ಡಬಲ್ ಎಂಜಿನ್ ಅಲ್ಲ, ‘ಲೂಟಿ ಎಂಜಿನ್’: ಮಧ್ಯಪ್ರದೇಶ ಸಿಎಂ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

Date:

ಮಧ್ಯಪ್ರದೇಶದ ಬಿಜೆಪಿ ನೇತೃತ್ವದ ‘ಡಬಲ್ ಎಂಜಿನ್’ ಸರ್ಕಾರದಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದ್ದು, ಇದು ‘ಲೂಟಿಯ ಎಂಜಿನ್’ ಆಗಿ ಮಾರ್ಪಟ್ಟಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಮೋಹನ್ ಯಾದವ್ ಅವರೇ ಈ ಲೂಟಿಯ ಪ್ರಧಾನ ರೂವಾರಿ ಎಂದು ಅವರು ಆರೋಪಿಸಿದ್ದಾರೆ.

- Advertisement -

ರಾಷ್ಟ್ರೀಯ ಆಂಗ್ಲ ಪತ್ರಿಕೆಯೊಂದರ ವರದಿಯನ್ನು ಉಲ್ಲೇಖಿಸಿ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದ ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದಿದ್ದಾರೆ. ಇದೇ ವೇಳೆ, ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು ಭೋಪಾಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ, ಮುಖ್ಯಮಂತ್ರಿಗಳ ವಿರುದ್ಧದ ಈ ಭೂಹಗರಣದ ಆರೋಪಗಳ ಕುರಿತು ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಇನ್ನು, ಅಧಿಕಾರ ಮತ್ತು ಲೂಟಿಯ ಪಾಲಿಗಾಗಿ ಬಿಜೆಪಿಯೊಳಗೇ ನಡೆಯುತ್ತಿರುವ ಒಳಜಗಳದಿಂದಾಗಿ, ಮಧ್ಯಪ್ರದೇಶದಿಂದ ಕೇಂದ್ರಕ್ಕೆ ತೆರಳಿದ ಕೃಷಿ ಸಚಿವರೊಬ್ಬರೇ ಮುಖ್ಯಮಂತ್ರಿಗಳ ವಿರುದ್ಧ ಈ ಸುದ್ದಿಗಳನ್ನು ವ್ಯವಸ್ಥಿತವಾಗಿ ಹಬ್ಬಿಸುತ್ತಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ ಎಂದು ಜೈರಾಮ್ ರಮೇಶ್ ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಮಹಾಕಾಲ್ ಭೂಮಿ ಲೂಟಿ ಹಾಗೂ ರಾಮಮಂದಿರದ ದೇಣಿಗೆ ಕಳ್ಳತನದಲ್ಲೂ ಬಿಜೆಪಿ ಭಾಗಿಯಾಗಿದೆ ಎಂದು ಜಿತು ಪಟ್ವಾರಿ ಆರೋಪಿಸಿದ್ದು, ಈ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ನೈತಿಕ ಹೊಣೆಹೊತ್ತು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? 1,078 ಏಕದಿನ ಪಂದ್ಯಗಳ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ರೋಹಿತ್ -ಪ್ರಸಿದ್ಧ್ ಜೋಡಿ

ಮೋಹನ್ ಯಾದವ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ, ಕೇವಲ ಅಲ್ಪಾವಧಿಯಲ್ಲಿಯೇ ಅವರ ಕುಟುಂಬದ ಒಡೆತನದಲ್ಲಿದ್ದ ಭೂಮಿಯ ಪ್ರಮಾಣ 100 ಎಕರೆಗಳಿಂದ ಬರೋಬ್ಬರಿ 335 ಎಕರೆಗೆ ಹೇಗೆ ಹೆಚ್ಚಾಯಿತು ಎಂಬುದನ್ನು ಅವರು ರಾಜ್ಯದ ಜನತೆಗೆ ವಿವರಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ವರದಿಯ ಪ್ರಕಾರ, 2023ರ ಡಿಸೆಂಬರ್‌ನಿಂದೀಚೆಗಿನ ಎರಡು ವರ್ಷಗಳ ಅವಧಿಯಲ್ಲಿ ಯಾದವ್ ಅವರ ಕುಟುಂಬ ಮತ್ತು ಅವರ ಒಡೆತನದ ರಿಯಲ್ ಎಸ್ಟೇಟ್ ಕಂಪನಿಗಳು ಉಜ್ಜಯಿನಿಯಲ್ಲಿ ಸುಮಾರು 45 ಕೋಟಿ ರೂ. ವೆಚ್ಚದಲ್ಲಿ 168 ಎಕರೆ ವಿಸ್ತೀರ್ಣದ 137 ನಿವೇಶನಗಳನ್ನು ಖರೀದಿಸಿವೆ.

ವಿಶೇಷವೆಂದರೆ, ಸರ್ಕಾರವು ಹೊಸ ರಸ್ತೆ ಮೂಲಸೌಕರ್ಯ ಯೋಜನೆಗಳನ್ನು ಘೋಷಿಸುವ ಮತ್ತು ಭೂ-ಬಳಕೆಯ ನಿಯಮಗಳನ್ನು ಬದಲಾಯಿಸುವ ಮುನ್ನವೇ ಅದರ ಲಾಭ ಪಡೆಯುವ ನಿಟ್ಟಿನಲ್ಲಿ ಈ ನಿವೇಶನಗಳನ್ನು ಖರೀದಿಸಲಾಗಿದೆ. ಈ ಪೈಕಿ ಸುಮಾರು 111 ಎಕರೆ ಜಮೀನು ಭವಿಷ್ಯದ ಯೋಜನೆಗಳಿಂದ ಪ್ರಭಾವಿತವಾಗುವ ಪ್ರದೇಶಗಳಲ್ಲೇ ಇರುವುದು ಕೇವಲ ಕಾಕತಾಳೀಯವೇ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಖಾರವಾಗಿ ಪ್ರಶ್ನಿಸಿದೆ. ಪವಿತ್ರ ನಗರಿ ಉಜ್ಜಯಿನಿಯನ್ನು ಭೂಮಾಫಿಯಾದ ಕೇಂದ್ರವನ್ನಾಗಿ ಮಾಡಲಾಗಿದೆ ಎಂದು ಅದು ದೂರಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಮುದಾಯಗಳ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಮೂಲಕ...

ಬೀದರ್‌ | ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಅಣಕು ಶವಯಾತ್ರೆ

ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಹಾಗೂ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ...

ಬೀದರ್‌ | ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026–27ನೇ ಸಾಲಿನ ಧನಶ್ರೀ,...