‘ನಾಪತ್ತೆಯಾಗಿರಲಿಲ್ಲ, ನಾವು ಇಲ್ಲಿಯೇ ಇದ್ದೇವೆ’: ಕೇಂದ್ರ ಚುನಾವಣಾ ಆಯುಕ್ತ

Date:

‘ಸಂಭಾವಿತನೊಬ್ಬ ನಾಪತ್ತೆಯಾಗಿದ್ದ’ ಎಂಬ ಸಾಮಾಜಿಕ ಮಾಧ್ಯಮಗಳ ಟ್ರೋಲ್‌ಗಳನ್ನು ಅಲ್ಲಗಳೆದಿರುವ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್ ನಾವು ಯಾವಾಗಲು ಇಲ್ಲೇ ಇದ್ದೇವೆ ಎಂದು ತಿಳಿಸಿದ್ದಾರೆ.

- Advertisement -

ಏಳು ಹಂತದ ಲೋಕಸಭಾ ಚುನಾವಣೆಗಳು ಮುಗಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೀವ್‌ ಕುಮಾರ್, ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮನ್ನು ‘ಲಾಪಟಾ ಜಂಟಲ್‌ಮೆನ್‌’(ಸಂಭಾವಿತನೊಬ್ಬ ನಾಪತ್ತೆಯಾಗಿದ್ದ)ಎಂದು ಕರೆದು ಟ್ರೋಲ್‌ ಮಾಡಲಾಗಿತ್ತು. ಆದರೆ ನಾವು ನಾಪತ್ತೆಯಾಗಿರಲಿಲ್ಲ. ನಾವು ಯಾವಾಗಲು ಇಲ್ಲೇ ಇದ್ದೇವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

31.2 ಕೋಟಿ ಮಹಿಳೆಯರು ಸೇರಿ ಒಟ್ಟು 64.2 ಕೋಟಿ ಮಂದಿ ಭಾರತೀಯರು ಮತ ಚಲಾಯಿಸಿದ್ದಾರೆ. 68 ಸಾವಿರ ಮೇಲ್ವಿಚಾರಣ ತಂಡಗಳು ಹಾಗೂ 1.5 ಕೋಟಿ ಭದ್ರತಾ ಹಾಗೂ ಚುನಾವಣಾ ಅಧಿಕಾರಿಗಳು ವಿಶ್ವದ ಅತೀ ದೊಡ್ಡ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. 2024ನೇ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಆಯೋಗವು 39 ಮರು ಚುನಾವಣೆಗಳನ್ನು ನಡೆಸಿದೆ. 2019ರಲ್ಲಿ 540 ಮರು ಚುನಾವಣೆಗಳನ್ನು ನಡೆಸಲಾಗಿತ್ತು ಎಂದು ರಾಜೀವ್‌ ಕುಮಾರ್‌ ಹೇಳಿದ್ದಾರೆ.

ಬಿಸಿಲಿನ ಶಾಖದಿಂದ 33 ಚುನಾವಣಾ ಅಧಿಕಾರಿಗಳು ಮೃತಪಟ್ಟ ಕಾರಣ ಮುಂದಿನ ಲೋಕಸಭಾ ಚುನಾವಣೆಯನ್ನು ಏಪ್ರಿಲ್‌ ಅಂತ್ಯದ ವೇಳೆಗೆ ನಡೆಸಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಣದ ಹರಿವು, ಆತ್ಮಹತ್ಯೆಗಳು, ಅಧಿಕಾರಸ್ಥರು ಮತ್ತು ಬಡವರು

ಒಟ್ಟಾರೆ ಮತದಾನ ಪ್ರಕ್ರಿಯೆಯು ಸಂಪೂರ್ಣ ಹುರುಪಿನಿಂದ ಕೂಡಿತ್ತು. ಎಲ್ಲ ಪಕ್ಷಗಳ ನಿಯೋಗಗಳು ತಮ್ಮ ಸಮಸ್ಯೆಗಳನ್ನು ದಾಖಲಿಸಿವೆ ಎಂದು ರಾಜೀವ್‌ ಕುಮಾರ್‌ ತಿಳಿಸಿದರು.

ಭಾರತೀಯ ಚುನಾವಣಾ ವ್ಯವಸ್ಥೆಯು ಚುನಾವಣೋತ್ತರ ಪರಿಶೀಲನೆಯನ್ನು ಅನುಮತಿಸುತ್ತದೆ. ಆದಾಗ್ಯೂ ಮತದಾರರ ಪಟ್ಟಿ ಹಾಗೂ ಚುನಾವಣಾ ಅಂಕಿಅಂಶಗಳ ಬಗ್ಗೆ ಕೆಲವರು ಸುಳ್ಳು ಮಾಹಿತಿಗಳನ್ನು ನೀಡಿದರು.

“ವ್ಯಸ್ಥೆಯಲ್ಲಿ ಒಂದು ಮಾದರಿಯಿದೆ, ಒಂದು ರಚನೆಯಿದೆ. ಆದರೆ ಟೂಲ್‌ಕಿಟ್‌ ಇದೆ ಎಂದು ನಾನು ಹೇಳುವುದಿಲ್ಲ.ನಾವು ಚುನಾವಣಾ ಅಂಕಿಅಂಶಗಳನ್ನು ಪ್ರಕಟಿಸಲು ತಡ ಮಾಡಲಿಲ್ಲ ಅಥವಾ ಅಂಕಿಅಂಶವನ್ನು ಬದಲಾಯಿಸಲಿಲ್ಲ.ಈಗಲೂ ಅಕ್ರಮ ಮತದಾರರ ಪಟ್ಟಿಗ ಬಗ್ಗೆ ಅಥವಾ 150 ಜಿಲ್ಲಾಧಿಕಾರಿಗಳಿಗೆ ಕರೆ ಮಾಡಲಾಗಿದೆ ಎಂದು ಮಾತನಾಡುತ್ತಿದ್ದಾರೆ. ಸುಳ್ಳು ವದಂತಿಯನ್ನು ಸರಿಪಡಿಸಲು ನಾವು ಹೋರಾಡುವುದು ಅಗತ್ಯವಾಗಿದೆ” ಎಂದು ರಾಜೀವ್‌ ಕುಮಾರ್‌ ಹೇಳಿದರು.

2024ರ ಲೋಕಸಭಾ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ವಿಚಾರವಾಗಿ 495 ದೂರುಗಳನ್ನು ಪರಿಹರಿಸಲಾಗಿದೆ. ಡೀಫ್‌ ಪೇಕ್‌ ಹಾಗೂ ಎಐ ನಿರ್ಮಿತ ಕೃತಕ ವಿಷಯಗಳ ಬೆದರಿಕೆಗಳನ್ನು ಚುನಾವಣಾ ಆಯೋಗವು ಯಶಸ್ವಿಯಾಗಿ ನಿಯಂತ್ರಿಸಿದೆ ಎಂದು ಆಯುಕ್ತರು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...