ಎಲ್ಲರಿಗೂ ಫ್ಲೂ ಲಸಿಕೆ ಅಗತ್ಯವಿಲ್ಲ, 65 ವರ್ಷ ಮೇಲ್ಪಟ್ಟವರಿಗೆ ಮಾತ್ರ, ಮಾಸ್ಕ್ ಬೇಕಾಗಿಲ್ಲ: ಐಸಿಎಂಆರ್ ಸ್ಪಷ್ಟನೆ

Date:

ದೇಶದಲ್ಲಿ H1N1 ಹಾಗೂ ಫ್ಲೂ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಸಾರ್ವಜನಿಕರಲ್ಲಿ ಉಂಟಾಗಿರುವ ಆತಂಕಕ್ಕೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತೆರೆ ಎಳೆದಿದೆ. ದೇಶದ ಪ್ರಸ್ತುತ ಫ್ಲೂ ಪರಿಸ್ಥಿತಿ ಕುರಿತು ಮಾಹಿತಿ ನೀಡಿರುವ ICMR ಮಹಾನಿರ್ದೇಶಕರಾದ (DG) ಡಾ. ರಾಜೀವ್ ಬಾಹ್ಲ್, “ದೇಶದಲ್ಲಿ ಫ್ಲೂ ಲಸಿಕೆಯನ್ನು ಪ್ರತಿಯೊಬ್ಬರೂ ತೆಗೆದುಕೊಳ್ಳುವ ಅಗತ್ಯವಿಲ್ಲ. 65 ವರ್ಷಕ್ಕೂ ಮೇಲ್ಪಟ್ಟವರು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಮಾತ್ರ ವೈದ್ಯರ ಸಲಹೆ ಮೇರೆಗೆ ಈ ಲಸಿಕೆ ಪಡೆದರೆ ಸಾಕು” ಎಂದು ತಿಳಿಸಿದ್ದಾರೆ.

- Advertisement -

ಇದಲ್ಲದೆ, ಸಾಮಾನ್ಯ ಜನತೆಗೆ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. ಫ್ಲೂ ವೈರಸ್ ಮುಖ್ಯವಾಗಿ ಉಸಿರಾಟದ ಹನಿಗಳ ಮೂಲಕ ಗರಿಷ್ಠ 1 ರಿಂದ 2 ಮೀಟರ್ ವ್ಯಾಪ್ತಿಯಲ್ಲಿ ಮಾತ್ರ ಹರಡುತ್ತದೆ. ಹೀಗಾಗಿ ಎಲ್ಲರೂ ಮಾಸ್ಕ್ ಧರಿಸಬೇಕಾದ ಪರಿಸ್ಥಿತಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನೂ ಓದಿ: HMPV ವೈರಸ್‌ | ರೋಗ ಲಕ್ಷಣಗಳೇನು, ಮುನ್ನೆಚ್ಚರಿಕಾ ಕ್ರಮಗಳೇನು? ಆತಂಕಬೇಡ, ಎಚ್ಚರವಿರಲಿ

“ಪ್ರಸ್ತುತ ಹರಡುತ್ತಿರುವ H1N1 ವೈರಸ್ ಯಾವುದೇ ಹೊಸ ಮಾದರಿಯ ರೂಪಾಂತರಿ ಅಲ್ಲ. ಇದು ಋತುಮಾನ ಬದಲಾವಣೆಯ ಸಮಯದಲ್ಲಿ ಕಂಡುಬರುವ ಸಾಮಾನ್ಯ ಜ್ವರದ ಸ್ವರೂಪವಾಗಿದೆ. ಗರ್ಭಿಣಿಯರು, ಸಣ್ಣ ಮಕ್ಕಳು ಹಾಗೂ 65 ವರ್ಷ ಮೇಲ್ಪಟ್ಟ ವ್ಯಕ್ತಿಗಳು ವೈದ್ಯರನ್ನು ಸಂಪರ್ಕಿಸಿ ‘ನಾರ್ತನ್ ಹೆಮಿಸ್ಪಿಯರ್ ಫ್ಲೂ ಲಸಿಕೆ’ ಪಡೆದುಕೊಳ್ಳಬಹುದು” ಎಂದು ಸಲಹೆ ನೀಡಿದ್ದಾರೆ.

ಜ್ವರ ಲಕ್ಷಣಗಳಿರುವವರು ಮನೆಯಲ್ಲೇ 2-3 ದಿನ ವಿಶ್ರಾಂತಿ ಪಡೆಯಬೇಕು. ಅನಗತ್ಯವಾಗಿ ಆಂಟಿವೈರಲ್ ಔಷಧಗಳನ್ನು ಅಥವಾ ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಡಿ ಎಂದು ಐಸಿಎಂಆರ್ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...