ಒಂದೇ ಕುಟುಂಬದ ಐವರು ಶವವಾಗಿ ಪತ್ತೆ; ವಿಷಾಹಾರ ಸೇವಿಸಿದ ಶಂಕೆ

Date:

ಒಂದೇ ಕುಟುಂಬದ ಐವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ವರದಿಯಾಗಿದೆ. ರಬೂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಎಲ್ಲರೂ ವಿಷಾಹಾರ ಸೇವಿಸಿರಬಹುದು ಎಂದು ಶಂಕಿಸಲಾಗಿದೆ.

- Advertisement -

ಮೃತಪಟ್ಟವರನ್ನು 38 ವರ್ಷ ವಯಸ್ಸಿನ ಮಹೇಶ್, ಅವರ ಪತ್ನಿ 36 ವರ್ಷದ ಲಲಿತಾ ಹಾಗೂ ದಂಪತಿಯ ಮೂವರು ಮಕ್ಕಳು ಎಂದು ಗುರುತಿಸಲಾಗಿದೆ. ಇವರೆಲ್ಲರೂ ಶುಕ್ರವಾರ ರಾತ್ರಿ ಚಹಾ ಮತ್ತು ನೂಡಲ್ಸ್ ಸೇವಿಸಿ ಮಲಗಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆಹಾರ ವಿಷಪ್ರಾಶನದಿಂದ ಈ ದುರಂತ ಸಂಭವಿಸಿರಬಹುದು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಶನಿವಾರ ಬೆಳಗ್ಗೆ ಮನೆಯಲ್ಲಿ ಯಾವುದೇ ಚಟುವಟಿಕೆಗಳು ಕಂಡುಬರದೇ ಇದ್ದುದನ್ನು ಗಮನಿಸಿದ ನೆರೆಹೊರೆಯವರು ಅನುಮಾನಗೊಂಡು, ಮನೆಯೊಳಗೆ ತೆರಳಿ ಪರಿಶೀಲಿಸಿದಾಗ, ಐವರೂ ಹಾಸಿಗೆಯ ಮೇಲೆಯೇ ಪ್ರಜ್ಞೆಹೀನ ಸ್ಥಿತಿಯಲ್ಲಿ ಬಿದ್ದಿರುವುದು ಬೆಳಕಿಗೆ ಬಂದಿದೆ. ಸ್ಥಳೀಯರು ಅವರನ್ನು ಎಬ್ಬಿಸಲು ಪ್ರಯತ್ನಸಿದ್ದಾರೆ. ಆದರೆ, ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ.

ಸುದ್ದಿ ತಿಳಿದ ಕೂಡಲೇ ಹಿರಿಯ ಪೊಲೀಸರು ಮತ್ತು ವಿಧಿವಿಜ್ಞಾನ ತಜ್ಞರ ವಿಶೇಷ ತಂಡವು (FSL) ಘಟನಾ ಸ್ಥಳಕ್ಕೆ ಧಾವಿಸಿ ಕೂಲಂಕಷ ಪರಿಶೀಲನೆ ನಡೆಸಿದೆ. ಅಡುಗೆಮನೆಯಲ್ಲಿ ಬಳಸಲಾಗಿದ್ದ ಚಹಾ ಪಾತ್ರೆಗಳು, ಉಳಿದಿದ್ದ ನೂಡಲ್ಸ್ ಹಾಗೂ ಇತರೆ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆಹಾರದ ನಮೂನೆಗಳನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಎಲ್ಲಾ ಐದು ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಕುಟುಂಬವು ಕೊನೆಯದಾಗಿ ಸೇವಿಸಿದ ಆಹಾರ ಪದಾರ್ಥಗಳೇ ಸಾವಿಗೆ ಕಾರಣವೇ ಎಂಬುದು ಸದ್ಯಕ್ಕೆ ನಿಖರವಾಗಿ ದೃಢಪಟ್ಟಿಲ್ಲ. ವಿಷಾಹಾರ ಸೇವನೆಯ ಜತೆಗೆ ಬೇರೆ ಯಾವುದಾದರೂ ಕಾರಣಗಳಿವೆಯಾ ಎಂಬ ಆಯಾಮದಲ್ಲೂ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಅಧಿಕೃತ ವರದಿ ಬಂದ ನಂತರವೇ ಸಾವಿನ ಹಿಂದಿನ ನೈಜ ಅಂಶಗಳು ಹೊರಬರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಮಸ್ಕ್–ಅಂಬಾನಿ ವಾಕ್ಸಮರ: ‘ಸ್ಪರ್ಧೆಗೆ ಸಿದ್ಧ’ ಎಂದ ರಿಲಯನ್ಸ್

ಭಾರತದಲ್ಲಿ ಸ್ಟಾರ್‌ಲಿಂಕ್ ಸೇವೆ ಆರಂಭಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂಬ ಎಲಾನ್ ಮಸ್ಕ್ ಅವರ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...