ನೀಟ್ ಅಭ್ಯರ್ಥಿಗಳಿಗೆ ಹೆಚ್ಚುವರಿ ಸಮಯ; ಯಾರು ಅರ್ಹರು?- NTA ಸ್ಪಷ್ಟನೆ

Date:

ನೀಟ್ (NEET UG) ಅಭ್ಯರ್ಥಿಗಳಿಗೆ ಹೆಚ್ಚುವರಿ ಸಮಯ ನೀಡುವ ಕುರಿತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸ್ಪಷ್ಟನೆ ನೀಡಿದೆ. ಪರೀಕ್ಷಾ ಪ್ರಕ್ರಿಯೆಯನ್ನು ಸುಲಭಗೊಳಿಸಲು ಮತ್ತು ವಿದ್ಯಾರ್ಥಿಗಳ ಮೇಲಿನ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಹೆಚ್ಚುವರಿ ಸಮಯ ನೀಡಬೇಕು ಎಂಬ ಆಗ್ರಹ ಕೇಳಿಬಂದಿತ್ತು.

- Advertisement -

ಈ ನಿಟ್ಟಿನಲ್ಲಿ ಈ ಬಾರಿಯ ಮರುಪರೀಕ್ಷೆಯಲ್ಲಿ ಎಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 15 ನಿಮಿಷಗಳ ಸಮಯವನ್ನು ನೀಡಲಾಗಿದೆ. ಈ ಹಿಂದೆ ಪರೀಕ್ಷಾ ಅವಧಿ 3 ಗಂಟೆ ಇರುತ್ತಿತ್ತು. ಅಂದರೆ 180 ನಿಮಿಷ. ಆದರೆ ಈಗ ಹೆಚ್ಚುವರಿಯಾಗಿ 15 ನಿಮಿಷ ಸಿಗಲಿದೆ. ಅಂದರೆ 3 ಗಂಟೆ 15 ನಿಮಿಷಗಳಿಗೆ (195 ನಿಮಿಷಗಳು) ಹೆಚ್ಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನೂ ಓದಿ: ನೀಟ್ ಮರುಪರೀಕ್ಷೆ: ಅಭ್ಯರ್ಥಿಗಳಿಗೆ ವಾಟ್ಸಾಪ್ ಮೂಲಕ ಅಪ್‌ಡೇಟ್ ಕಳುಹಿಸಲು ಪ್ರಾರಂಭಿಸಿದ ಎನ್‌ಟಿಎ

ಮಧ್ಯಾಹ್ನ 2 ಗಂಟೆಯಿಂದ ಸಂಜೆ 5:15ರವರೆಗೆ ಪರೀಕ್ಷೆ ನಡೆಯಲಿದೆ. ಈ ಹಿಂದೆ ಬಯೋಮೆಟ್ರಿಕ್ ವೆರಿಫಿಕೇಶನ್, ಅಟೆಂಡೆನ್ಸ್ ಶೀಟ್‌ಗೆ ಸಹಿ ಮಾಡುವುದು ಮತ್ತು ಇನ್ವಿಜಿಲೇಟರ್‌ಗಳ ತಪಾಸಣೆ ಮೊದಲಾದವುಗಳಿಗೆ ಸಮಯ ತಗುಲುತ್ತಿತ್ತು. ಆದರೆ ಈ ಪ್ರಕ್ರಿಯೆಗಳಿಗೆ ವಿದ್ಯಾರ್ಥಿಗಳ ಪರೀಕ್ಷಾ ಸಮಯ ವ್ಯರ್ಥವಾಗಬಾರದು ಎಂಬ ಕಾರಣಕ್ಕೆ 15 ನಿಮಿಷಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗಿದೆ.

ಇನ್ನು ವಿಶೇಷ ಚೇತನ (PwD) ಅಭ್ಯರ್ಥಿಗಳಿಗೆ ನಿಯಮಾವಳಿಗಳ ಪ್ರಕಾರ 1 ಗಂಟೆ (60 ನಿಮಿಷಗಳು) ಹೆಚ್ಚುವರಿ ಸಮಯವನ್ನು ನೀಡಲಾಗುತ್ತದೆ. ಅಧಿಕೃತ ನಿಯಮಾವಳಿಗಳ ಪ್ರಕಾರ ಅರ್ಹರಾಗಿರುವ ಮತ್ತು ತಮ್ಮ ಪ್ರವೇಶ ಪತ್ರದಲ್ಲಿ “Eligibility for Compensatory Time: Yes” ಎಂದು ಮುದ್ರಿತವಾಗಿರುವ PwD/PwBD ಅಭ್ಯರ್ಥಿಗಳಿಗೆ ಮಾತ್ರ ಈ ವಿಶೇಷ ಹೆಚ್ಚುವರಿ ಸಮಯ ಸಿಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025: ದೇಶದಲ್ಲೇ ಮೂರನೇ ಸ್ಥಾನಕ್ಕೆ ಜಿಗಿದ ಕರ್ನಾಟಕ!

ದೇಶದಲ್ಲಿ ಎಲೆಕ್ಟ್ರಿಕ್ ವಾಹನ (EV) ಬಳಕೆಯ ವಿಸ್ತರಣೆ ಮತ್ತು ಅಗತ್ಯ ಮೂಲಸೌಕರ್ಯ...

ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ: ಫೋಟೋ ಪ್ರದರ್ಶಿಸಿ ಹೇಗೆಂದು ವಿವರಿಸಿದ ರಾಹುಲ್ ಗಾಂಧಿ

"ದೇಶವನ್ನು ನಿರ್ಮಿಸಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂದಿನ ವ್ಯವಸ್ಥೆಯು ಧಮನ ಮಾಡುತ್ತಿದ್ದು, ಇಡೀ...

ಔರಾದ್‌ ತಾಲೂಕು ʼಬರʼ ಘೋಷಣೆಗಾಗಿ ಬೀದಿಗಿಳಿದ ರೈತರು, 10 ದಿನ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ

ಬೀದರ್‌ ಜಿಲ್ಲೆಯ ಔರಾದ (ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಘೋಷಿಸಿ ರೈತರಿಗೆ...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ ದಿಯಾ’ ಅರ್ಪಣೆ!

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು...