ಮಕ್ಕಳು ಮಾತ್ರವಲ್ಲ, ಎಲ್ಲ ನಾಪತ್ತೆ ಪ್ರಕರಣಗಳಲ್ಲೂ ಎಫ್‌ಐಆರ್ ಕಡ್ಡಾಯ: ಸುಪ್ರೀಂ ಕೋರ್ಟ್

Date:

ಕಾಣೆಯಾಗುವ ಮಕ್ಕಳ ಪ್ರಕರಣಗಳಿಗೆ ಮಾತ್ರ ಸೀಮಿತಗೊಳ್ಳದೆ, ವಯಸ್ಸು ಮತ್ತು ಲಿಂಗ ಭೇದವಿಲ್ಲದೆ ಯಾವುದೇ ವ್ಯಕ್ತಿ ನಾಪತ್ತೆಯಾದರೂ ವಿಳಂಬ ಮಾಡದೆ ತಕ್ಷಣವೇ ಪ್ರಥಮ ವರ್ತಮಾನ ವರದಿ (ಎಫ್‌ಐಆರ್) ದಾಖಲಿಸಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.

- Advertisement -

ಯಾವುದೇ ನಾಪತ್ತೆಯಾದ ವ್ಯಕ್ತಿ ಅಥವಾ ಮಗುವಿನ ಕುರಿತು ಮಾಹಿತಿ ಲಭ್ಯವಾದ ತಕ್ಷಣ, ಆ ಪ್ರಕರಣದ ಸ್ವರೂಪವನ್ನು ಆಧರಿಸಿ ಹೊಸ ಕ್ರಿಮಿನಲ್ ಕಾನೂನು ‘ಭಾರತೀಯ ನ್ಯಾಯ ಸಂಹಿತೆ’ (BNS) ಯ ಅಪಹರಣಕ್ಕೆ ಸಂಬಂಧಿಸಿದ ಸೂಕ್ತ ವಿಧಿಗಳ (ಸೆಕ್ಷನ್) ಅಡಿಯಲ್ಲಿಯೇ ಎಫ್‌ಐಆರ್ ದಾಖಲಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟವಾಗಿ ಸೂಚಿಸಿದೆ. ಇದರಿಂದಾಗಿ ನಾಪತ್ತೆ ಪ್ರಕರಣಗಳನ್ನು ಕೇವಲ ‘ನಾಪತ್ತೆ ದೂರು’ ಎಂದು ಪರಿಗಣಿಸದೆ, ಆರಂಭದಿಂದಲೇ ಗಂಭೀರವಾಗಿ ಪರಿಗಣಿಸಲು ಮತ್ತು ತ್ವರಿತ ತನಿಖೆ ಕೈಗೊಳ್ಳಲು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ರವಾನೆಯಾದಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಮಕ್ಕಳು ನಾಪತ್ತೆಯಾದ ಪ್ರಕರಣಗಳಲ್ಲಿ ತಕ್ಷಣವೇ ಎಫ್‌ಐಆರ್ ದಾಖಲಿಸುವ ನಿಯಮ ಹಿಂದಿನಿಂದಲೂ ಅಸ್ತಿತ್ವದಲ್ಲಿತ್ತು. 2014ರಲ್ಲಿಯೇ ಸುಪ್ರೀಂ ಕೋರ್ಟ್ ನೀಡಿದ್ದ ನಿರ್ದೇಶನಗಳ ಹಿನ್ನೆಲೆಯಲ್ಲಿ, ಕೇಂದ್ರ ಗೃಹ ಸಚಿವಾಲಯವು ಮಕ್ಕಳ ನಾಪತ್ತೆ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಸಲಹೆ ನೀಡಿತ್ತು. ಇದೀಗ ನ್ಯಾಯಾಲಯವು ಈ ನಿಯಮವನ್ನು ವಯಸ್ಕರಿಗೂ (ಪುರುಷರು ಮತ್ತು ಮಹಿಳೆಯರು) ಅನ್ವಯವಾಗುವಂತೆ ಸ್ಪಷ್ಟಪಡಿಸಿದ್ದು, ಎಲ್ಲ ಪ್ರಕರಣಗಳಲ್ಲೂ ತಾರತಮ್ಯವಿಲ್ಲದೆ ತ್ವರಿತ ಕಾನೂನು ಕ್ರಮಕ್ಕೆ ಆದೇಶಿಸಿದೆ.

ಇದುವರೆಗೆ ವಯಸ್ಕರು ನಾಪತ್ತೆಯಾದಾಗ ದೂರು ನೀಡಲು ಬಂದವರ ಬಳಿ ಪ್ರಾಥಮಿಕ ವಿಚಾರಣೆ ನಡೆಸುವ ನೆಪದಲ್ಲಿ ಎಫ್‌ಐಆರ್ ದಾಖಲಿಸಲು ವಿಳಂಬ ಮಾಡುವ ಪ್ರವೃತ್ತಿ ಠಾಣೆಗಳಲ್ಲಿ ಸಾಮಾನ್ಯವಾಗಿತ್ತು. ಆದರೆ ಈ ಹೊಸ ನಿರ್ದೇಶನದ ಪ್ರಕಾರ, ನಾಪತ್ತೆ ಮಾಹಿತಿ ಬಂದ ಕೂಡಲೇ ಯಾವುದೇ ಪ್ರಾಥಮಿಕ ವಿಚಾರಣೆಗಾಗಿ ಕಾಯದೆ ತಕ್ಷಣ ಎಫ್‌ಐಆರ್ ದಾಖಲಿಸಿ ಶೋಧ ಕಾರ್ಯ ಆರಂಭಿಸಬೇಕು. ಈ ಮೂಲಕ ನಾಪತ್ತೆಯಾದ ಆರಂಭಿಕ ಗಂಟೆಗಳಲ್ಲಿ (ಗೋಲ್ಡನ್ ಅವರ್ಸ್) ಆಗಬಹುದಾದ ವಿಳಂಬವನ್ನು ತಪ್ಪಿಸಿ, ತ್ವರಿತಗತಿಯ ಮತ್ತು ಕಟ್ಟುನಿಟ್ಟಿನ ತನಿಖೆಗೆ ನ್ಯಾಯಾಲಯ ಒತ್ತು ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ ‘ಮಹಾಭಿಯೋಗ’ ನಡೆದಿದೆಯೇ?

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ...

‘ವೀರಮಣಿ ಅತ್ಯಾಚಾರ ಪ್ರಕರಣ ಮುಚ್ಚುವುದರ ಹಿಂದೆ ಯಾವ ಒಪ್ಪಂದವಿತ್ತು’?; ಡಿಎಂಕೆ ವಿರುದ್ಧ ಸಿಎಂ ವಿಜಯ್‌ ವಾಗ್ದಾಳಿ

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ತಮಿಳುನಾಡಿನ ಆರ್‌....

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ...