ಕೊಲ್ಕತ್ತಾದ ಆಸ್ಪತ್ರೆಯ ಶೌಚಾಲಯದಲ್ಲಿ ನರ್ಸ್ ಶವ ಪತ್ತೆ; ಅರಿವಳಿಕೆ ಮದ್ದು, ಸಿರಿಂಜ್ ವಶ

Date:

ಕೊಲ್ಕತ್ತಾದ ಸರ್ಕಾರಿ ಸ್ವಾಮ್ಯದ ಎನ್.ಆರ್.ಎಸ್ ಆಸ್ಪತ್ರೆಯ ಶೌಚಾಲಯವೊಂದರಲ್ಲಿ 30 ವರ್ಷದ ನರ್ಸ್ ಶವವಾಗಿ ಪತ್ತೆಯಾಗಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಸಾವಿಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಪೊಲೀಸರು ಗುರುವಾರ ಬೆಳಿಗ್ಗೆ ತಿಳಿಸಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಪಶ್ಚಿಮ ಬಂಗಾಳದ ಆರೋಗ್ಯ ಸಚಿವ ಶರದ್ವತ್ ಮುಖರ್ಜಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ದೌಡಾಯಿಸಿ ಪರಿಶೀಲನೆ ನಡೆಸಿದರು.

- Advertisement -

“ಬುಧವಾರ ರಾತ್ರಿ ಕರ್ತವ್ಯದಲ್ಲಿದ್ದ ನರ್ಸ್ ರಾತ್ರಿ 9:40ರ ಸುಮಾರಿಗೆ ನಾಪತ್ತೆಯಾಗಿದ್ದರು. ಆಸ್ಪತ್ರೆಯ ಸಿಬ್ಬಂದಿ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾಗ, ಶೌಚಾಲಯವೊಂದರ ಬಾಗಿಲು ದೀರ್ಘಕಾಲದಿಂದ ಒಳಗಿನಿಂದ ಲಾಕ್ ಆಗಿರುವುದು ಗಮನಕ್ಕೆ ಬಂದಿದೆ. ಎಷ್ಟೇ ಕೂಗಿದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬರದಿದ್ದಾಗ, ಬಾಗಿಲು ಒಡೆದು ನೋಡಲಾಗಿದೆ. ಆಗ ನರ್ಸ್ ಶವವಾಗಿ ಬಿದ್ದಿರುವುದು ಕಂಡುಬಂದಿದೆ,” ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸುಮಾರು 150 ವರ್ಷಗಳ ಹಳೆಯದಾದ ಈ ಆಸ್ಪತ್ರೆಯ ಹೆರಿಗೆ ವಾರ್ಡ್‌ನ ಮೊದಲ ಮಹಡಿಯಲ್ಲಿ ಈ ಘಟನೆ ನಡೆದಿದ್ದು, ಆ ಪ್ರದೇಶವನ್ನು ಪೊಲೀಸರು ಸೀಲ್ ಮಾಡಿದ್ದಾರೆ. ಮೃತದೇಹದ ಬಳಿ ಖಾಲಿಯಾದ ಅರಿವಳಿಕೆ ಇಂಜೆಕ್ಷನ್‌ನ ಬಾಟಲಿಗಳು ಹಾಗೂ ಸಿರಿಂಜ್ ಪತ್ತೆಯಾಗಿವೆ. “ವೈದ್ಯರು ಪರೀಕ್ಷಿಸಿ ಆಕೆ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಸ್ಥಳದಲ್ಲಿ ಯಾವುದೇ ಡೆತ್‌ನೋಟ್ (ಆತ್ಮಹತ್ಯಾ ಪತ್ರ) ಪತ್ತೆಯಾಗಿಲ್ಲ. ಕರೆಗಳ ವಿವರಗಳನ್ನು ಪರಿಶೀಲಿಸಲು ನರ್ಸ್‌ನ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಆಕೆಯ ಪತಿಗೆ ವಿಚಾರಣೆಗಾಗಿ ಆಸ್ಪತ್ರೆಗೆ ಆಗಮಿಸಲು ಸೂಚಿಸಲಾಗಿದೆ,” ಎಂದು ಪೊಲೀಸರು ವಿವರಿಸಿದ್ದಾರೆ.

ಮೂಲತಃ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯವರಾದ ಈ ನರ್ಸ್, ಕಳೆದ ಮಾರ್ಚ್ ತಿಂಗಳಲ್ಲಷ್ಟೇ ದೆಹಲಿ ಮೂಲದ ಯುವಕನೊಂದಿಗೆ ವಿವಾಹವಾಗಿದ್ದರು. ಸದ್ಯ ಕೊಲ್ಕತ್ತಾ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಆಕೆ ತನ್ನ ಪತಿಯೊಂದಿಗೆ ವಾಸವಿದ್ದರು ಎಂದು ಆಸ್ಪತ್ರೆಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...