TMCಯ 20 ಬಂಡಾಯ ಸಂಸದರಿಗೆ ಲೋಕಸಭೆ ಕಾರ್ಯಾಲಯದಿಂದ ನೋಟಿಸ್

Date:

ಅನರ್ಹತೆ ಅರ್ಜಿಗಳ ಕುರಿತು ತ್ವರಿತವಾಗಿ ತೀರ್ಮಾನ ಕೈಗೊಳ್ಳುವಂತೆ ಕೋರಿ TMC ನಾಯಕ ಅಭಿಷೇಕ್ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದ ಬೆನ್ನಲ್ಲೇ, 20 ಬಂಡಾಯ ತೃಣಮೂಲ ಕಾಂಗ್ರೆಸ್ (TMC) ಸಂಸದರಿಗೆ ಲೋಕಸಭೆ ಕಾರ್ಯಾಲಯ ನೋಟಿಸ್ ಜಾರಿ ಮಾಡಿದೆ. ಏಳು ದಿನಗಳೊಳಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

- Advertisement -

ಆ.25ರಂದು ಜಾರಿಗೊಂಡಿರುವ ಈ ನೋಟಿಸ್‌ಗಳನ್ನು 1985ರ ಪಕ್ಷಾಂತರದ ಆಧಾರದ ಮೇಲೆ ಲೋಕಸಭಾ ಸದಸ್ಯರ ಅನರ್ಹತೆ ನಿಯಮಗಳ ನಿಯಮ 6ರ ಅಡಿಯಲ್ಲಿ ನೀಡಲಾಗಿದೆ. ಜತೆಗೆ, ಈ 20 ಸಂಸದರ ಅನರ್ಹತೆಗೆ ಆಗ್ರಹಿಸಿ ಅಭಿಷೇಕ್ ಬ್ಯಾನರ್ಜಿ ಜೂನ್ 18ರಂದು ಸಲ್ಲಿಸಿದ್ದ ಅರ್ಜಿಗಳ ಪ್ರತಿಗಳನ್ನೂ ನೋಟಿಸ್‌ಗೆ ಲಗತ್ತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಟಿಎಂಸಿ ಸಂಸದೀಯ ಪಕ್ಷದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯದ ನಡುವೆಯೇ ಈ ಬೆಳವಣಿಗೆ ನಡೆದಿದೆ. 20 ಸಂಸದರು ತ್ರಿಪುರಾ ಮೂಲದ ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ (NCPI)ಗೆ ಸೇರ್ಪಡೆಯಾಗಿರುವುದಾಗಿ ಅಥವಾ ಆ ಪಕ್ಷದೊಂದಿಗೆ ವಿಲೀನಗೊಂಡಿರುವುದಾಗಿ ಘೋಷಿಸಿದ್ದರು. ಅಲ್ಲದೆ, ಲೋಕಸಭೆಯಲ್ಲಿ ತಮ್ಮನ್ನು ಪ್ರತ್ಯೇಕ ಗುಂಪಾಗಿ ಗುರುತಿಸುವಂತೆ ಮನವಿ ಮಾಡಿದ್ದರು. ಆ ಬಳಿಕ ಸಂಸತ್ತಿನಲ್ಲಿ ಈ ಸಂಸದರನ್ನು NCPI ಗುಂಪಾಗಿ ಪರಿಗಣಿಸಲಾಗುತ್ತಿದ್ದು, NDA ಸಂಸದೀಯ ಚಟುವಟಿಕೆಗಳಲ್ಲೂ ಅವರು ಭಾಗವಹಿಸುತ್ತಿದ್ದಾರೆ.

ಟಿಎಂಸಿ ಮಾತ್ರ, ಈ ಸಂಸದರು ಪಕ್ಷದ ಚಿಹ್ನೆಯಡಿ ಚುನಾವಣೆಯಲ್ಲಿ ಗೆದ್ದಿದ್ದು, ಮತ್ತೊಂದು ರಾಜಕೀಯ ಸಂಘಟನೆಯೊಂದಿಗೆ ಕೈಜೋಡಿಸಿರುವುದು ಪಕ್ಷದ ಸದಸ್ಯತ್ವವನ್ನು ಸ್ವಯಂಪ್ರೇರಿತವಾಗಿ ತ್ಯಜಿಸಿದಂತಾಗುತ್ತದೆ. ಹೀಗಾಗಿ, ಪಕ್ಷಾಂತರ ವಿರೋಧಿ ಕಾನೂನಿನಡಿ ಅವರು ಅನರ್ಹರಾಗುತ್ತಾರೆ ಎಂದು ವಾದಿಸಿದೆ. ಆದರೆ ಬಂಡಾಯ ಸಂಸದರು ತಮ್ಮ ನಡೆಯು ಮಾನ್ಯ ವಿಲೀನಕ್ಕೆ ಒಳಪಡುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ಮಂಗಳವಾರ ಸುಪ್ರೀಂ ಕೋರ್ಟ್ ಅಭಿಷೇಕ್ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿತ್ತು. ಅನರ್ಹತೆ ಅರ್ಜಿಗಳ ಕುರಿತು ತೀರ್ಮಾನ ಕೈಗೊಳ್ಳುವಲ್ಲಿ ವಿಳಂಬವಾಗುತ್ತಿದೆ ಎಂದು ಅವರು ಅರ್ಜಿಯಲ್ಲಿ ಪ್ರಶ್ನಿಸಿದ್ದರು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು 20 ಸಂಸದರಿಗೆ ನೋಟಿಸ್ ಜಾರಿ ಮಾಡಿತ್ತು.

ಲೋಕಸಭೆ ಸ್ಪೀಕರ್ ಅಥವಾ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ನೀಡುವ ಅಗತ್ಯವಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು. ತಾವು ಅವರ ಪರವಾಗಿ ಹಾಜರಾಗುತ್ತಿರುವುದಾಗಿ ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು. ವಿಚಾರಣೆ ವೇಳೆ, “ಇದು ನೋಟಿಸ್ ನೀಡುವ ಪ್ರಶ್ನೆಯಲ್ಲ, ನಿಗದಿತ ಕಾಲಮಿತಿಯೊಳಗೆ ವಿಚಾರಣಾ ಪ್ರಕ್ರಿಯೆ ಪೂರ್ಣಗೊಳಿಸುವ ಪ್ರಶ್ನೆ” ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತು.

ಇದನ್ನೂ ಓದಿ: ಇಡಿ ಸಮನ್ಸ್ ಬೆನ್ನಲ್ಲೇ ಮಮತಾ ಬಣ ತೊರೆದು ಟಿಎಂಸಿ ಬಂಡಾಯ ಬಣ ಸೇರಿದ ಮದನ್ ಮಿತ್ರಾ!

20 ಸಂಸದರ ವಿರುದ್ಧ ಅಭಿಷೇಕ್ ಬ್ಯಾನರ್ಜಿ ಪ್ರತ್ಯೇಕ ಅನರ್ಹತೆ ಅರ್ಜಿಗಳನ್ನು ಸಲ್ಲಿಸಿದ್ದರು. ಬಳಿಕ ಅವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಮನವಿ ಮಾಡಿದ್ದರು. ಜುಲೈ 27ರಂದು ಲಿಖಿತವಾಗಿ ನೆನಪೋಲೆ ಸಲ್ಲಿಸಿದ್ದ ಅವರು, ಆಗಸ್ಟ್ 12ರಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು.

ನೋಟಿಸ್ ಪಡೆದ 20 ಸಂಸದರು

ಕಾಕೋಲಿ ಘೋಷ್ ದಸ್ತಿದಾರ್, ಸುದೀಪ್ ಬಂಡೋಪಾಧ್ಯಾಯ, ಶತಾಬ್ದಿ ರಾಯ್, ಪ್ರಸೂನ್ ಬ್ಯಾನರ್ಜಿ, ರಚನಾ ಬ್ಯಾನರ್ಜಿ, ಜಗದೀಶ್ ಚಂದ್ರ ಬರ್ಮಾ ಬಸುನಿಯಾ, ಪಾರ್ಥ ಭೌಮಿಕ್, ಅರೂಪ್ ಚಕ್ರವರ್ತಿ, ಅಧಿಕಾರಿ ದೀಪಕ್ ದೇವ್, ಸಯಾನಿ ಘೋಷ್, ಬಾಪಿ ಹಲ್ದಾರ್, ಮೊಹಮ್ಮದ್ ಅಬು ತಾಹೇರ್ ಖಾನ್, ಕಾಳಿಪದ ಸರೇನ್ ಖೇರ್ವಾಲ್, ಅಸಿತ್ ಕುಮಾರ್ ಮಾಲ್, ಜೂನ್ ಮಾಲಿಯಾ, ಮಿತಾಲಿ ಬಾಗ್, ಖಲೀಲೂರ್ ರಹಮಾನ್, ಮಾಲಾ ರಾಯ್, ಶರ್ಮಿಳಾ ಸರ್ಕಾರ್ ಹಾಗೂ ಯೂಸುಫ್ ಪಠಾಣ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...