ಶಾಂತಿ ಮುಚ್ಚಳಿಕೆ ನೋಟಿಸ್‌ಗೆ ಆಕ್ಷೇಪ: ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿ ನಾಯಕಿ ನೇಹಾ ಬೋರಾ

Date:

ಶಾಂತಿ ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ₹10,000 ಮೊತ್ತದ ‘ಶಾಂತಿ ಮುಚ್ಚಳಿಕೆ’ (Peace Bond) ಮತ್ತು ಶ್ಯೂರಿಟಿ ನೀಡುವಂತೆ ದೆಹಲಿ ಪೋಲೀಸರು ನೀಡಿರುವ ನೋಟಿಸ್ ಅನ್ನು ಪ್ರಶ್ನಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ (AISA) ರಾಷ್ಟ್ರೀಯ ಅಧ್ಯಕ್ಷೆ, ವಿದ್ಯಾರ್ಥಿ ನಾಯಕಿ ನೇಹಾ ಬೋರಾ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

- Advertisement -

ದೆಹಲಿ ಪೋಲೀಸರ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಹೊರಡಿಸಿರುವ ಈ ನೋಟಿಸ್ ಸಂವಿಧಾನ ಬಾಹಿರವಾಗಿದ್ದು, ಪ್ರಜಾಸತ್ತಾತ್ಮಕವಾಗಿ ಪ್ರತಿಭಟಿಸುವ ಹಕ್ಕನ್ನು ಹತ್ತಿಕ್ಕುವ ಉದ್ದೇಶವನ್ನು ಹೊಂದಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಈ ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆ ನೇಹಾ ಬೋರಾ ಅವರ ಪರ ವಕೀಲರ ತಂಡ ಹೈಕೋರ್ಟ್‌ಗೆ ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿದ್ದರಾಮಯ್ಯ ನಿರ್ಗಮನ ‘ಅಹಿಂದ’ ಮರಕ್ಕೆ ಕೊಡಲಿ ಏಟು: ಸಮುದಾಯದ...

ಒಂದು ಕಾಲದಲ್ಲಿ ರಾಜ್ಯದ ರಾಜಕಾರಣದ ಗತಿಯನ್ನೇ ಬದಲಿಸಿದ್ದ 'ಅಹಿಂದ' ಚಳವಳಿ ಇಂದು ನಾವಿಕನಿಲ್ಲದ ದೋಣಿಯಾಗಿದೆ. ಸಿದ್ದರಾಮಯ್ಯ ನಿರ್ಗಮನ, ಸ್ಟಿಂಗ್ ಆಪರೇಷನ್ ಆರೋಪ, ಸತೀಶ್ ಜಾರಕಿಹೊಳಿ ಹಿಂದಕ್ಕೆ ಮತ್ತು ಕೆ.ಎನ್. ರಾಜಣ್ಣನವರ ಅನಿಶ್ಚಿತತೆ… ಈ...

ಅಲ್ಬೇನಿಯಾದಲ್ಲೇಕೆ ಜನಾಕ್ರೋಶ ಭುಗಿಲೆದ್ದಿದೆ? ಸುಪ್ರೀಂ ಕೋರ್ಟ್, ಪಾರ್ಲಿಮೆಂಟನ್ನು ಸುಟ್ಟದ್ದು...

ಅಲ್ಬೇನಿಯಾ ರಾಜಧಾನಿ ತಿರಾನಾದ ಬೀದಿಗಳಿಂದ ಜಾಗತಿಕ ರಾಜಧಾನಿಗಳವರೆಗೆ… ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ಶಿಕ್ಷಣದ ಬಿಕ್ಕಟ್ಟಿನ ವಿರುದ್ಧ ಯುವ ಸಮೂಹ ಬೀದಿಗಿಳಿದಿದೆ. ಪ್ರಧಾನಿ ಎಡಿ ರಾಮಾ ಸರ್ಕಾರದ ವಿರುದ್ಧ ಅಲ್ಬೇನಿಯಾದಲ್ಲಿ ಭುಗಿಲೆದ್ದ ಜನಾಕ್ರೋಶ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಇದನ್ನೂ ಓದಿ: ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಳ್ಳುವ ಮೂಲಕ ಚುನಾವಣಾ ಅಕ್ರಮಗಳನ್ನು ನಡೆಸಿದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ಆಗ್ರಹಿಸಿದ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟಿಸಿದ ಹಲವು ಮಂದಿಯ ಬಂಧನವಾಗಿದೆ. ಸಿಜೆಪಿ ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಾಂಕಾ ಅವರನ್ನೂ ಬಂಧಿಸಿ, ಶಾಂತಿ ಕಾಪಾಡುವುದಾಗಿ ಸಹಿ ಹಾಕಿಸಿ ಬಿಡುಗಡೆ ಮಾಡಲಾಗಿತ್ತು. ಅದರಂತೆ ಶಾಂತಿಯುತವಾಗಿಯೇ ತ್ರಿವರ್ಣ ಧ್ವಜ ಹಿಡಿದು ಪ್ರತಿಭಟಿಸಿದ ಈ ಇಬ್ಬರೂ ನಾಯಕರನ್ನು ಬಂಧಿಸಲಾಗಿದೆ, ಇನ್ನೂ ಬಿಡುಗಡೆ ಮಾಡಲಾಗಿಲ್ಲ.

ಇವೆಲ್ಲವುದರ ವಿರುದ್ದವಾಗಿ ಇತ್ತೀಚೆಗೆ ಮಂಡಿ ಹೌಸ್ ಮತ್ತು ಕನ್ನಾಟ್ ಪ್ಲೇಸ್ ಭಾಗದಲ್ಲಿ ‘ಲೆಹರಾ ದೊ ತಿರಂಗಾ’ ಮಾರ್ಚ್ ನಡೆಸಲಾಗಿದೆ. ಈ ಪ್ರತಿಭಟನೆಯ ಸಮಯದಲ್ಲಿ ದೆಹಲಿ ಪೋಲೀಸರು ನೇಹಾ ಬೋರಾ ಅವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದರು. ದೆಹಲಿ ಪೋಲೀಸ್ ಕಾಯ್ದೆಯ ಸೆಕ್ಷನ್ 65ರ ಅಡಿಯಲ್ಲಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಅವರನ್ನು ಮರುದಿನ ಬೆಳಿಗ್ಗೆ ಬಿಡುಗಡೆ ಮಾಡಲಾಗಿತ್ತು.

ಆದಾಗ್ಯೂ, ತನಿಖೆ ಮತ್ತು ವಿಚಾರಣೆ ಮುಗಿಯುವವರೆಗೆ ಶಾಂತಿ ಕಾಪಾಡಲು ಸೆಕ್ಷನ್ 126ರ ಅಡಿಯಲ್ಲಿ ಮುಚ್ಚಳಿಕೆ ಪತ್ರಕ್ಕೆ ಸಹಿ ಹಾಕುವಂತೆ ಸೂಚಿಸಿ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರು. ತಮಗೆ ಕಿರುಕುಳ ನೀಡುವ ಉದ್ದೇಶದಿಂದಲೇ ಈ ನೋಟಿಸ್ ನೀಡಲಾಗಿದೆ ಎಂದು ಬೋರಾ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲ್ಬೇನಿಯಾದಲ್ಲೇಕೆ ಜನಾಕ್ರೋಶ ಭುಗಿಲೆದ್ದಿದೆ? ಸುಪ್ರೀಂ ಕೋರ್ಟ್, ಪಾರ್ಲಿಮೆಂಟನ್ನು ಸುಟ್ಟದ್ದು ಸರಿಯೇ?

ಅಲ್ಬೇನಿಯಾ ರಾಜಧಾನಿ ತಿರಾನಾದ ಬೀದಿಗಳಿಂದ ಜಾಗತಿಕ ರಾಜಧಾನಿಗಳವರೆಗೆ… ಬೆಲೆ ಏರಿಕೆ, ಭ್ರಷ್ಟಾಚಾರ...

SIR ಅಕ್ರಮ | ‘ನಾವೇ ಸತ್ತಿದ್ದೇವೆ’ ಎಂದು 37 ಮಂದಿ ಹೆಸರಿನಲ್ಲಿ ಫಾರ್ಮ್‌-7 ಸಲ್ಲಿಕೆ; ಪರಸ್ಪರರು ಸತ್ತಿದ್ದಾರೆಂದು ಘೋಷಿಸಿಕೊಂಡಿವೆ 334 ಜೋಡಿಗಳು!

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ (SIR) ಪ್ರಕ್ರಿಯೆಯಲ್ಲಿ ಮತ್ತೊಂದು ಆಘಾತಕಾರಿ ಮತ್ತು ಬೆಚ್ಚಿಬೀಳಿಸುವ...

ಮುಂಬೈ | ಸಾಹಿಲ್ ವಾಕೋಡೆ ಸಾವು: ಮಗನ ತಿಥಿಯಂದೇ ಪೋಷಕರು, ವಿದ್ಯಾರ್ಥಿಗಳ ಬಂಧನ

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ನಿಧನವಾಗಿ ಒಂದು ತಿಂಗಳ...

ರಾಜ್ಯ ಸಿಎಂ ಗಾದಿಗೆ ಕಣ್ಣಿಟ್ಟ ಎಚ್‌ಡಿಕೆ; ಬಿಹಾರದ ನಿತೀಶ್‌ ಹಾದಿಯಲ್ಲಿ ಕುಮಾರಸ್ವಾಮಿ?

ರಾಜ್ಯದ ಕಾಂಗ್ರೆಸ್‌ ಸರ್ಕಾರದ ದುರಾಡಳಿತಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. 2028ರಲ್ಲಿ ಕರ್ನಾಟಕದಲ್ಲಿ...