ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

Date:

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು ಸರ್ಕಾರವು ‘ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್’ (GRAP) ಅಡಿಯಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರುತ್ತದೆ. ಈ ನಿಯಮಗಳ ಭಾಗವಾಗಿ ನಿರ್ಮಾಣ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಮತ್ತು ಕೆಲವು ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗುತ್ತದೆ. ವಾಯುಮಾಲಿನ್ಯ ತಡೆಯುವ ಈ ಕ್ರಮಗಳ ನೇರ ಹೊಡೆತ ಬೀಳುವುದು ವಲಸೆ ಕಟ್ಟಡ ಕಾರ್ಮಿಕರ ಮೇಲೆ.

- Advertisement -

ನಿರ್ಮಾಣ ಸ್ಥಳಗಳು ಬಂದ್ ಆದಾಗ, ಪರ್ಯಾಯ ಆದಾಯದ ಮೂಲವಿಲ್ಲದೆ ಈ ಕಾರ್ಮಿಕರು ವಾರಗಳ ಕಾಲ, ಕೆಲವೊಮ್ಮೆ ತಿಂಗಳುಗಳ ಕಾಲ ಕೂಲಿಯಿಲ್ಲದೆ ಕಳೆಯಬೇಕಾಗುತ್ತದೆ. ದೆಹಲಿಯಲ್ಲಿ ಬದುಕಲು ಸಾಧ್ಯವಾಗದೆ ಅನೇಕರು ತಮ್ಮ ಮಕ್ಕಳೊಂದಿಗೆ ತಮ್ಮ ಹಳ್ಳಿಗಳಿಗೆ ಮರಳುವ ಅನಿವಾರ್ಯತೆಗೆ ಸಿಲುಕುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್...

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ 22 ಸೀಟುಗಳ ಮತ ಎಣಿಕೆ ನಡೆಯುತ್ತಿದ್ದು ಇಲ್ಲಿಯವರೆಗೂ 254 ಡೆಮೊಕ್ರಟಿಕ್ ಅಭ್ಯರ್ಥಿಗಳು ಮತ್ತು 169 ರಿಪಬ್ಲಿಕನ್ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ. ಸಮೀಕ್ಷೆಗಳ...

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

‘ಕೌನ್ಸಿಲ್ ಆನ್ ಎನರ್ಜಿ, ಎನ್ವಿರಾನ್‌ಮೆಂಟ್ ಅಂಡ್ ವಾಟರ್’ (CEEW) ವರದಿಯ ಪ್ರಕಾರ, ದೆಹಲಿಯ ಧೂಳಿನ ಮಾಲಿನ್ಯದಲ್ಲಿ ನಿರ್ಮಾಣ ಚಟುವಟಿಕೆಗಳ ಪಾಲು ಶೇ. 30ರಷ್ಟಿದೆ. ಸರ್ಕಾರ ಮಾಲಿನ್ಯದ ವಿರುದ್ಧ ಕ್ರಮ ಕೈಗೊಳ್ಳುವಾಗ, ಕಾರ್ಮಿಕರು ತಮ್ಮ ಜೀವನೋಪಾಯವನ್ನೇ ಕಳೆದುಕೊಳ್ಳುತ್ತಾರೆ. ನವೆಂಬರ್ 24, 2021ರ ಆದೇಶದಲ್ಲಿ, ನಿರ್ಮಾಣ ನಿಷೇಧದಿಂದ ಬಾಧಿತರಾದ ಕಾರ್ಮಿಕರಿಗೆ ಆರ್ಥಿಕ ನೆರವು ನೀಡುವಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿತ್ತು. ಕೋರ್ಟ್‌ನ 2024ರ ಆದೇಶದಲ್ಲೂ ದೆಹಲಿಯ 93,272 ಕಟ್ಟಡ ಕಾರ್ಮಿಕರಿಗೆ ಆರ್ಥಿಕ ನೆರವು ನೀಡುವ ಬಗ್ಗೆ ಉಲ್ಲೇಖಿಸಲಾಗಿತ್ತು.

ಡಿಸೆಂಬರ್ 2025ರಲ್ಲಿ ದೆಹಲಿ ಸಚಿವ ಕಪಿಲ್ ಮಿಶ್ರಾ GRAP ನಿರ್ಬಂಧಗಳಿಂದ ಕೆಲಸ ಕಳೆದುಕೊಂಡ ಕಾರ್ಮಿಕರಿಗೆ 10,000 ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದರು. ‘ದೆಹಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ’ಯ ವೆಬ್‌ಸೈಟ್‌ನಲ್ಲಿ ಸುಮಾರು 2.15 ಲಕ್ಷ ನೋಂದಾಯಿತ ಕಾರ್ಮಿಕರ ಪಟ್ಟಿಯಿದೆ. ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ಒಂದು ಲಕ್ಷ ಕಾರ್ಮಿಕರಿಗೆ ಪರಿಹಾರ ನೀಡಲಾಗಿದೆ ಎಂದು ಮಂಡಳಿ ಹೇಳಿಕೊಂಡಿದೆ. ಆದರೆ, ಎರಡು ವರ್ಷಗಳ ಹಿಂದೆಯೇ ನೋಂದಣಿ ಮಾಡಿಸಿ, ಸಕಾಲಕ್ಕೆ ನವೀಕರಿಸಿದ್ದರೂ ತಮಗೆ ಭರವಸೆ ನೀಡಿದ ಪರಿಹಾರ ಇನ್ನೂ ಸಿಕ್ಕಿಲ್ಲ ಎಂದು ಕಾರ್ಮಿಕರು ಹೇಳಿದ್ದಾರೆ. ಸುಮಾರು 1,700 ಕಾರ್ಮಿಕರು ಇನ್ನೂ ಪರಿಹಾರಕ್ಕಾಗಿ ಕಾಯುತ್ತಿದ್ದಾರೆ ಎಂದು ‘ಕನ್‌ಸ್ಟ್ರಕ್ಷನ್ ವರ್ಕರ್ಸ್ ಪಂಚಾಯತ್ ಸಂಗಮ್’ ಒಕ್ಕೂಟವು ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿದೆ.

ಕಾರ್ಮಿಕರು ಮತ್ತು ಕಾರ್ಮಿಕ ಸಂಘಟನೆಯ ನಾಯಕರು ಈ ಬಿಕ್ಕಟ್ಟಿನ ನಾಲ್ಕು ಮುಖ್ಯ ಆಯಾಮಗಳನ್ನು ಬೊಟ್ಟು ಮಾಡಿ ತೋರಿಸುತ್ತಾರೆ. 

ದಿನಗೂಲಿಯನ್ನೇ ನಂಬಿ ಬದುಕುವ ಇವರಿಗೆ ಯಾವುದೇ ಉಳಿತಾಯದ ಭದ್ರತೆಯಿಲ್ಲ.

ವಾರಗಳು ಮತ್ತು ತಿಂಗಳುಗಳ ಕಾಲ ಕೆಲಸವಿಲ್ಲದೆ ಖಾಲಿ ಕೂರುವ ಪರಿಸ್ಥಿತಿ.

ಹೆಚ್ಚಿನ ಕಾರ್ಮಿಕರು ಸರ್ಕಾರದ ಬಳಿ ನೋಂದಾಯಿಸಿಕೊಂಡಿಲ್ಲ, ಹೀಗಾಗಿ ಅವರು ನಷ್ಟ ಕೂಲಿ ಪರಿಹಾರಕ್ಕೆ ಅರ್ಹರಾಗುವುದಿಲ್ಲ.

ಅಧಿಕೃತ ವೆಬ್‌ಸೈಟ್ ಮೂಲಕ ನೋಂದಾಯಿಸಿಕೊಂಡವರು ಸಹ ಕಳೆದ ವರ್ಷ ತಮಗೆ ಸಿಗಬೇಕಾದ ಭತ್ಯೆ ಪಡೆಯಲು ಲಂಚ ನೀಡಬೇಕಾಯಿತು ಎಂದು ದೂರಿದ್ದಾರೆ. ಇದಕ್ಕೆ ಪೂರಕವಾಗಿ, ಹೊಸ ಅಧಿಕೃತ ವೆಬ್‌ಸೈಟ್‌ನಲ್ಲಿನ ತಾಂತ್ರಿಕ ದೋಷಗಳಿಂದಾಗಿ ಕಾರ್ಮಿಕರಿಗೆ ತಿಂಗಳುಗಳ ಕಾಲ ಹೊಸ ನೋಂದಣಿ ಮಾಡಿಸಲು ಅಥವಾ ಕಾರ್ಡ್ ನವೀಕರಿಸಲು ಸಾಧ್ಯವಾಗುತ್ತಿಲ್ಲ.

ಸರ್ಕಾರದಿಂದ ಇದುವರೆಗೆ ಯಾವುದೇ ಜೀವನಾಧಾರ ಭತ್ಯೆ ಘೋಷಣೆಯಾಗದ ಕಾರಣ ಕಾರ್ಮಿಕರ ಸ್ಥಿತಿ ಅತ್ಯಂತ ಶೋಚನೀಯವಾಗಿದೆ. ತಾವು ಅಡಕತ್ತರಿಯಲ್ಲಿ ಸಿಲುಕಿದ ಸ್ಥಿತಿ  ಅನುಭವಿಸುತ್ತಿದ್ದೇವೆ ಎಂದು ಕಾರ್ಮಿಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಮೊದಲನೆಯದಾಗಿ, ಯಾವುದೇ ಸುರಕ್ಷತಾ ಸಾಧನಗಳಿಲ್ಲದೆ ತೀವ್ರ ಮಾಲಿನ್ಯದ ವಾತಾವರಣದಲ್ಲಿ ಕೆಲಸ ಮಾಡಬೇಕು, ಎರಡನೆಯದಾಗಿ, ಸರ್ಕಾರ ಮಾಲಿನ್ಯದ ವಿರುದ್ಧ ಹೋರಾಡಲು ನಿರ್ಧರಿಸಿದಾಗ ಊಟದಂತಹ ಮೂಲಭೂತ ಸೌಕರ್ಯಗಳಿಂದಲೂ ವಂಚಿತರಾಗಬೇಕು.

ದೆಹಲಿಯ ಗಾಳಿಯನ್ನು ಶುದ್ಧಗೊಳಿಸುವ ಹೋರಾಟದಲ್ಲಿ, ಆ ನಗರವನ್ನು ನಿರ್ಮಿಸುವ ಕೈಗಳೇ ಇಂದು ಅನ್ನಕ್ಕಾಗಿ ಪರದಾಡುವಂತಾಗಿರುವುದು ವ್ಯವಸ್ಥೆಯ ದೊಡ್ಡ ವಿಪರ್ಯಾಸವಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಸೌಜನ್ಯ ಕೊಲೆ ಪ್ರಕರಣ : ಎಸ್‌ಐಟಿ ಮುಂದೆ ಹಾಜರಾದ ಡಾ. ಮಹಾಬಲ ಶೆಟ್ಟಿ

ಮಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ವಿಶೇಷ ತನಿಖಾ ತಂಡದಿಂದ...

ಉತ್ತರ ಕರ್ನಾಟಕದ ಬಡವರ ಜೀವನಾಡಿ: ಸಾರ್ವಕಾಲಿಕ ದಾಖಲೆ ದರ ದಾಟಿದ ಜೋಳ

​ಉತ್ತರ ಕರ್ನಾಟಕದ ಜನತೆಯ ಜೀವನಾಡಿ ಹಾಗೂ ದೈನಂದಿನ ಪ್ರಧಾನ ಆಹಾರವಾಗಿರುವ ಜೋಳದ...

ಏರ್‌ ಇಂಡಿಯಾ ವಿಮಾನಕ್ಕೆ ಹುಸಿ ಹೈಜಾಕ್ ಬೆದರಿಕೆ: ಪ್ರಯಾಣಿಕನ ಬಂಧನ

ಕೋಲ್ಕತ್ತಾದಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ (AI 2772) ಹುಸಿ...

5ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ, ಹೋರಾಟದ ಸ್ಥಳದಲ್ಲೇ ವಾಸ್ತವ್ಯ

ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ 5ನೇ ದಿನಕ್ಕೆ...