿದ್ದು, ಅದರ ಪರಿಣಾಮ ಸಮಾಜದ ಮೇಲೂ ಬೀರುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...

ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ...

ದಲಿತ ನಾಯಕರ ಅವಹೇಳನ, ಪ್ರಚೋದನಕಾರಿ ಭಾಷಣ ಆರೋಪ: ಪ್ರತಾಪ್‌ ಸಿಂಹಗೆ ಮಧ್ಯಂತರ ರಕ್ಷಣೆ ನೀಡಲು ಕೋರ್ಟ್‌ ನಕಾರ

ಮೈಸೂರಿನ ಟಿ.ನರಸೀಪುರದಲ್ಲಿ ಗಣೇಶ ವಿಸರ್ಜನೆ ಶೋಭಾಯಾತ್ರೆ ವೇಳೆ ದಲಿತ ಸಮುದಾಯದ ನಾಯಕರನ್ನು...

ಕಾವೇರಿ ವಿವಾದ: 20 ಟಿಎಂಸಿ ಕೊರತೆ ಎಂದ ತಮಿಳುನಾಡು, ತೀವ್ರ ಬರಗಾಲದ ಸಂಕಷ್ಟ ಬಿಚ್ಚಿಟ್ಟ ಕರ್ನಾಟಕ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ...