2 ವರ್ಷದಿಂದ ಸಿಗದ ಸಿಗ್ನಲ್: ಯುಪಿಯಲ್ಲಿ ಟೆಲಿಕಾಂ ಉದ್ಯೋಗಿಯನ್ನು ಟವರ್‌ಗೆ ಕಟ್ಟಿಹಾಕಿ ಪ್ರತಿಭಟನೆ

Date:

ಕಳೆದ ಎರಡು ವರ್ಷಗಳಿಂದ ಎಷ್ಟೇ ದೂರು ನೀಡಿದರೂ ಸರಿಯಾದ ಮೊಬೈಲ್ ನೆಟ್‌ವರ್ಕ್ ಮತ್ತು ಇಂಟರ್ನೆಟ್ ಸೇವೆ ಸಿಗದಿರುವುದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು, ಖಾಸಗಿ ಟೆಲಿಕಾಂ ಕಂಪನಿಯ ತಂತ್ರಜ್ಞನೊಬ್ಬನನ್ನು ಮೊಬೈಲ್ ಟವರ್‌ಗೆ ಕಟ್ಟಿಹಾಕಿ ಪ್ರತಿಭಟನೆ ನಡೆಸಿದ ವಿಚಿತ್ರ ಘಟನೆ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಹರ್ದೌಲಿ ಗ್ರಾಮದಲ್ಲಿ ನಡೆದಿದೆ.

- Advertisement -

ವಿದ್ಯುತ್ ಪೂರೈಕೆ ಪರಿಶೀಲನೆಗಾಗಿ ಹರ್ದೌಲಿ ಗ್ರಾಮಕ್ಕೆ ಆಗಮಿಸಿದ್ದ ಟೆಲಿಕಾಂ ಕಂಪನಿಯ ತಂತ್ರಜ್ಞ ಆದಿತ್ಯಭಾನ್ ಸಿಂಗ್ ಎಂಬವರನ್ನು ಗ್ರಾಮಸ್ಥರು ಸುತ್ತುವರಿದಿದ್ದಾರೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ನೆಟ್‌ವರ್ಕ್ ಸಮಸ್ಯೆ ಎದುರಿಸುತ್ತಿದ್ದರೂ ಕಂಪನಿಯು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತುಕತೆ ಉಗ್ರರೂಪಕ್ಕೆ ತಿರುಗಿ, ಗ್ರಾಮಸ್ಥರು ತಂತ್ರಜ್ಞನನ್ನು ಸುಮಾರು ಎರಡು ಗಂಟೆಗಳ ಕಾಲ ಟವರ್‌ಗೆ ಕಟ್ಟಿಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಇದನ್ನೂ ಓದಿ: ಎಂಎಸ್‌ಐಎಲ್‌ ಟೂರ್‌ ಪ್ಯಾಕೇಜ್‌ಗೆ ಚಾಲನೆ, ₹20 ಸಾವಿರದಲ್ಲಿ 18 ದಿನಗಳ ಉತ್ತರ ಭಾರತ ಪ್ರವಾಸ

ಈ ಘಟನೆಯಲ್ಲಿ ಮತ್ತೊಂದು ಆಸಕ್ತಿಕರ ವಿಷಯವೆಂದರೆ, ಕಂಪನಿಯ ಮೇಲಾಧಿಕಾರಿಗಳ ಗಮನ ಸೆಳೆಯಲು ಮತ್ತು ಸಮಸ್ಯೆಯ ತೀವ್ರತೆಯನ್ನು ಅವರಿಗೆ ಮನವರಿಕೆ ಮಾಡಿಕೊಡಲು ತಾನೇ ತನ್ನನ್ನು ಟವರ್‌ಗೆ ಕಟ್ಟಿಹಾಕುವಂತೆ ಉದ್ಯೋಗಿಯೇ ಗ್ರಾಮಸ್ಥರಿಗೆ ಸಲಹೆ ನೀಡಿದ್ದನೆಂದು ಕೆಲವು ಮೂಲಗಳು ತಿಳಿಸಿವೆ.

ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಹಾಗೂ ಸ್ಥಳೀಯರೊಬ್ಬರು ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿದ ನಂತರ, ಬಿಂಡ್ಕಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ತಂತ್ರಜ್ಞನನ್ನು ರಕ್ಷಿಸಿದ್ದಾರೆ. ತಂತ್ರಜ್ಞ ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 127(2) ರ ಅಡಿಯಲ್ಲಿ ಅಪರಿಚಿತ ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಾರ್ವಜನಿಕ ಸೇವೆಗಳಲ್ಲಿ ಲೋಪ; ಅಧಿಕಾರಿಗಳಿಗೆ ನೋಟಿಸ್ ನೀಡಲು ಸಿಇಒ ಗಜಾನನ ಬಾಲೆ ಸೂಚನೆ

ಬಡವರು, ರೋಗಿಗಳು, ವಿದ್ಯಾರ್ಥಿನಿಯರು ಹಾಗೂ ವೃದ್ಧರಿಗೆ ಉತ್ತಮ ಸೌಲಭ್ಯ ಕಲ್ಪಿಸಬೇಕಾದ ಸರ್ಕಾರಿ...

ಗ್ಯಾನೇಶ್ ಕುಮಾರ್ ವಜಾಗೊಂಡರೆ, 30 ಸೆಕೆಂಡ್‌ನಲ್ಲಿ ಪ್ರತಿಭಟನೆ ಅಂತ್ಯ: ರಾಹುಲ್‌ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಪ್ರಧಾನಿ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ,...

ಬೀದರ್‌ | ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ʼಬೆಂಕಿʼ ಪಾಲು, ಆರ್ಥಿಕ ಸಂಕಷ್ಟದಲ್ಲಿ ರೈತರು

ಜಿಲ್ಲೆಯ ವಿವಿಧೆಡೆ ಸಂಭವಿಸುತ್ತಿರುವ ಬೆಂಕಿ ಅವಘಡಗಳಿಂದಾಗಿ ಕೈಗೆ ಬಂದಿದ್ದ ಕಬ್ಬು ಸುಟ್ಟು...