ಅಕ್ಟೋಬರ್ 10ರ ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ಧರಣಿಯಲ್ಲಿ ಮಮತಾ ಬ್ಯಾನರ್ಜಿ ಭಾಗಿ ಸಾಧ್ಯತೆ

Date:

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಆಕ್ಟೋಬರ್ 10ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಧಿನಾಯಕಿ ಮಮತಾ ಬ್ಯಾನರ್ಜಿ ಭಾಗವಹಿಸುವ ಸಾಧ್ಯತೆಯಿದೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಚುನಾವಣಾ ಆಯೋಗದ ನಿರ್ಧಾರಗಳು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಉಂಟಾಗಿರುವ ಅಕ್ರಮಗಳನ್ನು ಖಂಡಿಸಿ ನಡೆಯುತ್ತಿರುವ ಈ ಹೋರಾಟಕ್ಕೆ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಹಾಗೆಯೇ ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ ಈ ಧರಣಿ ಸತ್ಯಾಗ್ರಹದಲ್ಲಿ ತಾವು ನೇರವಾಗಿ ಭಾಗವಹಿಸುವ ಕುರಿತು ಶೀಘ್ರದಲ್ಲೇ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ಇದನ್ನೂ ಓದಿ: ಸಿಇಸಿ ಗ್ಯಾನೇಶ್ ದೇಶದ್ರೋಹಿ; ಕೂಡಲೇ ರಾಜೀನಾಮೆ ನೀಡಲಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಸಿಜೆಪಿ ಮುಖ್ಯಸ್ಥ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ‘ಜಂತರ್ ಮಂತರ್ 2.0’ ಹೆಸರಿನಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಮತ್ತು ಹಾಲಿ ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ಹುದ್ದೆಗೆ ರಾಜೀನಾಮೆ ನೀಡಬೇಕು ಎಂಬುದು ಈ ಹೋರಾಟಗಾರರ ಮುಖ್ಯ ಆಗ್ರಹವಾಗಿದೆ.

ದೆಹಲಿ ತಲುಪಲಿರುವ ಮಮತಾ ಬ್ಯಾನರ್ಜಿ ಅವರು ರಾಷ್ಟ್ರಪತಿ ಭವನದ ಭೇಟಿಗೂ ಸಮಯ ಕೋರಿದ್ದು, ವಿಪಕ್ಷಗಳ ಪ್ರಮುಖ ನಾಯಕರೊಂದಿಗೆ ಚರ್ಚಿಸಿದ ನಂತರ ಪ್ರತಿಭಟನಾ ಸ್ಥಳಕ್ಕೆ ತೆರಳುವ ನಿರೀಕ್ಷೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಆಯಿಷಾ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...