ನೀಟ್ ಮರುಪರೀಕ್ಷೆ: ಅಭ್ಯರ್ಥಿಗಳಿಗೆ ವಾಟ್ಸಾಪ್ ಮೂಲಕ ಅಪ್‌ಡೇಟ್ ಕಳುಹಿಸಲು ಪ್ರಾರಂಭಿಸಿದ ಎನ್‌ಟಿಎ

Date:

ಜೂನ್ 21ರಂದು ನೀಟ್-ಯುಜಿ ಮರುಪರೀಕ್ಷೆ ನಡೆಯಲಿದೆ. ಇದಕ್ಕೂ ಮುನ್ನ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ದೇಶ ಮತ್ತು ವಿದೇಶಗಳಲ್ಲಿರುವ 22 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಪರೀಕ್ಷೆಗೆ ಸಂಬಂಧಿಸಿದ ಅಪ್‌ಡೇಟ್‌ಗಳನ್ನು ಮತ್ತು ಮರುಪರೀಕ್ಷಾ ಕೇಂದ್ರದ ಮಾಹಿತಿಯನ್ನು ನೇರವಾಗಿ ಕಳುಹಿಸಲು ವಾಟ್ಸಾಪ್ ಅನ್ನು ಬಳಸಲು ಪ್ರಾರಂಭಿಸಿದೆ.

- Advertisement -

ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳು ಬೆಳಕಿಗೆ ಬಂದ ಬಳಿಕ ಮೇ 3ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯನ್ನು ಮೇ 12ರಂದು ಅಧಿಕೃತವಾಗಿ ರದ್ದುಗೊಳಿಸಲಾಗಿದೆ. ಜೂನ್ 21ರಂದು ಮರುಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಮುಂಚಿತವಾಗಿ ಐದು ದಿನಗಳವರೆಗೆ ಟೆಲಿಗ್ರಾಮ್ ತಾತ್ಕಾಲಿಕ ನಿಷೇಧಿಸಲಾಗಿದೆ. ಇದೀಗ ವಾಟ್ಸಾಪ್ ಮೂಲಕ ಅಪ್‌ಡೇಟ್ ನೀಡಲು ಎನ್‌ಟಿಎ ಆರಂಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನೂ ಓದಿ: BREAKING NEWS | ಟೆಲಿಗ್ರಾಮ್ ತಾತ್ಕಾಲಿಕ ನಿಷೇಧ ನಿರ್ಧಾರ ಎತ್ತಿಹಿಡಿದ ದೆಹಲಿ ಹೈಕೋರ್ಟ್

+91 78279 80287 ಅಂಕಿಯಿಂದ ಬರುವ ಸಂದೇಶಗಳು ಅಧಿಕೃತವಾಗಿದೆ. ಈ ವಾಟ್ಸಾಪ್ ಖಾತೆಯಿಂದಲೇ ಸಂದೇಶ ಬಂದಿದೆಯೇ ಎಂದು ಪರಿಶೀಲಿಸಬೇಕು ಎಂದು ಎನ್‌ಟಿಎ ಅಭ್ಯರ್ಥಿಗಳಿಗೆ ತಿಳಿಸಿದೆ.

ಅಭ್ಯರ್ಥಿಗಳಿಗೆ ನೀಲಿ ಪರಿಶೀಲನಾ ಟಿಕ್ ಮತ್ತು “ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ” ಖಾತೆಯ ಹೆಸರನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ. ನೀಲಿ ಟಿಕ್ ಇಲ್ಲದ ಯಾವುದೇ ಸಂಖ್ಯೆಯು ಏಜೆನ್ಸಿಯ ಹೆಸರನ್ನು ಬಳಸುತ್ತಿದ್ದರೂ ಸಹ, ಅದನ್ನು ಅಧಿಕೃತ ಎನ್‌ಟಿಎ ಖಾತೆ ಎಂದು ಪರಿಗಣಿಸಬಾರದು ಎಂದು ಸಂಸ್ಥೆ ಎಚ್ಚರಿಸಿದೆ.

“ನಾವು ನಿಮ್ಮ ಬಳಿ ಯಾವುದೇ ಪ್ರಶ್ನೆ ಕೇಳುವುದಿಲ್ಲ, ಒಟಿಪಿ ಅಥವಾ ವೈಯಕ್ತಿಕ ವಿವರಗಳನ್ನು ಕೇಳುವುದಿಲ್ಲ ಅಥವಾ ಯಾವುದೇ ಪಾವತಿ ಮಾಡಲು ಹೇಳಲ್ಲ. ಈ ರೀತಿ ಯಾವುದೇ ಮಾಹಿತಿ ಕೇಳಿದರೆ ಅದು ಮೋಸ ಎಂದು ತಿಳಿಯಿರಿ” ಎಂದು ಎನ್‌ಟಿಎ ಸ್ಪಷ್ಟಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಜೊತೆ ಮಾತುಕತೆಗೆ ಇರಾನ್‌‌ನ 7 ಷರತ್ತು: ನಿರಾಕರಿಸಿದರೆ ‘ನಿರ್ಣಾಯಕ ಯುದ್ಧ’ದ ಎಚ್ಚರಿಕೆ

ಪ್ರಸ್ತುತ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ಅಮೆರಿಕ-ಇರಾನ್ ನಡುವೆ ಸಂಧಾನ ಮಾತುಕತೆ ಆರಂಭಿಸಲು...

ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025: ದೇಶದಲ್ಲೇ ಮೂರನೇ ಸ್ಥಾನಕ್ಕೆ ಜಿಗಿದ ಕರ್ನಾಟಕ!

ದೇಶದಲ್ಲಿ ಎಲೆಕ್ಟ್ರಿಕ್ ವಾಹನ (EV) ಬಳಕೆಯ ವಿಸ್ತರಣೆ ಮತ್ತು ಅಗತ್ಯ ಮೂಲಸೌಕರ್ಯ...

ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ: ಫೋಟೋ ಪ್ರದರ್ಶಿಸಿ ಹೇಗೆಂದು ವಿವರಿಸಿದ ರಾಹುಲ್ ಗಾಂಧಿ

"ದೇಶವನ್ನು ನಿರ್ಮಿಸಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂದಿನ ವ್ಯವಸ್ಥೆಯು ಧಮನ ಮಾಡುತ್ತಿದ್ದು, ಇಡೀ...