ಟಾಟಾ ಟ್ರಸ್ಟ್‌ಗೆ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ

Date:

Advertisements

ಉದ್ಯಮಿ ರತನ್‌ ಟಾಟಾ ಅವರ ನಿಧರನಿಂದ ತೆರವಾಗಿದ್ದ ಟಾಟಾ ಟ್ರಸ್ಟ್‌ನ ಅಧ್ಯಕ್ಷ ಸ್ಥಾನಕ್ಕೆ ಅವರ ಮಲಸಹೋದರ ನೋಯೆಲ್‌ ನವಲ್ ಟಾಟಾ ಆಯ್ಕೆಯಾಗಿದ್ದಾರೆ. ಟಾಟಾ ಟ್ರಸ್ಟ್‌ಅನ್ನು ನೋಯೆಲ್ ಮುನ್ನಡೆಸಲಿದ್ದಾರೆ.

ಟಾಟಾ ಗ್ರೂಪ್ಸ್‌ ಉದ್ಯಮದಲ್ಲಿ ನೋಯೆಲ್ ಟಾಟಾ ಅವರು 40 ವರ್ಷಗಳಿಂದ ದುಡಿಯುತ್ತಿದ್ದಾರೆ. ಟಾಟಾ ಸಮೂಹದ ಕಂಪನಿಗಳಾದ ಟ್ರೆಂಟ್, ಟಾಟಾ ಇಂಟರ್ನ್ಯಾಷನಲ್ ಲಿಮಿಟೆಡ್, ವೋಲ್ಟಾಸ್ ಹಾಗೂ ಟಾಟಾ ಇನ್ವೆಸ್ಟ್‌ಮೆಂಟ್ ಕಾರ್ಪೊರೇಶನ್‌ನ ಅಧ್ಯಕ್ಷರೂ ಆಗಿದ್ದಾರೆ. ಅಲ್ಲದೆ, ಟೈಟಾನ್ ಕಂಪನಿ ಲಿಮಿಟೆಡ್, ಟಾಟಾ ಸ್ಟೀಲ್‌ನ ಉಪಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಇದೀಗ, ಅವರನ್ನು ಟಾಟಾ ಟ್ರಸ್ಟ್‌ನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ನೋಯೆಲ್ ಟಾಟಾ ಅವರನ್ನು 2010ರಲ್ಲಿ ಟಾಟಾ ಗ್ರೂಪ್‌ನ ಟಾಟಾ ಇಂಟರ್ನ್ಯಾಷನಲ್ ಲಿಮಿಟೆಡ್‌ಗೆ ವ್ಯವಸ್ಥಾಪಕ ನಿರ್ದೇಶಕರಾಗಿ ನಿಯೋಜಿಸಲಾಗಿತ್ತು. ಆಗ ಸಂಸ್ಥೆಯು ವಹಿವಾಟು ಮೌಲ್ಯವು 500 ಮಿಲಿಯನ್ ಡಾಲರ್ ಆಗಿತ್ತು. ಅದನ್ನು 2021ರ ವೇಳೆಗೆ 3 ಶತಕೋಟಿ ಡಾಲರ್‌ಗೆ ಹೆಚ್ಚಿಸಿದ್ದರು.

Advertisements

ನೋಯೆಲ್ ಟಾಟಾ ಅವರು ಬ್ರಿಟನ್‌ನಲ್ಲಿರುವ ಸಸೆಕ್ಸ್ ವಿಶ್ವವಿದ್ಯಾನಿಲಯದಲ್ಲಿ ಪದವಿ ಪಡೆದಿದ್ದಾರೆ. INSEADನಲ್ಲಿ ಇಂಟರ್ನ್ಯಾಷನಲ್ ಎಕ್ಸಿಕ್ಯೂಟಿವ್ ಪ್ರೋಗ್ರಾಂ (IEP) ಕೋರ್ಸ್‌ಅನ್ನು ಪೂರ್ಣಗೊಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ದೆಹಲಿಯ 50ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

ದೆಹಲಿಯ 50ಕ್ಕೂ ಅಧಿಕ ಶಾಲೆಗಳಿಗೆ ಬುಧವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ...

ಮುಂಬೈ | ಭಾರೀ ಮಳೆಗೆ ಹಳಿಯಲ್ಲೇ ಸಿಲುಕಿದ ಎರಡು ಮೊನೋ ರೈಲು: 782 ಪ್ರಯಾಣಿಕರ ರಕ್ಷಣೆ

ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಎಲ್ಲೆಡೆ ನೀರು ತುಂಬಿದೆ, ಸಂಚಾರ ಅಸ್ತವ್ಯಸ್ತವಾಗಿದೆ....

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

Download Eedina App Android / iOS

X