‘ಉತ್ತರ ಭಾರತೀಯರಿಗೆ ಹಿಂದಿ ಮಾತ್ರವೇ ಗೊತ್ತು, ಪಾನಿಪುರಿ ಮಾರಲು ಬರುತ್ತಾರೆ’: ತಮಿಳು ಸಚಿವರ ಹೇಳಿಕೆ ವಿವಾದ

Date:

ತಮಿಳುನಾಡು ವಿಧಾನಸಭಾ ಚುನಾವಣೆಯ ವಸ್ತಿಲಿನಲ್ಲಿರುವ ತಮಿಳುನಾಡಿನಲ್ಲಿ ‘ಹಿಂದಿ ಹೇರಿಕೆ’ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಇದೇ ಹೊತ್ತಿನಲ್ಲಿ, ತಮಿಳುನಾಡಿನ ಕೃಷಿ ಸಚಿವ ಎಂಆರ್‌ಕೆ ಪನ್ನೀರ್‌ಸೆಲ್ವಂ ಅವರ ಹೇಳಿಕೆ ವಿವಾದ ಹುಟ್ಟುಹಾಕಿದೆ. ಪನ್ನೀರ್‌ಸೆಲ್ವಂ ಅವರು ದ್ವಿಭಾಷಾ ನೀತಿಯ ಕುರಿತು ಮಾತನಾಡಿದ್ದು, “ಉತ್ತರ ಭಾರತೀಯರಿಗೆ ಹಿಂದಿ ಮಾತ್ರವೇ ಗೊತ್ತು. ಅವರು ದಕ್ಷಿಣ ರಾಜ್ಯಗಲಲ್ಲಿ ಪಾನಿಪುರಿ ಮಾರಲು ಬರುತ್ತಾರೆ” ಎಂದು ಹೇಳಿದ್ದಾರೆ.

- Advertisement -

“ತಮಿಳುನಾಡಿನಲ್ಲಿ ತಮಿಳು ಮತ್ತು ಇಂಗ್ಲಿಷ್‌ಅನ್ನು ಕಲಿಸುವ ದ್ವಿ-ಭಾಷಾ ನೀತಿ ಇರುವುದರಿಂದ ತಮಿಳರು ಪ್ರಯೋಜನ ಪಡೆಯುತ್ತಿದ್ದಾರೆ. ನಮ್ಮ ಮಕ್ಕಳು ಇಂಗ್ಲಿಷ್‌ಅನ್ನು ಚೆನ್ನಾಗಿ ಕಲಿಯುತ್ತಾರೆ. ಅವರು ಉತ್ತಮ ಶಿಕ್ಷಣ ಪಡೆದು ಅಮೆರಿಕ ಅಥವಾ ಅಂಡನ್‌ನಲ್ಲಿ ಉದ್ಯೋಗಗಳನ್ನು ಪಡೆಯುತ್ತಾರೆ. ಆದರೆ, ಉತ್ತರ ಭಾರತೀಯರು ಹಿಂದಿ ಮಾತ್ರ ಕಲಿತಿದ್ದಾರೆ. ಅವರು ದಕ್ಷಿಣ ರಾಜ್ಯಗಳಲ್ಲಿ ಸೀಮಿತ ಉದ್ಯೋಗ ಹುಡುತ್ತಾರೆ. ಅವರು ತಮಿಳುನಾಡಿಗೆ ಮೇಜುಗಳನ್ನು ಸ್ವಚ್ಛಗೊಳಿಸಲು, ನಿರ್ಮಾಣ ಕೆಲಸ ಮಾಡಲು ಬರುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪನ್ನೀರ್‌ಸೆಲ್ವಂ ಅವರ ಮಾತಿಗೆ ತಕ್ಷಣವೇ ಆಡಳಿತಾರೂಢ ಡಿಎಂಕೆ ಪ್ರತಿಕ್ರಿಯಿಸಿದೆ. ಸೆಲ್ವಂ ಅವರ ಹೇಳಿಕೆಯನ್ನು ಖಂಡಿಸಿದ ಡಿಎಂಕೆ ವಕ್ತಾರ ಡಾ. ಸೈಯದ್ ಹಫೀಜುಲ್ಲಾ, “ಕಾನೂನಿನ ಅಡಿಯಲ್ಲಿ ಪ್ರತಿಯೊಂದು ಕೆಲಸದಲ್ಲೂ ಘನತೆ ಇರುತ್ತದೆ… ನಾವು ಯಾವುದೇ ಕೆಲಸವನ್ನು ಅಲ್ಲಗಳೆಯುವುದಿಲ್ಲ. ತಮಿಳುನಾಡಿನಲ್ಲಿ ಹಿಂದಿ ಮಾತನಾಡುವವರು ಅಥವಾ ಅವರು ಮಾಡುವ ಕೆಲಸಗಳಿಗೆ ಯಾವುದೇ ವಿರೋಧವಿಲ್ಲ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಕ್ರೀಡಾಂಗಣದಲ್ಲಿ ‘ರಾಜಕೀಯ’ದಾಟ: ಬ್ಯಾಟ್ ಹಿಡಿಯದವರ ಕೈಯಲ್ಲಿ ಕ್ರಿಕೆಟ್ ಚುಕ್ಕಾಣಿ!

ಆದಾಗ್ಯೂ, ಅವರು ಕೇಂದ್ರದ ತ್ರಿಭಾಷಾ ನೀತಿಯನ್ನು ತಮಿಳುನಾಡು ಒಪ್ಪುವುದಿಲ್ಲ ಎಂದು ಒತ್ತಿ ಹೇಳಿದ್ದಾರೆ. “ದ್ವಿಭಾಷಾ ನೀತಿಯು ತಮಿಳುನಾಡು ಮತ್ತು ನಮ್ಮ ಜನರಿಗೆ ಸಹಾಯ ಮಾಡಿದೆ. ಇಂಗ್ಲಿಷ್‌ ಭಾಷೆಯು ಜನರಿಗೆ ಅಭಿವೃದ್ಧಿ ಮತ್ತು ಜಾಗತಿಕ ಅವಕಾಶಗಳನ್ನು ನೀಡಿದೆ. ಇಂಗ್ಲಿಷ್‌ಗೆ ಆದ್ಯತೆಯಿಲ್ಲದೆ, ಹಿಂದಿ ಮಾತನಾಡುವ ರಾಜ್ಯಗಳ ಜನರು ಶಿಕ್ಷಣದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ…” ಎಂದು ಅವರು ಹೇಳಿದ್ದಾರೆ.

ಡಿಎಂಕೆ ಲೋಕಸಭಾ ಸಂಸದ ಟಿ.ಆರ್. ಬಾಲು ಅವರು ಸೆಲ್ವಂ ಅವರ ಹೇಳಿಕೆಯನ್ನು ತಪ್ಪಾಗಿ ಉಲ್ಲೇಖಿಸಲಾಗಿದೆ ಎಂದು ಹೇಳಿದ್ದಾರೆ. “ಪನ್ನೀರಸೆಲ್ವಂ ಒಬ್ಬ ಜವಾಬ್ದಾರಿಯುತ ಸಚಿವರು… ಅವರ ಹೇಳಿಕೆಯನ್ನು ತಪ್ಪಾಗಿ ಉಲ್ಲೇಖಿಸಲಾಗಿದೆ. ಉತ್ತರ ಭಾರತೀಯರ ವಿರುದ್ಧ ಅವರು ಏನನ್ನೂ ಹೇಳಿಲ್ಲ. ಅವರ ಮಾತುಗಳಲ್ಲಿ ‘ಹಿಂದಿ ಹೇರಿಕೆ’ ವಿರುದ್ಧದ ಭಾವನೆಗಳು ಮಾತ್ರವೇ ವ್ಯಕ್ತವಾಗಿವೆ” ಎಂದು ಹೇಳಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...